ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತೀಯ ಕಿಸಾನ್‌ ಯೂನಿಯನ್‌ ಬೆಂಬಲ

Date:

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕುಸ್ತಿ ಫೆಡರೇಷನ್‌ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ಕೋಚ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ಭಾರತೀಯ ಕಿಸಾನ್‌ ಯೂನಿಯನ್‌ ತನ್ನ ಬೆಂಬಲ ಘೋಷಿಸಿದೆ.

ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಾತನಾಡಿರುವ ರೈತ ನಾಯಕ ರಾಕೇಶ್‌ ಟಿಕಾಯತ್‌, “ನಮ್ಮ ಭಾರತೀಯ ಕುಸ್ತಿಪಟುಗಳು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಮಹಿಳಾ ಕುಸ್ತಿಪಟುಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು 3 ತಿಂಗಳ ಹಿಂದೆಯೇ ಆರೋಪಿಸಿದ್ದರು. ಈ ವಿಚಾರವನ್ನು ತನಿಖೆ ನಡೆಸಲು ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿತ್ತು. ಆದರೆ, ಆ ಸಮಿತಿ ಈವರೆಗೆ ಯಾವುದೇ ವರದಿ ನೀಡಿಲ್ಲ. ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಕೂಡ ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ. ಹೀಗಾಗಿ ಕುಸ್ತಿಪಟುಗಳು ಮತ್ತೆ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾರತೀಯ ಕಿಸಾನ್‌ ಯೂನಿಯನ್‌ ಕೂಡ ಪ್ರತಿಭಟನಾ ನಿರತರಿಗೆ ಬೆಂಬಲ ಸೂಚಿಸುತ್ತಿದೆ. ಏಪ್ರಿಲ್‌ 27ರಂದು ಸಂಘಟನೆಯ ಅಧ್ಯಕ್ಷರಾದ ನರೇಶ್‌ ಟಿಕಾಯಟ್‌ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕೇಂದ್ರಕ್ಕೆ ಸರ್ಕಾರಕ್ಕೆ ಈ ಹಿಂದೆಯೂ ಪತ್ರ ಬರೆದಿದ್ದೆವು. ಈಗ ಮತ್ತೊಮ್ಮೆ ಪತ್ರ ಬರೆಯುತ್ತೇವೆ. ಕ್ರೀಡಾಳುಗಳಿಗೆ ನ್ಯಾಯ ದೊರೆಯುವ ವರೆಗೂ ಅವರ ಜೊತೆಗಿರುತ್ತೇವೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ 7 ಮಂದಿ ಮಹಿಳಾ ಕ್ರೀಡಾಪಟುಗಳು ಬ್ರಿಜ್‌ ಭೂಷಣ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ದೂರುದಾರರಲ್ಲಿ 16ನೇ ವಯಸ್ಸಿನ ಅಪ್ರಾಪ್ತ ಕುಸ್ತಿ ಪಟು ಕೂಡ ಇದ್ದಾರೆ. ಈ ಹಿನ್ನೆಲೆ ಬ್ರಿಜ್‌ ಭೂಷಣ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಯೂ ಆಗ್ರಹಗಳು ಕೇಳಿಬಂದಿವೆ. ಭಾರತದ ಜನಪ್ರಿಯ ಕುಸ್ತಿ ಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವು ಕುಸ್ತಿಪಟುಗಳು ಕಳೆದ 4 ದಿನಗಳಿಂದ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...