ಮೊದಲ ಟೆಸ್ಟ್‌ 3ನೇ ದಿನ | ‘ಪೋಪ್‌’ ಶತಕದಾಟದಿಂದ ‘ಹೋಪ್’ ಪಡೆದುಕೊಂಡ ಇಂಗ್ಲೆಂಡ್: 126 ರನ್‌ ಮುನ್ನಡೆ

Date:

ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವೆ ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನದಾಟ ಮುಕ್ತಾಯ ಕಂಡಿದ್ದು, ಟೀಮ್ ಇಂಡಿಯಾದ ಬಲಿಷ್ಠ ಸ್ಪಿನ್ ದಾಳಿಯ ನಡುವೆಯೂ ಕೂಡ ಶತಕ ಗಳಿಸುವ ಮೂಲಕ ಓಲಿ ಪೋಪ್, ಆಂಗ್ಲನ್ನರ ಹೋಪ್(ನಂಬಿಕೆ) ಅನ್ನು ಇನ್ನೂ ಜೀವಂತವಿಟ್ಟಿದ್ದಾರೆ.

ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ಸಂಪೂರ್ಣ ಮೇಲುಗೈ ಸಾಧಿಸಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್ ಕಳೆದುಕೊಂಡು 316 ರನ್‌ಗಳಿಸಿದೆ. ಆ ಮೂಲಕ 126 ರನ್‌ಗಳ ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುತ್ತಿನಗರಿಯಲ್ಲಿ ಶನಿವಾರ ಉತ್ತಮ ಇನ್ನಿಂಗ್ಸ್ ಆಡಿರುವ ಇಂಗ್ಲೆಂಡ್‌ನ ಬಲಗೈ ಬ್ಯಾಟರ್ ಓಲಿ ಪೋಪ್ 208 ಎಸೆತಗಳನ್ನು ಎದುರಿಸಿ, 17 ಬೌಂಡರಿಗಳ ನೆರವಿನಿಂದ ಔಟಾಗದೆ 148 ರನ್‌ ಗಳಿಸಿದ್ದಾರೆ. ಔಟಾಗದೆ 16 ರನ್ ಗಳಿಸಿರುವ ರೆಹಾನ್ ಅಹ್ಮದ್ ಜೊತೆಗೆ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಪೋಪ್ ಅವರನ್ನು ಔಟ್ ಮಾಡಲು ಟೀಮ್ ಇಂಡಿಯಾ ಸ್ಪಿನ್ ಬೌಲರ್‌ಗಳು ಸತತ ಪ್ರಯತ್ನ ನಡೆಸಿದರಾದರೂ, ಕೊನೆಯವರೆಗೂ ಸಫಲರಾಗಲಿಲ್ಲ. ಇವರನ್ನು ಔಟ್ ಮಾಡುವುದು ನಿಜಕ್ಕೂ ಟೀಮ್ ಇಂಡಿಯಾದ ಸ್ಟಾರ್ ಬೌಲರ್‌ಗಳಿಗೆ ಸವಾಲಾಯಿತು. ಟೀಮ್ ಇಂಡಿಯಾದ ಎಲ್ಲ ಬೌಲಿಂಗ್ ತಂತ್ರವನ್ನು ಮೆಟ್ಟಿನಿಂತು ಪೋಪ್ ಶತಕ ದಾಖಲಿಸಿಕೊಂಡರು.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನವು ಟೀಮ್ ಇಂಡಿಯಾದ ಬ್ಯಾಟಿಂಗ್‌ನೊಂದಿಗೆ ಪ್ರಾರಂಭವಾಯಿತು. ಎರಡನೇ ದಿನದಾಟ ಮುಗಿದಾಗ 7 ವಿಕೆಟ್ ಕಳೆದುಕೊಂಡು 421 ರನ್‌ ಗಳಿಸಿತ್ತು. ರವೀಂದ್ರ ಜಡೇಜಾ 81 ಮತ್ತು ಅಕ್ಷರ್ ಪಟೇಲ್ 35 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು.

ಮೂರನೇ ದಿನದಾಟ ಪ್ರಾರಂಭಿಸಿದ ಟೀಮ್ ಇಂಡಿಯಾದ ಈ ಜೋಡಿ ಬ್ಯಾಟ್ಸ್‌ಮನ್ ಗಳು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲು ಸಾಧ್ಯವಾಗದೆ ಆತಿಥೇಯ ತಂಡದ ಇನ್ನಿಂಗ್ಸ್ 436 ರನ್ ಗಳಿಗೆ ಆಲೌಟಾದರು. ಇದರೊಂದಿಗೆ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 190 ರನ್‌ಗಳ ಮುನ್ನಡೆ ಸಾಧಿಸಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 246 ರನ್ ಗಳಿಸಿ ಆಲೌಟಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರವಾಗಿ ಕ್ರಾಲಿ 20, ಬೆನ್ ಡಕೆಟ್ 47, ಬೆನ್ ಫೋಕ್ಸ್ 34 ರನ್ ಗಳಿಸಿದರು. ಆದರೆ ಜೋ ರೂಟ್(2 ರನ್), ಬೆನ್ ಸ್ಟೋಕ್ಸ್(6 ರನ್), ಜಾನಿ ಬೈರ್‌ಸ್ಟೋವ್(10 ರನ್) ಬ್ಯಾಟ್‌ನಿಂದ ಉತ್ತಮ ರನ್ ಬರಲೇ ಇಲ್ಲ.

ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಇಂಗ್ಲೆಂಡ್, ಒಲಿ ಪೋಪ್ ಅವರ ಶತಕದ ನೆರವಿನಿಂದ ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 316 ರನ್ ಸೇರಿಸಿದ್ದು, 126 ರನ್‌ಗಳ ಮುನ್ನಡೆ ಸಾಧಿಸಿದೆ.

ಮೂರನೇ ದಿನದ ಬೌಲಿಂಗ್‌ನಲ್ಲಿ ಟೀಮ್ ಇಂಡಿಯಾದ ಪರವಾಗಿ ರವೀಂದ್ರ ಜಡೇಜಾ ಹಾಗೂ ಬುಮ್ರಾ ತಲಾ 2 ವಿಕೆಟ್ ಪಡೆದುಕೊಂಡರೆ, ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...