ಇಂಗ್ಲೆಂಡ್ v/s ವೆಸ್ಟ್‌ ಇಂಡೀಸ್‌ | ಇಂಗ್ಲೆಂಡ್‌ಗೆ ಇನ್ನಿಂಗ್ಸ್‌ ಗೆಲುವು; ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಆ್ಯಂಡರ್ಸನ್‌

Date:

ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ ಟೆಸ್ಟ್‌ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ಇನ್ನಿಂಗ್ಸ್‌ ಗೆದ್ದು, 114 ರನ್‌ಗಳೊಂದಿಗೆ ಸರಣಿಯಲ್ಲಿ 1-0 ಅಂತದಲ್ಲಿ ಮುನ್ನಡೆ ಸಾಧಿಸಿದೆ. ಪಂದ್ಯದ ಮೊದಲ ಇನ್ನಿಂಗ್ಸ್‌ ಗೆದ್ದ ಬೆನ್ನಲ್ಲೇ ತಂಡದ ವೇಗಿ ಬೌರಲ್‌ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಜೇಮ್ಸ್ ಆ್ಯಂಡರ್ಸನ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಹೆಚ್ಚು ವಿಕೆಟ್ ಪಡೆದ ಮೊದಲ ವೇಗಿ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅತಿ ಹೆಚ್ಚು ವಿಕೆಟ್‌ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಅಂತರಾಷ್ಟ್ರೀಯ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯವಾಡಿದ ಇಂಗ್ಲೆಂಡ್‌ ತಂಡದ ಗಸ್ ಅಟ್ಕಿನ್ಸನ್ ಭರ್ಜರಿ ಬೌಲಿಂಗ್ ಮಾಡಿದ್ದು, 45 ರನ್‌ಗಳನ್ನು ನೀಡಿ 7 ಟಿಕೆಟ್‌ ಪಡೆದುಕೊಂಡಿದ್ದಾರೆ. ಅವರ ಬೌಲಿಂಗ್‌ಗೆ ವೆಸ್ಟ್‌ ಇಂಡೀಸ್‌ ಪಡೆ ತತ್ತರಿಸಿದ್ದು, ಮೊದಲ ಇನಿಂಗ್ಸ್‌ನಲ್ಲಿ ಕೇವಲ 121ಕ್ಕೆ ಆಲೌಟ್ ಆಗಿತ್ತು. ಬಳಿಕ, ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ತಂಡ 371 ರನ್ ಗಳಿಸಿ, ಭರ್ಜರಿ ಗೆಲುವಿನೊಂದಿಗೆ, ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿತೀಯ ಇನಿಂಗ್ಸ್‌ನಲ್ಲೂ ಅಟ್ಕಿನ್ಸನ್ ಅವರ ಭರ್ಜರಿ ಬೌಲಿಂಗ್‌ಗೆ (61ಕ್ಕೆ 5 ವಿಕೆಟ್) ತತ್ತರಿಸಿದ ವಿಂಡೀಸ್ ಕೇವಲ 136ಕ್ಕೆ ಆಲೌಟ್ ಆಯಿತು. ಎರಡು ಇನ್ನಿಂಗ್ಸ್‌ಗಳಲ್ಲಿ ಅಟ್ಕಿನ್ಸನ್ ಒಟ್ಟು 12 ವಿಕೆಟ್‌ಗಳನ್ನು ಗಳಿಸಿ ಮಿಂಚಿದ್ದಾರೆ.

ಇನ್ನು, ಇಂಗ್ಲೆಂಡ್‌ ಪಂದ್ಯದ ನಾಯಕ ಬೆನ್ ಸ್ಟೋಕ್ಸ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 6,000ಕ್ಕಿಂತ ಹೆಚ್ಚು ರನ್ ಹಾಗೂ 200 ವಿಕೆಟ್ ಗಳಿಸಿದ ವಿಶ್ವದ ಮೂರನೇ ಆಲ್‌ರೌಂಡ್ ಆಟಗಾರ ಎನಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...