ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್‌ | ತವರಲ್ಲಿ ಶತಕ ಬಾರಿಸಿ ಮಿಂಚಿದ ಅಶ್ವಿನ್; 4 ವಿಕೆಟ್ ಕಿತ್ತ ಹಸನ್‌ ಮಹಮೂದ್‌

Date:

ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದೆ. ದಿನದಾಟದಂತ್ಯಕ್ಕೆ ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡಿದ್ದು, ಆರ್ ಅಶ್ವಿನ್ ಅವರ ಶತಕ ಹಾಗೂ ಜಡೇಜಾ ಅರ್ಧಶತಕದ ನೆರವಿನಿಂದ 339 ರನ್ ಕಲೆಹಾಕಿದೆ.

195 ರನ್​ಗಳ ಜೊತೆಯಾಟ ನಡೆಸಿದ ಅಶ್ವಿನ್ ಹಾಗೂ ಜಡೇಜಾ ಮೊದಲ ದಿನದಾಟದ ಅಂತ್ಯದ ವೇಳೆಗೆ ಹೀರೋಗಳೆನಿಸಿಕೊಂಡರೆ, ಬಾಂಗ್ಲಾ ಪರ ಬೌಲಿಂಗ್‌ನಲ್ಲಿ ಯುವ ಆಟಗಾರ ಹಸನ್‌ ಮಹಮೂದ್‌ ಅವರು ಪ್ರಮುಖ ನಾಲ್ಕು ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ.

ಮೊದಲ ದಿನದಾಟದ ಅಂತ್ಯದ ವೇಳೆಗೆ ರವಿಚಂದ್ರನ್ ಅಶ್ವಿನ್ 112 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 10 ಬೌಂಡರಿಗಳ ನೆರವಿನಿಂದ 102 ರನ್ ಗಳಿಸಿ ಔಟಾಗದೆ ಉಳಿದಿದ್ದು, ಮೊದಲ ದಿನವೇ ಮೂಲಕ ತಮ್ಮ ತವರು ರಾಜ್ಯದಲ್ಲಿ ಮಿಂಚಿದ್ದಾರೆ. 117 ಎಸೆತಗಳಲ್ಲಿ 86 ರನ್(2 ಸಿಕ್ಸರ್ ಹಾಗೂ 10 ಬೌಂಡರಿ) ಗಳಿಸಿರುವ ರವೀಂದ್ರ ಜಡೇಜಾ, ಎರಡನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತಕ್ಕೆ ಆರಂಭಿಕ ಆಘಾತ ನೀಡಿದ್ದ ಯುವ ಬೌಲರ್ ಹಸನ್‌ ಮಹಮೂದ್‌

ಮೊದಲು ಟೆಸ್ಟ್‌ನಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್‌ ಮಾಡಲು ಮುಂದಾಯಿತು. ಮೊದಲಾವಧಿಯ ಸಂಪೂರ್ಣ ಲಾಭ ಪ್ರವಾಸಿ ತಂಡದ ಪಾಲಾಗಿತ್ತು. ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಬಾಂಗ್ಲಾ ಬೌಲರ್‌ಗಳ ಕರಾರುವಕ್ಕಾದ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು.

WhatsApp Image 2024 09 19 at 5.28.27 PM

ಚೆನ್ನೈನ ಕೆಂಪು ಮಣ್ಣಿನ ಪಿಚ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭದಲ್ಲಿ ಒತ್ತಡಕ್ಕೆ ಒಳಗಾಯಿತು. ಬಾಂಗ್ಲಾ ವೇಗಿಗಳ ಶಿಸ್ತು ಬದ್ಧ ದಾಳಿಯನ್ನು ಎದುರಿಸುವಲ್ಲಿ ವಿಫಲರಾದ ಟೀಮ್ ಇಂಡಿಯಾ ಬ್ಯಾಟರ್‌ಗಳು 96 ರನ್ ಗಳಿಸುಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿದ್ದರು. ಇದಕ್ಕೆ ಕಾರಣವಾದದ್ದು ಬಾಂಗ್ಲಾದ ಯುವ ಬೌಲರ್ ಹಸನ್‌ ಮಹಮೂದ್‌.

ಇದನ್ನು ಓದಿದ್ದೀರಾ? ಬೆಂಗಳೂರು | ಮುಸ್ಲಿಮರು ವಾಸಿಸುವ ಪ್ರದೇಶವನ್ನು ‘ಪಾಕಿಸ್ತಾನ’ ಎಂದ ಹೈಕೋರ್ಟ್‌ ನ್ಯಾಯಾಧೀಶ

ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ(6 ರನ್), ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(6 ರನ್), 39 ರನ್ ಗಳಿಸಿದ್ದ ರಿಷಭ್ ಪಂತ್ ಹಾಗೂ ಶುಭ್‌ಮನ್ ಗಿಲ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕೀಳುವ ಮೂಲಕ ಮಿಂಚಿದರು.

ಉಳಿದಂತೆ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಅರ್ಧಶತಕ(56 ರನ್) ಗಳಿಸಿದರೆ, ಕೆ ಎಲ್ ರಾಹುಲ್ 16 ರನ್ ಗಳಿಸಿದರು. ಜೈಸ್ವಾಲ್ ನಹೀದ್ ರಾಣಾಗೆ ವಿಕೆಟ್ ಒಪ್ಪಿಸಿದರೆ, ರಾಹುಲ್ ಹಸನ್ ಮಿರಾಝ್‌ಗೆ ವಿಕೆಟ್ ಒಪ್ಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...