ಖಾಸಗಿ ಸಂಭಾಷಣೆ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ವಿರುದ್ಧ ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Date:

ಐಪಿಎಲ್‌ ಬ್ರಾಡ್‌ಕಾಸ್ಟರ್‌ ಸ್ಟಾರ್‌ ಸ್ಪೋರ್ಟ್ಸ್‌ ವಿರುದ್ಧ ಆಕ್ರೋಶ ಹೊರಹಾಕಿರುವ ಟೀಮ್ ಇಂಡಿಯಾ ನಾಯಕ ಹಾಗೂ ಮುಂಬೈ ಇಂಡಿಯನ್ಸ್‌ ತಂಡ ಸ್ಟಾರ್ ಆಟಗಾರ ರೋಹಿತ್ ಶರ್ಮಾ, ಖಾಸಗಿ ಸಂಭಾಷಣೆ ಪ್ರಸಾರ ಮಾಡಿ ಗೌಪ್ಯತೆ ಉಲ್ಲಂಘಿಸಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಮೇ 19ರಂದು ಪೋಸ್ಟ್‌ ಹಾಕಿರುವ ರೋಹಿತ್‌ ಶರ್ಮಾ, “ಕ್ರಿಕೆಟಿಗರ ಜೀವನವು ಎಷ್ಟು ಕಷ್ಟಕರವಾಗಿದೆಯೆಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ” ಎಂದು ಬೇಸರ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಸಂಭಾಷಣೆಯನ್ನು ರೆಕಾರ್ಡ್ ಮಾಡಬೇಡಿ ಎಂದು ಸ್ಟಾರ್ ಸ್ಪೋರ್ಟ್ಸ್‌ಗೆ ಕೇಳಿಕೊಂಡರೂ, ಅದನ್ನು ಪ್ರಸಾರದಲ್ಲಿ ಪ್ಲೇ ಮಾಡಲಾಗಿತ್ತು. ಅದು ಗೌಪ್ಯತೆಯ ಉಲ್ಲಂಘನೆಯಾಗಿದೆ. ಎಕ್ಸ್‌ಕ್ಲೂಸಿವ್‌ ಕಂಟೆಂಟ್‌ ಹಾಗೂ ಚಾನೆಲ್‌ನ್ನು ಎಂಗೇಜ್‌ ಆಗಿ ಇಡುವುದು ಮತ್ತು ವೀವ್ಸ್‌ಗೆ ಗಮನ ಕೇಂದ್ರೀಕರಿಸುವುದು ಒಂದು ದಿನ ಅಭಿಮಾನಿಗಳು, ಕ್ರಿಕೆಟಿಗರು ಮತ್ತು ಕ್ರಿಕೆಟ್ ನಡುವಿನ ನಂಬಿಕೆಯನ್ನು ಮುರಿಯುತ್ತದೆ. ಉತ್ತಮ ಪ್ರಜ್ಞೆ ಮೇಲುಗೈ ಸಾಧಿಸಲಿ” ಎಂದು ಸ್ಟಾರ್‌ ಸ್ಪೋರ್ಟ್ಸ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

STAR SPORTS imageonline.co merged

ರೋಹಿತ್‌ ಶರ್ಮಾ ಇತ್ತೀಚೆಗೆ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವ ಸಂಬಂಧ ಕೆಕೆಆರ್‌ ತಂಡದ ಸದಸ್ಯರೊಂದಿಗೆ ಸಂವಾದ ನಡೆಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕ್ಯಾಮೆರಾಮನ್‌ ಸೆರೆ ಹಿಡಿದಿದ್ದರು. ಅದರಲ್ಲಿ ಖಾಸಗಿ ಸಂಭಾಷಣೆಗಳು ರೆಕಾರ್ಡ್‌ ಆಗಿದ್ದವು. ಇದು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿ, ರೋಹಿತ್ ಶರ್ಮಾರಿಗೆ ಇರಿಸುಮುರಿಸು ಉಂಟಾಗಿತ್ತು.

ಈ ನಡುವೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ನ ಮಾಜಿ ಸಹ ಆಟಗಾರ ಧವಳ್ ಕುಲಕರ್ಣಿ ಅವರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಕ್ಯಾಮೆರಾಮೆನ್‌ ಸಂಭಾಷಣೆಯನ್ನು ರೆಕಾರ್ಡ್ ಮಾಡುತ್ತಿರುವುದು ಗಮನಿಸಿದ್ದಾರೆ. ಮತ್ತೊಮ್ಮೆ ಕ್ಯಾಮೆರಾಮೆನ್  ತನ್ನನ್ನು ಸೆರೆಹಿಡಿಯುತ್ತಿರುವುದನ್ನು ಕಂಡು ದೂರದಿಂದಲೇ ಕೈಮುಗಿದ ಹಿಟ್‌ ಮ್ಯಾನ್‌, ‘ದಯವಿಟ್ಟು ಮೈಕ್‌ ಆಫ್‌ ಮಾಡಿ’ ಎಂದು ಮನವಿ ಮಾಡಿದ್ದರು. ಆದರೂ ವೀಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದರಿಂದ ಬೇಸರಗೊಂಡಿರುವ ರೋಹಿತ್‌ ಶರ್ಮಾ, ಟ್ವೀಟ್‌ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...