ಐಪಿಎಲ್ 2025 | ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಧೋನಿ

Date:

ಪ್ರತಿ ಐಪಿಎಲ್‌ನಲ್ಲೂ ಸಿಎಸ್‌ಕೆ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ವಿಚಾರ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಚೆನ್ನೈನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಮಹೇಂದ್ರ ಸಿಂಗ್ ಧೋನಿ ಅವರ ಪೋಷಕರು ಕಾಣಿಸಿಕೊಂಡಿದ್ದರು. ಆಗ ಇಂದೇ ನಿವೃತ್ತಿ ತೆಗೆದುಕೊಳ್ಳುತ್ತಾರೆ ಎಂದು ವದಂತಿ ಹರಡಿತ್ತು. ಆದರೀಗ ಈ ಎಲ್ಲ ಸುದ್ದಿಗಳಿಗೆ ಖುದ್ದು ಧೋನಿಯೇ ತೆರೆ ಎಳೆದಿದ್ದಾರೆ.

ಪಾಡ್​ಕಾಸ್ಟ್​ವೊಂದರಲ್ಲಿ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ‘ಸದ್ಯಕ್ಕೆ ನಿವೃತ್ತಿ ನೀಡುವ ಯೋಚನೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಇನ್ನೂ ಸಹ ಐಪಿಎಲ್ ಆಡುತ್ತಿದ್ದೇನೆ. ಹೀಗಾಗಿ ನಿವೃತ್ತಿ ವಿಚಾರವನ್ನು ತುಂಬಾ ಸರಳವಾಗಿ ಇಟ್ಟುಕೊಂಡಿದ್ದೇನೆ. ಈಗ ನನಗೆ 43 ವರ್ಷ. ಐಪಿಎಲ್ 2025 ಮುಗಿಯುವ ಹೊತ್ತಿಗೆ ನನಗೆ 44 ವರ್ಷ ವಯಸ್ಸಾಗಿರುತ್ತದೆ. ಆನಂತರ, ನಾನು ಆಡಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಲು ನನಗೆ 10 ತಿಂಗಳುಗಳಿವೆ. ಹೀಗಾಗಿ ಸದ್ಯ ನಿವೃತ್ತಿ ಬಗ್ಗೆ ಯೋಚಿಸುತ್ತಿಲ್ಲ’ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

44 ನೇ ವಯಸ್ಸಿನಲ್ಲಿಯೂ ಆಡಲು ಸಾಧ್ಯವಾಗುತ್ತದೆಯೇ ಎಂಬುದನ್ನು ಎದುರು ನೋಡುತ್ತೇನೆ. ಐಪಿಎಲ್ ಮುಗಿದ ಬಳಿಕ ಎಂಟು ತಿಂಗಳು ಕಾಲಾವಕಾಶವಿದೆ. ಅದರ ನಡುವೆ ನನ್ನ ದೇಹ ಹೇಗಿರುತ್ತದೆ ಎಂಬುದರ ಆಧಾರದ ಮೇಲೆ ನಾನು ನನ್ನ ಭವಿಷ್ಯವನ್ನು ನಿರ್ಧರಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದರೆ ನನ್ನ ನಿವೃತ್ತಿ ನಿರ್ಧರಿಸುವುದು ನನ್ನ ದೇಹ. ಆದ್ದರಿಂದ, ಒಂದೊಂದೇ ವರ್ಷ ಕಳೆಯಲಿ, ಆ ಬಳಿಕ ಅದರ ಬಗ್ಗೆ ಯೋಚಿಸೋಣ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ. ಹೀಗಾಗಿ ಐಪಿಎಲ್ 2026 ರಲ್ಲೂ ಧೋನಿ ಕಣಕ್ಕಿಳಿದರೂ ಯಾವುದೇ ಅಚ್ಚರಿಯಿಲ್ಲ.

ಈ ಸುದ್ದಿ ಓದಿದ್ದೀರಾ? CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಲ್ಲಿ ಇನ್ನೂ ಬಲಿಷ್ಠವಾಗಿ ಆಡುತ್ತಿದ್ದು, ಅವರ ವೃತ್ತಿಜೀವನವನ್ನು ಕೊನೆಗೊಳಿಸುವ ಪಾತ್ರವನ್ನು ಅವರಿಗೆ ನೀಡಲಾಗಿಲ್ಲ. ಅವರ ಪ್ರಯಾಣವನ್ನು ಕೊನೆಗೊಳಿಸುವುದು ನನ್ನ ಕೆಲಸವಲ್ಲ. ನಾನು ಅವರೊಂದಿಗೆ ಕೆಲಸ ಮಾಡುವುದನ್ನು ಆನಂದಿಸುತ್ತೇನೆ. ಧೋನಿ ಇನ್ನೂ ಬಲಶಾಲಿಯಾಗಿದ್ದಾರೆ. ನಾನು ಅವರಲ್ಲಿ ವಿದಾಯದ ಬಗ್ಗೆ ಕೇಳುವುದೇ ಇಲ್ಲ. ಇದರ ಬಗ್ಗೆ ಕೇಳುವವರು ನೀವುಗಳೇ’’ ಎಂದು ಹೇಳಿದ್ದರು.

ಐಪಿಎಲ್ ಸೀಸನ್-18 ರಲ್ಲಿ 43 ವರ್ಷದ ಧೋನಿಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ವಿಕೆಟ್ ಕೀಪಿಂಗ್​ನಲ್ಲಿ ಚಾಕಚಕ್ಯತೆ ಮರೆದರೂ ಬ್ಯಾಟಿಂಗ್​ನಲ್ಲಿ ಸ್ಪೋಟಕ ಇನಿಂಗ್ಸ್ ಕಂಡು ಬಂದಿಲ್ಲ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಮಹೇಂದ್ರ ಸಿಂಗ್ ಧೋನಿ 26 ಚೆಂಡುಗಳಲ್ಲಿ 30 ರನ್‌ಗಳ ನಿಧಾನಗತಿಯ ಇನಿಂಗ್ಸ್ ಆಡಿದರು. ಇನಿಂಗ್ಸ್‌ನ 11 ನೇ ಓವರ್‌ನಿಂದ ಕೊನೆಯವರೆಗೂ ಧೋನಿ ಸಿಎಸ್‌ಕೆ ಪರ ಬ್ಯಾಟಿಂಗ್ ಮಾಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. 26 ಚೆಂಡುಗಳಲ್ಲಿ 1 ಸಿಕ್ಸರ್‌, ಒಂದು ಬೌಂಡರಿಯೊಂದಿಗೆ ಅಜೇಯ 30 ರನ್‌ ಮಾತ್ರ ಕಲೆ ಹಾಕಿದರು. ಅಭಿಮಾನಿಗಳ ನಿರೀಕ್ಷೆಗಳಂತೆ ಧೋನಿ ಆಡಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...