ಐಪಿಎಲ್‌ | ಆರ್‌ಸಿಬಿ ಅಭಿಮಾನಿಗಳಿಗೆ ಆಘಾತ: ತಂಡದ ಪ್ರಮುಖ ಕನ್ನಡಿಗ ಬ್ಯಾಟರ್ ಟೂರ್ನಿಯಿಂದಲೇ ಔಟ್!

Date:

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ, ಪ್ಲೇ ಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್, ಕನ್ನಡಿಗ ದೇವದತ್ ಪಡಿಕ್ಕಲ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ಈ ಬೆಳವಣಿಗೆಯು ಆರ್‌ಸಿಬಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಈ ಸೀಸನ್‌ನಲ್ಲಿ ಆರ್‌ಸಿಬಿ ಪರವಾಗಿ ಉತ್ತಮ ಫಾರ್ಮ್‌ನಲ್ಲಿದ್ದ ದೇವದತ್ ಪಡಿಕ್ಕಲ್, ಬಲಗೈ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದು, ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ದೇವದತ್ ಪಡಿಕ್ಕಲ್ ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಮಯಾಂಕ್ ಅಗರ್ವಾಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿದ್ದಾರೆ ಎಂದು ಐಪಿಎಲ್‌ ಸಂಘಟಕರು ಮಾಹಿತಿ ನೀಡಿದ್ದಾರೆ.

ಈ ಋತುವಿನಲ್ಲಿ ಆರ್‌ಸಿಬಿ ಪರ 10 ಪಂದ್ಯಗಳನ್ನಾಡಿದ್ದ ಮತ್ತು ಎರಡು ಅರ್ಧಶತಕಗಳ ನೆರವಿನಿಂದ 247 ರನ್ ಗಳಿಸಿದ್ದ ದೇವದತ್ ಪಡಿಕ್ಕಲ್ ಅವರು ಬಲಗೈ ಮಂಡಿರಜ್ಜು ಗಾಯ ತೀವ್ರವಾದ ಹಿನ್ನೆಲೆಯಲ್ಲಿ ಟೂರ್ನಿಯಿಂದ ನಿರ್ಗಮಿಸಬೇಕಾಗಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಉಳಿದ ಪಂದ್ಯಗಳಿಗೆ ಮಯಾಂಕ್ ಅಗರ್ವಾಲ್ ಅವರನ್ನು ಆರ್‌ಸಿಬಿ ಕರೆಸಿಕೊಂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಮಯಾಂಕ್ ಅಗರ್ವಾಲ್ ಇದುವರೆಗೆ 127 ಐಪಿಎಲ್ ಪಂದ್ಯಗಳನ್ನು ಆಡಿದ್ದು, 2661 ರನ್ ಗಳಿಸಿದ್ದಾರೆ. ಒಂದು ಐಪಿಎಲ್ ಶತಕ ಮತ್ತು 13 ಅರ್ಧಶತಕಗಳನ್ನು ಬಾರಿಸಿದ್ದಾರೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ಮಯಾಂಕ್ ಅವರನ್ನು 1 ಕೋಟಿ ರೂಪಾಯಿಗೆ ಖರೀದಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...