ಐಪಿಎಲ್‌ನಿಂದ ಹೊರಬಿದ್ದ ಮುಸ್ತಫಿಜುರ್ ರಹಮಾನ್ ಈಗ ಪಿಎಸ್‌ಎಲ್ ಪಾಲು

Date:

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಿಂದ ಬಿಸಿಸಿಐ ನಿರ್ದೇಶನದ ಮೇರೆಗೆ ಹೊರಗುಳಿದಿರುವ ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರಹಮಾನ್, ಇದೀಗ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್‌ಎಲ್) ಜತೆ ಒಪ್ಪಂದ ಮಾಡಿಕೊಂಡಿದ್ದಾರೆ.

​ಇತ್ತೀಚೆಗೆ ನಡೆದ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡವು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ತೀವ್ರ ಪೈಪೋಟಿಯ ಬಳಿಕ ₹9.20 ಕೋಟಿ ನೀಡಿ ಮುಸ್ತಫಿಜುರ್ ಅವರನ್ನು ಖರೀದಿಸಿತ್ತು. ಆದರೆ, ಹರಾಜು ಪ್ರಕ್ರಿಯೆ ಮುಗಿದ ಕೆಲವೇ ದಿನಗಳಲ್ಲಿ “ಸುತ್ತಮುತ್ತಲ ಬೆಳವಣಿಗೆಗಳು” ಎಂಬ ಕಾರಣ ನೀಡಿ ಬಿಸಿಸಿಐ ಸೂಚನೆಯ ಮೇರೆಗೆ ಕೆಕೆಆರ್ ತಂಡದಿಂದ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನು ಓದಿದ್ದೀರಾ? ಮುಸ್ತಫಿಜುರ್ ವಿವಾದ: ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಲೀಗ್‌ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಜುರ್ ಅವರನ್ನು ಪಿಎಸ್‌ಎಲ್ ಸ್ವಾಗತಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಲೀಗ್, “ಬ್ಯಾಟರ್‌ಗಳೇ ಎಚ್ಚರ.. ಹೊಸ ಯುಗದಲ್ಲಿ ‘ಫಿಜ್’ ಮ್ಯಾಜಿಕ್ ನಡೆಯಲಿದೆ. ಮುಸ್ತಫಿಜುರ್ ರಹಮಾನ್ ಎಚ್‌ಬಿಎಲ್ ಪಿಎಸ್‌ಎಲ್-11ಗೆ ಸೇರ್ಪಡೆಯಾಗಿದ್ದಾರೆ” ಎಂದು ಅಧಿಕೃತವಾಗಿ ಪ್ರಕಟಿಸಿದೆ.

ಬಿಸಿಸಿಐನ ಏಕಾಏಕಿ ನಿರ್ಧಾರಕ್ಕೆ ಬಾಂಗ್ಲಾದೇಶ ಸರ್ಕಾರ ಮತ್ತು ಕ್ರಿಕೆಟ್ ಮಂಡಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. “ಬಿಸಿಸಿಐನ ಈ ನಿರ್ಧಾರಕ್ಕೆ ಯಾವುದೇ ತಾರ್ಕಿಕ ಕಾರಣಗಳಿಲ್ಲ. ಇದು ಬಾಂಗ್ಲಾದೇಶದ ಜನರಿಗೆ ನೋವುಂಟು ಮಾಡಿದೆ ಮತ್ತು ಅಸಮಾಧಾನ ಮೂಡಿಸಿದೆ,” ಎಂದು ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.​ಪ್ರತಿಭಟನೆಯ ಭಾಗವಾಗಿ, ಮುಂದಿನ ಆದೇಶದವರೆಗೆ ಬಾಂಗ್ಲಾದೇಶದಲ್ಲಿ ಐಪಿಎಲ್ ಪಂದ್ಯಗಳು ಹಾಗೂ ಅದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...