ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್

Date:

ಕೆಲ ದಿನಗಳ ಹಿಂದಷ್ಟೇ ಐಪಿಎಲ್‌ಗೆ ವಿದಾಯ ಹೇಳಿದ್ದ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್, ಇದೀಗ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಖಾತೆಗಳಲ್ಲಿ ಈ ನಿರ್ಧಾರವನ್ನು ಘೋಷಿಸುವ ಮೂಲಕ, ನಿವೃತ್ತಿಯನ್ನು ಖಚಿತಪಡಿಸಿದ್ದಾರೆ. ಆ ಮೂಲಕ ತಮ್ಮ ಜನ್ಮದಿನದಂದೇ ನಿವೃತ್ತಿ ನಿರ್ಧಾರ ತಿಳಿಸಿದ್ದಾರೆ.

“ಕಳೆದ ಕೆಲವು ದಿನಗಳಲ್ಲಿ ಪಡೆದ ಪ್ರೀತಿ, ಬೆಂಬಲ ಮತ್ತು ಪ್ರೀತಿಯಿಂದ ಮುಳುಗಿದ್ದೇನೆ. ಈ ಭಾವನೆಯನ್ನು ಸಾಧ್ಯವಾಗಿಸಿದ ಎಲ್ಲ ಅಭಿಮಾನಿಗಳಿಗೆ ತುಂಬಾ ಹೃದಯದ ಕೃತಜ್ಞತೆ ಮತ್ತು ಧನ್ಯವಾದಗಳು. ಸ್ವಲ್ಪ ಸಮಯದವರೆಗೆ ಸಾಕಷ್ಟು ಯೋಚಿಸಿದ ನಂತರ, ನಾನು ಪ್ರತಿನಿಧಿಸಿದ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದೆ. ಅಧಿಕೃತವಾಗಿ ನಾನು ನಿವೃತ್ತಿಯನ್ನು ಘೋಷಿಸಿದ್ದೇನೆ. ಮುಂದಿನ ದಿನಗಳ ಎದುರಾಗುವ ಸವಾಲುಗಳನ್ನು ಎದುರಿಸಲು ನಾನು ಸಜ್ಜಾಗುತ್ತಿದ್ದೇನೆ,” ಎಂದು ದಿನೇಶ್‌ ಕಾರ್ತಿಕ್‌ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸುದೀರ್ಘ ಪ್ರಯಾಣವನ್ನು ಆಹ್ಲಾದಕರ ಮತ್ತು ಆನಂದದಾಯಕವಾಗಿಸಿದ ಎಲ್ಲಾ ಕೋಚ್ ಗಳು, ನಾಯಕರು, ಆಯ್ಕೆದಾರರು, ತಂಡದ ಸಹ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ದೇಶದಲ್ಲಿ ಕ್ರೀಡೆಯನ್ನು ಆಡುವ ಲಕ್ಷಾಂತರ ಜನರಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದ ಕೆಲವೇ ಅದೃಷ್ಟಶಾಲಿಗಳಲ್ಲಿ ನಾನು ಕೂಡ ಒಬ್ಬ ಎಂದು ಪರಿಗಣಿಸುತ್ತೇನೆ ಮತ್ತು ಇನ್ನೂ ಅನೇಕ ಅಭಿಮಾನಿಗಳು ಮತ್ತು ಸ್ನೇಹಿತರ ಅಭಿಮಾನವನ್ನು ಗಳಿಸಿದ ಅದೃಷ್ಟಶಾಲಿ” ಎಂದು ಬರೆದುಕೊಂಡಿದ್ದಾರೆ.

“ಈ ಎಲ್ಲ ವರ್ಷಗಳಲ್ಲಿ ನನ್ನ ಹೆತ್ತವರು ಶಕ್ತಿ ಮತ್ತು ಬೆಂಬಲದ ಆಧಾರ ಸ್ತಂಭವಾಗಿದ್ದರು. ಅವರ ಆಶೀರ್ವಾದವಿಲ್ಲದೆ ಇಲ್ಲಿಯವರೆಗೂ ಬರಲು ಆಗುತ್ತಿರಲಿಲ್ಲ. ನನ್ನ ಜೀವನದ ಪಯಣದಲ್ಲಿ ಜೊತೆಯಾದ ವೃತ್ತಿಪರ ಕ್ರೀಡಾಪಟು ದೀಪಿಕಾ ಪಲ್ಲಿಕಲ್ ಅವರಿಗೆ ಸಾಕಷ್ಟು ಋಣಿಯಾಗಿದ್ದೇನೆ. ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ನಿಮ್ಮ ಬೆಂಬಲ ಮತ್ತು ಶುಭ ಹಾರೈಕೆಗಳಿಲ್ಲದೆ ಕ್ರಿಕೆಟ್ ಮತ್ತು ಕ್ರಿಕೆಟಿಗರು ಬೆಳೆಯಲು ಸಾಧ್ಯವಾಗಲ್ಲ” ಎಂದು ಅವರು ಭಾವನೆಗಳನ್ನು ಹಂಚಿಕೊಂಡಿದ್ದಾರೆ.

19ನೇ ವಯಸ್ಸಿನಲ್ಲಿ ಅಂದರೆ 2004ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದಲ್ಲಿ ಅವರು ಪದಾರ್ಪಣೆ ಮಾಡಿದ್ದ ದಿನೇಶ್ ಕಾರ್ತಿಕ್, 94 ಏಕದಿನ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ ಅವರು 9 ಅರ್ಧಶತಕಗಳೊಂದಿಗೆ 1,792 ರನ್‌ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ 42 ಇನ್ನಿಂಗ್ಸ್‌ ಆಡಿ ಅವರು ಒಂದು ಶತಕದೊಂದಿಗೆ 1,025 ರನ್‌ ಗಳಿಸಿದ್ದಾರೆ. ಇನ್ನು 60 ಟಿ-20 ಪಂದ್ಯಗಳನ್ನು ಆಡಿ 686 ರನ್‌ ಗಳಿಸಿದ್ದಾರೆ.

ಒಟ್ಟು ಎಲ್ಲ ಮಾದರಿಯ ಕ್ರಿಕೆಟ್‌ನ 180 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್, ಒಟ್ಟು 3463 ರನ್ ಗಳಿಸಿದ್ದಾರೆ. ಈ ಪೈಕಿ ಒಂದು ಟೆಸ್ಟ್ ಶತಕ ಹಾಗೂ 17 ಅರ್ಧ ಶತಕಗಳನ್ನು ಗಳಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ: ಉಗ್ರರಿಂದ ದಾಳಿ ಬೆದರಿಕೆ, ನ್ಯೂಯಾರ್ಕ್‌ನಲ್ಲಿ ಭದ್ರತೆ ಹೆಚ್ಚಳ

ದೇಶೀಯ ಕ್ರಿಕೆಟ್‌ನಲ್ಲೂ ಅವರು ಛಾಪು ಮೂಡಿಸಿದ್ದ ಡಿಕೆ, ಸೈಯದ್‌ ಮುಷ್ತಾಕ್‌ ಅಲಿ, ರಣಜಿಯಲ್ಲೂ ಅವರು ಆಡಿದ್ದಾರೆ. ಅವರ ನಾಯಕತ್ವದಲ್ಲಿಯೇ ತಮಿಳುನಾಡು ತಂಡವು ಎರಡು ಬಾರಿ ಮುಷ್ತಾಕ್‌ ಅಲಿ ಟ್ರೋಫಿ ಗೆದ್ದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...