ಟಿ20: ಭಾರತದ ವಿರುದ್ಧ ರೋಚಕ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್

Date:

ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 4 ರನ್’ಗಳ ರೋಚಕ ಗೆಲುವು ಸಾಧಿಸಿತು.

ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ವೆಸ್ಟ್ಇಂಡೀಸ್ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 149 ರನ್‌ ಗಳಿಸಿತ್ತು. ‌‌ಈ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 144 ರನ್‌ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ತಂಡ 1–0 ಮುನ್ನಡೆ ಸಾಧಿಸಿತು.

ವಿಂಡೀಸ್ ಪರ ಜೇಸನ್ ಹೋಲ್ಡರ್ 19/2, ಒಬೆಡ್ ಮೆಕಾಯ್ (28/2) ಶೆಫರ್ಡ್ (33\ 2) ವಿಕೆಟ್ ಪಡೆದು ತಂಡದ ಜಯದ ರೂವಾರಿಗಳಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಧಾರಣ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಟಗಾರರಾದ ಇಶಾನ್‌ ಕಿಶಾನ್‌ (6) ಮತ್ತು ಶುಭಮನ್‌ ಗಿಲ್‌ (3) ಉತ್ತಮ ಅಡಿಪಾಯ ಹಾಕುವಲ್ಲಿ ಎಡವಿದರು.

ಸೂರ್ಯಕುಮಾರ್‌ ಯಾದವ್‌ (21), ತಿಲಕ್‌ ವರ್ಮಾ (39) ಮತ್ತು ನಾಯಕ ಹಾರ್ದಿಕ್‌ ಪಾಂಡ್ಯ (19) ಮಧ್ಯಮ ಕ್ರಮಾಂಕದಲ್ಲಿ ಒಂಚೂರು ಯಶಸ್ವಿಯಾದರೂ ಗೆಲುವಿನ ದಡ ಸೇರಿಸಲು ವಿಫಲವಾದರು.

ಇದಕ್ಕೂ ಮೊದಲು ಟಾಸ್ ಗೆದ್ದು ಆರಂಭಿಸಿದ ವೆಸ್ಟ್ ಇಂಡೀಸ್ ತಂಡ ಐಪಿಎಲ್ ಹೀರೊ ನಿಕೊಲಸ್ ಪೂರನ್ (41) ಮತ್ತು ನಾಯಕ ರೋ‌ವ್ಮನ್ ಪೊವೆಲ್ (48) ತಂಡಕ್ಕೆ ಬಲ ತುಂಬಿ 149 ರನ್ ಕಲೆ ಹಾಕಿದರು.

ಸಂಕ್ಷಿಪ್ತ ಸ್ಕೋರು:

ವೆಸ್ಟ್ ಇಂಡೀಸ್: 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 149 (ಬ್ರೆಂಡನ್ ಕಿಂಗ್ 28, ನಿಕೊಲಸ್ ಪೂರನ್ 41, ರೋವ್ಮನ್ ಪೊವೆಲ್ 48, ಆರ್ಷದೀಪ್ ಸಿಂಗ್ 31ಕ್ಕೆ2, ಯಜುವೇಂದ್ರ ಚಾಹಲ್ 24ಕ್ಕೆ2)

ಭಾರತ: ಸೂರ್ಯಕುಮಾರ್‌ ಯಾದವ್ 21, ತಿಲಕ್‌ ವರ್ಮಾ 39, ಹಾರ್ದಿಕ್‌ ಪಾಂಡ್ಯ 19, ಜೇಸನ್ ಹೋಲ್ಡರ್ 19/2, ಒಬೆಡ್ ಮೆಕಾಯ್ (28/2) ಶೆಫರ್ಡ್ (33\ 2)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...