IND vs ENG 4TH TEST | ಟಾಸ್‌ ಗೆದ್ದ ಇಂಗ್ಲೆಂಡ್‌; ಟೀಂ ಇಂಡಿಯಾದಲ್ಲಿ ಇಬ್ಬರು ಸೇರ್ಪಡೆ

Date:

ಇಂಗ್ಲೆಂಡ್‌ ವಿರುದ್ಧದ ಆಂಡರ್ಸನ್‌-ತೆಂಡುಲ್ಕರ್‌ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ನಲ್ಲಿ ಆರಂಭವಾಗಲಿದ್ದು, ಟಾಸ್‌ ಗೆದ್ದ ಇಂಗ್ಲೆಂಡ್‌ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಆಕಾಶ್‌ದೀಪ್‌ ಹಾಗೂ ನಿತೀಶ್‌ ಕುಮಾರ್‌ ರೆಡ್ಡಿಗೆ ಈ ಪಂದ್ಯದಲ್ಲಿ ಕೈಬಿಡಲಾಗಿದ್ದು, ಶಾರ್ದೂಲ್ ಠಾಕೂರ್ ಹಾಗೂ ಅನ್ಶುಲ್ ಕಂಬೋಜ್ ಅವರಿಗೆ ಅವಕಾಶ ನೀಡಲಾಗಿದೆ. ಅನ್ಶುಲ್ ಚೊಚ್ಚಲ ಟೆಸ್ಟ್‌ ಟೆಸ್ಟ್‌ ಪಂದ್ಯವಾಗಿದ್ದು, ಉತ್ತಮ ಆಟದ ನಿರೀಕ್ಷೆಯಲ್ಲಿದ್ದಾರೆ.

2-1ರಿಂದ ಮುನ್ನಡೆಯಲ್ಲಿರುವ ಇಂಗ್ಲೆಂಡ್‌ ವಿರುದ್ಧ ಸರಣಿಯಲ್ಲಿ ಸಮಬಲ ಸಾಧಿಸಲು ಟೀಮ್‌ ಇಂಡಿಯಾ ಗೆಲುವಿನ ಒತ್ತಡದಲ್ಲಿದೆ. ಆದರೆ, ತಂಡಕ್ಕೆ ಗಾಯದ ಸಮಸ್ಯೆಗಳು ಕಾಡುತ್ತಿದ್ದು, ಆಡುವ ಬಳಗದ ಬಗ್ಗೆ ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಗೆದ್ದು, ಓಲ್ಡ್‌ ಟ್ರಾಫರ್ಡ್‌ ಮೈದಾನದಲ್ಲಿ ಭಾರತ ತನ್ನ ಮೊದಲ ಟೆಸ್ಟ್‌ ಜಯ ದಾಖಲಿಸುವ ಕನಸಿನಲ್ಲಿದೆ.

ಓಲ್ಡ್‌ ಟ್ರಾಫರ್ಡ್‌ನಲ್ಲಿ ಭಾರತ ಇಲ್ಲಿಯವರೆಗೂ 9 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 4ರಲ್ಲಿ ಸೋತು, 5 ಡ್ರಾನಲ್ಲಿ ಕೊನೆಗೊಂಡಿವೆ. ಇಲ್ಲಿ ಒಂದೇ ಒಂದು ಗೆಲುವು ಸಾಧಿಸದಿರುವ ಭಾರತ, ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ತನ್ನ ಗೆಲುವಿನ ಚರಿತ್ರೆಯನ್ನು ಸೃಷ್ಟಿಸಿದ ರೀತಿಯೇ ಮ್ಯಾಂಚೆಸ್ಟರ್‌ನಲ್ಲಿಯೂ ಇತಿಹಾಸ ಬರೆಯಲು ಯೋಜನೆ ರೂಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಂಡದ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್‌ ಕಣಕ್ಕಿಳಿಯಲಿದ್ದಾರೆ. ಇವರಿಬ್ಬರೂ ತಂಡದ ನಿರೀಕ್ಷೆಗೆ ತಕ್ಕಂತೆ ಆಡುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಸಾಯಿ ಸುದರ್ಶನ್‌ ಅವರಿಂದ ಉತ್ತಮ ಆಟ ನಿರೀಕ್ಷಿಸಲಾಗಿದೆ. ಶುಭಮನ್‌ ಗಿಲ್‌ ನಾಲ್ಕನೇ ಕ್ರಮಾಂಕದಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟುವ ಮೂಲಕ ತಂಡಕ್ಕೆ ಬಲ ತುಂಬಲು ಸಿದ್ಧರಾಗಿದ್ದಾರೆ. ರಿಷಭ್‌ ಪಂತ್‌ ಗಾಯದಿಂದ ಚೇತರಿಸಿಕೊಂಡು ವಿಕೆಟ್‌ಕೀಪಿಂಗ್‌ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ನೆಲದಲ್ಲಿ ಹೊಸ ದಾಖಲೆ ಬರೆದ ಭಾರತದ ಮಹಿಳಾ ಕ್ರಿಕೆಟ್ ತಂಡ

ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ವಾಶಿಂಗ್ಟನ್‌ ಸುಂದರ್‌ ತಂಡದಲ್ಲಿ ಸ್ಥಾನ ಖಚಿತಪಡಿಸಿಕೊಂಡಿದ್ದಾರೆ. ಈ ಇಬ್ಬರೂ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ತಂಡಕ್ಕೆ ಮಹತ್ವದ ಕೊಡುಗೆ ನೀಡಬಲ್ಲರು. ಓಲ್ಡ್‌ ಟ್ರಾಫರ್ಡ್‌ನ ಒದ್ದೆಯಾದ ಪಿಚ್‌ ಸ್ಪಿನ್‌ ಬೌಲರ್‌ಗಳಿಗೆ ಸಹಕಾರಿಯಾಗಬಹುದು ಎಂಬ ನಿರೀಕ್ಷೆಯಿದೆ.

ವೇಗದ ಬೌಲಿಂಗ್‌ ವಿಭಾಗದಲ್ಲಿ ಜಸ್ಪ್ರೀತ್‌ ಬುಮ್ರಾ ಮತ್ತು ಮೊಹಮ್ಮದ್‌ ಸಿರಾಜ್‌ ತಂಡದ ಪ್ರಮುಖ ಆಯುಧಗಳಾಗಿದ್ದಾರೆ. ಮೂರನೇ ವೇಗದ ಬೌಲರ್‌ ಆಗಿ ಅನ್ಶುಲ್‌ ಕಾಂಬೋಜ್‌ ಆಡುತ್ತಿದ್ದಾರೆ ಅನ್ಶುಲ್‌ ಕಾಂಬೋಜ್‌, ತಮ್ಮ ಇತ್ತೀಚಿನ ಪ್ರದರ್ಶನ ಮತ್ತು ಇಂಗ್ಲೆಂಡ್‌ ಪರಿಸ್ಥಿತಿಗೆ ಹೊಂದಿಕೊಳ್ಳುವ ಸಾಮರ್ಥ್ಯದಿಂದ ಚೊಚ್ಚಲ ಟೆಸ್ಟ್‌ ಆಡುವ ಸಾಧ್ಯತೆಯನ್ನು ಹೆಚ್ಚಿಸಿದ್ದಾರೆ.

ಮ್ಯಾಂಚೆಸ್ಟರ್‌ನ ಒದ್ದೆಯಾದ ವಾತಾವರಣ ಮತ್ತು ಪಿಚ್‌ನ ಸ್ವರೂಪವು ವೇಗದ ಬೌಲರ್‌ಗಳಿಗೆ ಆನುಕೂಲಕರವಾಗಿದ್ದು, ಓಲ್ಡ್‌ ಟ್ರಾಫರ್ಡ್‌ನಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಗುರಿಯನ್ನು ಟೀಮ್‌ ಇಂಡಿಯಾ ಹೊಂದಿದೆ.

ಪಂದ್ಯವಾಡುವ ಉಭಯ ತಂಡಗಳ 11ರ ಬಳಗ

ಭಾರತ:

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅನ್ಶುಲ್ ಕಂಬೋಜ್.

ಇಂಗ್ಲೆಂಡ್:

ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ ©, ಜೇಮೀ ಸ್ಮಿತ್ (ವಾರ), ಲಿಯಾಮ್ ಡಾಸನ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್

ಪಂದ್ಯ ಆರಂಭವಾಗುವ ಸಮಯ : ಮಧ್ಯಾಹ್ನ 3.30

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...