ಆಸ್ಟ್ರೇಲಿಯಾ ಓಪನ್‌: ಸೆಮಿಯಿಂದ ಹೊರ ಸರಿದ ಜೋಕೊವಿಚ್

Date:

ಆಸ್ಟ್ರೇಲಿಯನ್‌ ಓಪನ್‌ ನಡೆಯುವಾಗಲೇ ಖ್ಯಾತ ಟೆನಿಸ್ ಆಟಗಾರ ನೋವಾಕ್ ಜೋಕೊವಿಚ್‌ ಹಠಾತನೆ ಮೈದಾನದಿಂದ ಹಿಂದೆ ಸರಿದು ಕೋಟ್ಯಂತರ ಅಭಿಮಾನಿಗಳಿಗೆ ಬೇಸರ ತರಿಸಿದ್ದಾರೆ.

ಕ್ವಾರ್ಟರ್ ಫೈನಲ್‌ನಲ್ಲಿ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್ ಅವರನ್ನು ಮಣಿಸಿದ್ದ ಜೊಕೊವಿಚ್‌ ಸೆಮಿಫೈನಲ್ ಪ್ರವೇಶಿಸಿದರು. ಎಂಟರ ಘಟ್ಟದ ಪಂದ್ಯದ ನಂತರ ಜೋಕೊ ಗಾಯದಿಂದ ಬಳಲುತ್ತಿದ್ದರು. ಮತ್ತು ಸೆಮಿಫೈನಲ್‌ನ ಮಧ್ಯದಲ್ಲಿ, ಅವರು ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದರು.

ಸೆಮಿಫೈನಲ್‌ ಪಂದ್ಯಕ್ಕೂ ಮುನ್ನ ನಡೆಯುವ ಅಭ್ಯಾಸದ ವೇಳೆಯೂ ಜೋಕೊವಿಚ್‌ ಅಂಗಳದಲ್ಲಿ ಕಾಣಿಸಿಕೊಳ್ಳಲಿಲ್ಲ. ಹೀಗಾಗಿ ಊಹಾಪೋಹಗಳು ಹೆಚ್ಚಾಗಿದ್ದವು. ಈಗ ಈ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಸೆಮಿಫೈನಲ್‌ ಪಂದ್ಯದಲ್ಲಿ ಸರ್ಬಿಯಾದ ಸ್ಟಾರ್ ಆಟಗಾರ ನೋವಾಕ್ 6-7 ರಿಂದ ಹಿನ್ನಡೆ ಅನುಭವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೊಕೊ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ವಿರುದ್ಧ ಸೆಣಸುವಾಗ ಗಾಯ ಕಾಣಿಸಿಕೊಂಡಿದ್ದು, ಮೊದಲ ಸೆಟ್‌ ಬಳಿಕ ಮೈದಾನದಿಂದ ಹಿಂದೆ ಸರಿಯಬೇಕಾಯಿತು. ಈ ಮೂಲಕ ಅಲೆಕ್ಸಾಂಡರ್ ಜ್ವೆರೆವ್ ಇದೇ ಮೊದಲ ಬಾರಿಗೆ ಟೂರ್ನಿಯ ಫೈನಲ್‌ ಪ್ರವೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿ | ಟೀಮ್ ಇಂಡಿಯಾಗೆ ಭರ್ಜರಿ ಗೆಲುವು

ಜೊಕೊವಿಚ್‌ ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್ ಗೆಲ್ಲುವ ಕನಸಿನೊಂದಿಗೆ ಆಸ್ಟ್ರೇಲಿಯಾ ಪ್ರವಾಸವನ್ನು ಆರಂಭಿಸಿದ್ದರು. ಅವರು 2008, 2011, 2012, 2013, 2015, 2016, 2019, 2020, 2021 ಮತ್ತು 2023 ರಲ್ಲಿ ಆಸ್ಟ್ರೇಲಿಯನ್ ಓಪನ್‌ ಪ್ರಶಸ್ತಿ ಗೆದಿದ್ದರು. ಈಗಾಗಲೇ ಜೋಕೊ 7 ಬಾರಿ ವಿಂಬಲ್ಡನ್‌, 4 ಬಾರಿ ಫ್ರೆಂಚ್‌, 4 ಬಾರಿ ಅಮೆರಿಕ ಓಪನ್‌ ಕಿರೀಟ ತಮ್ಮದಾಗಿಸಿಕೊಂಡಿದ್ದಾರೆ.

ಜೊಕೊವಿಚ್ 12ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್‌ನಲ್ಲಿ ಸೆಮಿಫೈನಲ್ ತಲುಪಿದ್ದರು. ಜೊಕೊವಿಚ್ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದ ಕೀರ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ನೋವಾಕ್‌ ಎಂಟರ ಘಟ್ಟದ ಪಂದ್ಯವನ್ನು ಆಡುವಾಗಲೇ ಅವರಿಗೆ ಗಾಯ ಕಾಣಿಸಿಕೊಂಡಿತ್ತು. ಅವರ ವೈದ್ಯ ತಂಡ ಮೈದಾನಕ್ಕೆ ಬಂದು ಅವರಿಗೆ ಚಿಕಿತ್ಸೆ ನೀಡಿತ್ತು. ಆ ಬಳಿಕವೇ ನೋವಾಕ್‌, ಕಾರ್ಲೋಸ್ ಅಲ್ಕರಾಜ್ ವಿರುದ್ಧದ ಪಂದ್ಯವನ್ನು ಆಡಲು ಸಜ್ಜಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...