ಮೊದಲ ಟಿ20 | ಅಭಿಷೇಕ್ 34 ಎಸೆತಗಳಲ್ಲಿ 79; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ

Date:

ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಕೋಲ್ಕತ್ತಾದ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಭಾರತ ತಂಡ ಏಳು ವಿಕೆಟ್‌ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 132 ರನ್ ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಭಾರತದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಅಭಿಷೇಕ್ ಶರ್ಮಾ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಸಾಲ್ಟ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಬೆನ್ ಡಕೆಟ್​ ಕೂಡ 4 ರನ್​ಗಳಿಗೆ ಸುಸ್ತಾದರು. ಬ್ರೂಕ್ ಇನ್ನಿಂಗ್ಸ್ 17 ರನ್​​ಗಳಿಗೆ ಅಂತ್ಯವಾದರೆ, ಆ ನಂತರ ಬಂದ ಲಿವಿಂಗ್ಸ್ಟನ್ ಬಂದಷ್ಟೇ ವೇಗವಾಗಿ ಸೊನ್ನೆಗೆ ಪೆವಿಲಿಯನ್‌ ಪಾಲಾದರು. ಯುವ ಆಟಗಾರ ಬೆಥೆಲ್ ಕೂಡ 7 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 68 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ ಯಾವ ಬ್ಯಾಟರ್​ಗೂ ಭಾರತದ ಬೌಲರ್​ಗಳ ಮುಂದೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಇತ್ತ ಭಾರತದ ಪರ ಮಾರಕ ದಾಳಿ ನಡೆಸಿದ ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ಅದ್ಭುತ ಬೌಲಿಂಗ್ ಮಾಡಿದರು. ಅರ್ಷದೀಪ್ ಸಿಂಗ್ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್​ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಕೂಡ ಉತ್ತಮ ಬೌಲಿಂಗ್ ಮಾಡಿ ತಲಾ 2 ವಿಕೆಟ್ ಪಡೆದರು.

ಇದನ್ನು ಓದಿದ್ದೀರಾ?: ಕ್ರಿಕೆಟ್ | ಬಿಸಿಸಿಐನ ಕೆಟ್ಟ ರಾಜಕಾರಣದಿಂದ ಮರೆಯಾದ ಮಿಂಚಿನ ಆಟಗಾರರು

ಇಂಗ್ಲೆಂಡ್ ನೀಡಿದ 132 ರನ್​ಗಳ ಕಡಿಮೆ ಮೊತ್ತವನ್ನು ಬೆನ್ನಟ್ಟಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಮೊದಲ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ನೀಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ, ಆರ್ಚರ್ ಮೊದಲು ಸ್ಯಾಮ್ಸನ್ (26) ಮತ್ತು ನಂತರ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಭಾರತದ ಇನ್ನಿಂಗ್ಸ್ ಅನ್ನು ಹಳಿತಪ್ಪಿಸಿದರು. ಆದರೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಇಂಗ್ಲೆಂಡ್‌ನ ಪ್ರತಿಯೊಬ್ಬ ಬೌಲರ್‌ನನ್ನು ದಂಡಿಸಿದ ಅಭಿಷೇಕ್ ಇದರೊಂದಿಗೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಜಂಟಿ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಆದಿಲ್ ರಶೀದ್ ಎಸೆತದಲ್ಲಿ ವಿಕೆಟ್ ಒಪ್ಪಿಸುವುದಕ್ಕೂ ಮುನ್ನ ಅಭಿಷೇಕ್ ಕೇವಲ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 8 ಸಿಕ್ಸರ್​ಗಳ ಸಹಿತ 79 ರನ್ ಕಲೆಹಾಕಿದರು. ಆ ನಂತರ ತಿಲಕ್ ವರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಗೆಲುವಿನ ಔಪಚಾರಿಕತೆಯನ್ನು ಪೂರ್ಣಗೊಳಿಸಿದರು. ತಿಲಕ್ 16 ಎಸೆತಗಳಲ್ಲಿ 19 ರನ್ ಗಳಿಸಿ ಅಜೇಯರಾಗಿ ಉಳಿದರೆ, ಹಾರ್ದಿಕ್ ನಾಲ್ಕು ಎಸೆತಗಳಲ್ಲಿ ಮೂರು ರನ್ ಗಳಿಸಿ ಅಜೇಯರಾಗಿ ಮರಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...