ಮಹಿಳಾ ಅಂಡರ್‌-19 ವಿಶ್ವಕಪ್: ಕನ್ನಡತಿ ನೇತೃತ್ವದಲ್ಲಿ ಟೀಂ ಇಂಡಿಯಾ ಚಾಂಪಿಯನ್

Date:

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಮಹಿಳೆಯರ ತಂಡ ಭರ್ಜರಿ ಗೆಲುವು ಸಾಧಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಕ್ವಾಲಾಲಂಪುರದ ಬೇಯುಮಾಸ್ ಓವಲ್‌ನ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳ ಅಮೋಘ ಗೆಲುವನ್ನು ದಾಖಲಿಸಿಕೊಂಡು, ಎರಡನೇ ಬಾರಿಯು ಅಂಡರ್-19 ಟಿ20 ವಿಶ್ವಕಪ್ ತನ್ನಲ್ಲೇ ಉಳಿಸಿಕೊಂಡಿದೆ.

ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ಅಜೇಯ ತಂಡಗಳಾಗಿ ಫೈನಲ್ ಪ್ರವೇಶ ಮಾಡಿದ್ದವು. ಅಂತಿಮ ಹಣಾಹಣಿಯಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಭಾರತೀಯರ ಬೌಲಿಂಗ್ ದಾಳಿಗೆ ತತ್ತರಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾದ ಆಟಗಾರ್ತಿಯರು ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುವಲ್ಲಿ ವಿಫಲರಾದರು. ಬ್ಯಾಟರ್‌ಗಳಾದ ಗೊಂಗಡಿ ತ್ರಿಷಾ, ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಹಾಗೂ ಪರುಣಿಕಾ ಸಿಸೋಡಿಯಾ ಅವರ ಮಾರಕ ಬೌಲಿಂಗ್ ದಾಳಿಗೆ ಹೆಚ್ಚು ಕಾಲ ಕ್ರಿಸ್‌ನಲ್ಲಿ ನಿಲ್ಲದೆ ಪೆವಿಲಿಯನ್‌ನತ್ತ ಮುಖ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾ ಸೋತರೂ ವರುಣ್ ಚಕ್ರವರ್ತಿಯಿಂದ ವಿನೂತನ ದಾಖಲೆ

ಮೈಕೆ ವ್ಯಾನ್ ವೂರ್ಸ್ಟ್ ದಾಖಲಿಸಿದ 23 ರನ್ ಹೊರತುಪಡಿಸಿದರೆ ಉಳಿದ ಆಟಗಾರರು ರನ್ಗಳಿಸಲು ಪರದಾಡಿದರು. ಒಂದಾದ
ಮೇಲೊಂದು ವಿಕೆಟ್ ಒಪ್ಪಿಸಿದರು.

20 ಓವರ್‌ನಲ್ಲಿ ಎಲ್ಲ ವಿಕೆಟ್ ಕಳೆದುಕೊಂಡ ದಕ್ಷಿಣ ಆಫ್ರಿಕಾ ಕೇವಲ 82 ರನ್ ಪೇರಿಸಿ, ಭಾರತ ತಂಡಕ್ಕೆ ಸುಲಭ ಗುರಿಯನ್ನು
ಬಿಟ್ಟುಕೊಟ್ಟಿತು.

ಎರಡನೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ, ಆರಂಭದಲ್ಲಿ ಜಿ ಕಮಲಿನಿ ಅವರ ವಿಕೆಟ್ ಕಳೆದುಕೊಂಡಿತು. ಆ ಬಳಿಕ ಗೊಂಗಡಿ
ತ್ರಿಷಾ (44 ರನ್), ಸಾನಿಕಾ ಚಲ್ಕೆ (26 ರನ್) ಜತೆಗೂಡಿ 11.2 ಓವರ್‌ನಲ್ಲಿ 84 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು.

ಭಾರತದ ಪರ ಗೊಂಗಡಿ ತ್ರಿಷಾ ಪ್ರಮುಖ 3 ವಿಕೆಟ್ ಪಡೆದರು. ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಹಾಗೂ ಪರುಣಿಕಾ ಸಿಸೋಡಿಯಾ 2 ವಿಕೆಟ್ ಪಡೆದು ಮಿಂಚಿದರು. ಶಬ್ನಮ್ ಶಕೀಲ್ 1 ವಿಕೆಟ್ ಪಡೆದರು.

ಈ ಬಾರಿ ಭಾರತ ತಂಡವನ್ನು ಕರ್ನಾಟಕದ ನಿಕ್ಕಿ ಪ್ರಸಾದ್ ಮುನ್ನಡೆಸಿದ್ದರು. 19 ವರ್ಷದೊಳಗಿನವರ ಮಹಿಳಾ ಏಷ್ಯಾಕಪ್‌ನಲ್ಲಿ ಸಹ ಭಾರತ ತಂಡದ ನಾಯಕತ್ವ ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...