ಲೈಂಗಿಕ ದೌರ್ಜನ್ಯವೆಸಗಿದ ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ ಎಫ್‌ಐಆರ್

Date:

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಆರ್‌ಸಿಬಿ ತಂಡದ ಬೌಲರ್ ಯಶ್ ದಯಾಳ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್‌ ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿದ್ದ ಯಶ್‌ ದಯಾಳ್‌, ದೈಹಿಕ ಸಂಪರ್ಕ ಬೆಳೆಸಿದ ನಂತರ ಇದೀಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದು, ಈ ಮೂಲಕ ವಂಚಿಸಿದ್ದಾರೆ ಎಂದು ಗಾಜಿಯಾಬಾದ್ ಮಹಿಳೆಯೊಬ್ಬರು ದೂರು ನೀಡಿದ್ದರು. ಇದಾಗಿ 10 ದಿನಗಳ ಬಳಿಕ ಎಫ್‌ಐಆರ್‌ ದಾಖಲಾಗಿದೆ.

ಯಶ್‌ ದಯಾಳ್‌ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅದನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಗಾಜಿಯಾಬಾದ್‌ನ ಪೊಲೀಸ್ ಉಪ ಆಯುಕ್ತ ಪಾಟೀಲ್ ನಿಮಿಶ್ ದಶರತ್ ಅವರು ಹೇಳಿದ್ದಾರೆ. ‘ನಾವು ಯಶ್ ದಯಾಳ್‌ ಅವರ ವಿರುದ್ಧ ಬಿಎನ್ಎಸ್ ಸೆಕ್ಷನ್ 69 (ಲೈಂಗಿಕ ಸಂಪರ್ಕ, ವಿವಾಹದ ಸುಳ್ಳು ಭರವಸೆ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮತ್ತಷ್ಟು ತನಿಖೆ ನಡೆಸುತ್ತಿದ್ದೇವೆ,” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಯ ಆನ್‌ಲೈನ್ ಕುಂದುಕೊರತೆ ಪೋರ್ಟಲ್ ಐಜಿಆರ್‌ಎಸ್‌ನಲ್ಲಿ ಕ್ರಿಕೆಟಿಗನ ವಿರುದ್ಧ ಮಹಿಳೆ ಮೊದಲ ಬಾರಿಗೆ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಎಫ್‌ಐಆರ್‌ನಲ್ಲಿ, ಐದು ವರ್ಷಗಳಿಂದ ಇಬ್ಬರೂ ಒಟ್ಟಿಗೆ ಇದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ENG TEST | ಗಿಲ್‌ ನಿರ್ಮಿಸಿದ 10 ದಾಖಲೆಗಳು; 93 ವರ್ಷಗಳ ಬಳಿಕ ಟೀಂ ಇಂಡಿಯಾ ಸಾಧನೆ

ಈ ಸಮಯದಲ್ಲಿ ಯಶ್ ದಯಾಳ್‌ ಮಹಿಳೆಯನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಬಳಸಿಕೊಂಡಿದ್ದರು. ಇದಕ್ಕೆ ಚಾಟ್ ರೆಕಾರ್ಡ್ಸ್, ಸ್ಕ್ರೀನ್‌ಶಾಟ್‌ಗಳು, ವಿಡಿಯೋ ಕರೆಗಳು ಮತ್ತು ಫೋಟೋಗಳ ಸಾಕಷ್ಟು ಪುರಾವೆಗಳನ್ನೂ ನೀಡಿದ್ದಾರೆ.

“ಮದುವೆಯಾಗುವ ಭರವಸೆ ನೀಡಿ ನನ್ನೊಂದಿಗೆ ಪದೇ ಪದೇ ದೈಹಿಕ ಸಂಬಂಧ ಬೆಳೆಸಿದ್ದರು. ಅವರ ಕುಟುಂಬಕ್ಕೂ ನನ್ನನ್ನು ಪರಿಚಯಿಸಿದ್ದರು. ನಾನು ಅವರ ಸೊಸೆ ಎಂದು ಭರವಸೆ ನೀಡಿದ್ದರು. ಇದನ್ನೇ ನಂಬಿ ನಾನು ಸಂಬಂಧ ಉಳಿಸಿಕೊಂಡಿದ್ದೆ,” ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಆದರೆ, ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾರೆ. ಇದರಿಂದಾಗಿ ನಾನು ಖಿನ್ನತೆಯಿಂದ ಬಳಲುತ್ತಿದ್ದು, ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ಕೂಡ ಯತ್ನಿಸಿದ್ದೆ ಎಂದು ತಿಳಿಸಿದ್ದಾರೆ.

ಯಶ್‌ ದಯಾಳ್ ಈ ವರ್ಷ ಆರ್‌ಸಿಬಿ ಪರ 15 ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 13 ವಿಕೆಟ್‌ಗಳನ್ನು ಗಳಿಸಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಟ್ರೋಫಿ ಗೆಲ್ಲಲು ಪ್ರಮುಖ ಕಾರಣರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...