ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ದಾಖಲೆ ಅಳಿಸಿದ ಜೋಸ್‌ ಬಟ್ಲರ್

Date:

ಇಂಗ್ಲೆಂಡ್‌ನ ಸ್ಪೋಟಕ ಆಟಗಾರ ಜೋಸ್‌ ಬಟ್ಲರ್‌ ಟಿ20 ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರ ದಾಖಲೆಗಳನ್ನು ಮುರಿದಿದ್ದಾರೆ. ವೆಸ್ಟ್‌ ಇಂಡೀಸ್‌ ವಿರುದ್ಧ ಸ್ವದೇಶದಲ್ಲಿ ಟಿ20 ಸರಣಿ ನಡೆಯುತ್ತಿದ್ದು, ಚೆಸ್ಟರ್ ಲೀ ಸ್ಟ್ರೀಟ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅತ್ಯಮೋಘ ಆಟವಾಡಿ ಗೆಲುವಿನಲ್ಲಿ ನೆರವಾಗಿದ್ದಾರೆ.

ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 21 ರನ್‌ಗಳಿಂದ ವೆಸ್ಟ್ ಇಂಡೀಸ್ ವಿರುದ್ಧ ಜಯಗಳಿಸಿತು. ಆಂಗ್ಲರ ತಂಡವು ಮೊದಲು ಬ್ಯಾಟ್‌ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 188 ರನ್ ಪೇರಿಸಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ವಿಂಡೀಸ್ ತಂಡ 20 ಓವರ್‌ಗಳಲ್ಲಿ 167 ರನ್‌ ಗಳಿಸಲು ಮಾತ್ರ ಶಕ್ತವಾಗಿ ಸೋಲು ಅನುಭವಿಸಿತು.

ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್‌ ತಂಡದ ಆರಂಭ ಅಷ್ಟು ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್ ಬೆನ್‌ ಡೆಕೆಟ್‌ ತಂಡದ ಮೊತ್ತ 16 ರನ್‌ ಆಗಿದ್ದಾಗ ಔಟಾದರು. ಇವರು ಪೆವಿಲಿಯನ್‌ಗೆ ಸೇರುತ್ತಿದ್ದಂತೆ ಕ್ರೀಸ್‌ಗೆ ಬಂದ ಸ್ಟಾರ್ ಆಟಗಾರ ಜೋಸ್ ಬಟ್ಲರ್‌ ಅಮೋಘ ಆಟವಾಡಿದರು. ಆಟಗಾರ ಜೇಮ್‌ ಸ್ಮಿತ್‌ ಅವರ ಜೊತೆಗೂಡಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 38 ರನ್‌ ಬಾರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕ್ರಿಕೆಟ್‌ಗೆ ಪಿಯೂಷ್ ಚಾವ್ಲಾ ನಿವೃತ್ತಿ; 2 ಬಾರಿ ಭಾರತ ವಿಶ್ವಕಪ್‌ ಗೆದ್ದಾಗ ತಂಡದ ಪ್ರಮುಖ ಬೌಲರ್‌

ಎರಡನೇ ವಿಕೆಟ್‌ಗೆ ಈ ಜೋಡಿ ಅರ್ಧಶತದ ಜೊತೆಯಾಟ ನೀಡಿತು. ಇವರು 59 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ 96 ರನ್‌ ಸಿಡಿಸಿ ತಂಡಕ್ಕೆ ಆಧಾರವಾದರು. ಈ ಮೂಲಕ ಇವರು ಹಲವು ದಾಖಲೆಗಳಿಗೆ ತಮ್ಮ ಹೆಸರನ್ನು ದಾಖಲಿಸಿದರು. ಇದೇ ಸಂದರ್ಭದಲ್ಲಿ ಬಟ್ಲರ್ ವಿರಾಟ್‌ ಕೊಹ್ಲಿ ದಾಖಲೆಯನ್ನು ಕೂಡ ಅಳಿಸಿದರು. ವೆಸ್ಟ್‌ ಇಂಡೀಸ್‌ ವಿರುದ್ಧ ಟ20 ಕ್ರಿಕೆಟ್‌ನಲ್ಲಿ ಅತಿ ಹೆ್ಚ್ಚು ರನ್ ಬಾರಿಸಿದ ವಿರಾಟ್‌ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು. ವಿರಾಟ್ ಕೊಹ್ಲಿ ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಂಡೀಸ್‌ ವಿರುದ್ಧ 570 ರನ್‌ ಸಿಡಿಸಿದ್ದರು. ಈ ದಾಖಲೆಯನ್ನು ಜೋಸ್‌ ಬಟ್ಲರ್‌ ಮುರಿದು ವಿಂಡೀಸ್‌ ವಿರುದ್ಧ 611 ರನ್ ಬಾರಿಸಿದರು. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ವಿಂಡೀಸ್‌ ವಿರುದ್ಧ 693 ರನ್‌ ಬಾರಿಸಿದ್ದಾರೆ.

ಇದೇ ಪಂದ್ಯದಲ್ಲಿ ಬಟ್ಲರ್‌ ಬಾರಿಸಿದ ಅರ್ಧಶತಕ ರೋಹಿತ್‌ ಶರ್ಮಾ ಹಾಗೂ ಪಾಕ್‌ನ ಬಾಬರ್‌ ಅಜಮ್‌ ದಾಖಲೆಯನ್ನು ಬದಿಗೆ ಸರಿಸಿತು. ರೋಹಿತ್, ಬಾಬರ್ ಇಬ್ಬರೂ ವಿಂಡೀಸ್‌ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ 5 ಅರ್ಧಶತಕ ಬಾರಿಸಿದ ಹಿರಿಮೆ ಹೊಂದಿದ್ದರು. ಈ ಪಟ್ಟಿಗೆ ಬಟ್ಲರ್‌ ಕೂಡ ಸೇರ್ಪಡೆಯಾದರು. ವೆಸ್ಟ್‌ ಇಂಡೀಸ್‌ ವಿರುದ್ಧದ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಹಿರಿಮೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್‌ ಅವರಿಗೆ ಸಲ್ಲುತ್ತದೆ. ಇವರು ವಿಂಡೀಸ್‌ ವಿರುದ್ಧ 7 ಅರ್ಧಶತಕ ಬಾರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...