ಅಂತಿಮ ಟೆಸ್ಟ್‌ | ಗೆಲುವಿನ ಬಳಿಕ ಮೊಹಮ್ಮದ್ ಸಿರಾಜ್, ಭಾರತ ತಂಡಕ್ಕೆ ಅಭಿನಂದನೆಗಳ ಸುರಿಮಳೆ

Date:

ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ಸೋಮವಾರ ಮುಕ್ತಾಯ ಕಂಡ ಆ್ಯಂಡರ್ಸನ್–ತೆಂಡೂಲ್ಕರ್ ಟೆಸ್ಟ್‌ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್‌ ಗಿಲ್ ನೇತೃತ್ವದ ಟೀಮ್ ಇಂಡಿಯಾ ಕೇವಲ 6 ರನ್‌ಗಳಿಂದ ರೋಚಕವಾಗಿ ಜಯಿಸಿದ್ದಲ್ಲದೇ, ಆತಿಥೇಯ ಇಂಗ್ಲೆಂಡ್ ತಂಡದ ಸರಣಿ ಗೆಲುವಿನ ಕನಸನ್ನು ಕೊನೆಯ ಕ್ಷಣದಲ್ಲಿ ಭಗ್ನಗೊಳಿಸಿತ್ತು.

ಟೀಮ್ ಇಂಡಿಯಾದ ಸ್ಟಾರ್ ಬೌಲರ್ 31 ವರ್ಷ ವಯಸ್ಸಿನ, ಹೈದರಾಬಾದ್‌ ಮೂಲದ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಸ್ವಿಂಗ್ ದಾಳಿಯ ಚಾಕಚಕ್ಯತೆಯಿಂದ ಇಂಗ್ಲೆಂಡ್ ಕೈಯ್ಯಲ್ಲಿದ್ದ ಪಂದ್ಯವನ್ನು ಟೀಮ್ ಇಂಡಿಯಾ ಕಡೆಗೆ ವಾಲಿಸಿದ್ದಲ್ಲದೇ, ಸರಣಿಯಲ್ಲಿ 2-2 ಅಂತರದಿಂದ ಸಮಬಲಗೊಳ್ಳುವಂತೆ ಮಾಡಿದ್ದರು.

ಇಂಗ್ಲೆಂಡ್ ತಂಡವು 3–1 ಅಂತರದಿಂದ ಸರಣಿ ಜಯಿಸಲು 5ನೇ ಟೆಸ್ಟ್‌ನ ಕೊನೆಯ ದಿನವಾದ ಸೋಮವಾರ 35 ರನ್‌ಗಳ ಅಗತ್ಯವಿತ್ತು. ಜೊತೆಗೆ ನಾಲ್ಕು ವಿಕೆಟ್‌ಗಳೂ ಇದ್ದವು. ಆದರೆ ಸಿರಾಜ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ನಡೆಸಿದ ಸಂಘಟಿತ ಬೌಲಿಂಗ್ ದಾಳಿಯಿಂದಾಗಿ ಭಾರತ ತಂಡವು ಪಂದ್ಯ ಗೆದ್ದಿದ್ದು ಮಾತ್ರವಲ್ಲದೇ, ಯಾರ ಊಹೆಗೂ ಕೂಡ ನಿಲುಕಲು ಸಾಧ್ಯವಿಲ್ಲದಂತೆ ಸರಣಿಯನ್ನು 2–2ರಿಂದ ಸಮಬಲ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಇಂಗ್ಲೆಂಡ್ ಕಳೆದುಕೊಂಡ 4 ವಿಕೆಟ್‌ಗಳ ಪೈಕಿ 3 ವಿಕೆಟ್‌ ಪಡೆದು ಓವಲ್‌ನಲ್ಲಿ ಐದು ವಿಕೆಟ್‌ ಪಡೆದು ಮೊಹಮ್ಮದ್ ಸಿರಾಜ್ ಇತಿಹಾಸ ಬರೆದರು. ಈ ಪಂದ್ಯದಲ್ಲಿ ಮೊನಚಾದ ದಾಳಿ ಸಂಘಟಿಸಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ 4 ವಿಕೆಟ್‌ ಕಬಳಿಸಿದರು. ಮೊಹಮ್ಮದ್‌ ಸಿರಾಜ್‌ ಅವರು ಅರ್ಹವಾಗಿಯೇ ಈ ಶ್ರೇಷ್ಠ ಪ್ರದರ್ಶನಕ್ಕೆ ‘ಪಂದ್ಯ ಶ್ರೇಷ್ಠ ಪ್ರಶಸ್ತಿ’ಯನ್ನೂ ಪಡೆದುಕೊಂಡರು.

ಐದು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ಎರಡರಲ್ಲಿ ಜಯ ಸಾಧಿಸಿತ್ತು. ಭಾರತ ಒಂದನ್ನು ಗೆದ್ದಿತ್ತು. ಮತ್ತೊಂದು ಪಂದ್ಯ ಡ್ರಾ ಆಗಿತ್ತು. ಕೊನೆಯ ಟೆಸ್ಟ್ ಪಂದ್ಯವನ್ನು ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಗೆದ್ದ ಹಿನ್ನೆಲೆಯಲ್ಲಿ ಸರಣಿ 2-2 ಸಮಬಲ ಆಗಿದೆ.

ಅಭಿನಂದನೆಗಳ ಸುರಿಮಳೆ

ಟೀಮ್ ಇಂಡಿಯಾ 6 ರನ್‌ಗಳಿಂದ ರೋಚಕವಾಗಿ ಗೆದ್ದ ಬಳಿಕ ಮೊಹಮ್ಮದ್ ಸಿರಾಜ್ ಹಾಗೂ ಟೀಮ್ ಇಂಡಿಯಾಕ್ಕೆ ಸೋಷಿಯಲ್ ಮೀಡಿಯಾಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಮಾಜಿ ಆಟಗಾರರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಸೇರಿದಂತೆ ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್‌ ಇಂಡೀಸ್‌, ಸೌತ್ ಆಫ್ರಿಕಾ ಸೇರಿದಂತೆ ಹಲವು ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ತಾರೆಯರು ಅಭಿನಂದನೆಗಳ ಮಹಾಪೂರವೇ ಹರಿಸಿದ್ದಾರೆ. ಜೊತೆಗೆ ರಾಜಕೀಯ, ಸಿನಿಮಾ ನಟರು ಕೂಡ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸೋಷಿಯಲ್ ಮೀಡಿಯಾಗಳಲ್ಲೂ ಕೂಡ ಜನರು ಟೀಮ್ ಇಂಡಿಯಾದ ‘ಪರ್ಫಾಮೆನ್ಸ್‌’ಗೆ ಫಿದಾ ಆಗಿ, ಸಿರಾಜ್ ಅವರನ್ನು ನ್ಯಾಷನಲ್ ಹೀರೋ ಎಂದು ಬಣ್ಣಿಸಿದ್ದಾರೆ.

ಇದನ್ನು ಓದಿದ್ದೀರಾ? 5ನೇ ಟೆಸ್ಟ್‌ | ಸಿರಾಜ್ ಮ್ಯಾಜಿಕ್: ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 6 ರನ್‌ಗಳ ರೋಚಕ ಜಯ

ತೆಲಂಗಾಣದ ಹೈದರಾಬಾದ್‌ನವರಾದ ಮೊಹಮ್ಮದ್ ಸಿರಾಜ್, ತೆಲಂಗಾಣ ಪೊಲೀಸ್ ಇಲಾಖೆಯಲ್ಲಿ ಗೌರವ ಡಿಎಸ್‌ಪಿಯಾಗಿಯೂ ಈ ಹಿಂದೆ ನೇಮಕಗೊಂಡಿದ್ದರು. ಟೀಮ್ ಇಂಡಿಯಾದ ಗೆಲುವಿನ ಬೆನ್ನಲ್ಲೇ ತೆಲಂಗಾಣ ಪೊಲೀಸರು ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...