ಭಾರತದ 124 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಹಲವು ದಾಖಲೆಗಳನ್ನು ಬರೆದ ಮನು ಭಾಕರ್

Date:

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್‌ ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಇಂದು(ಜುಲೈ 30) ಮಿಶ್ರ ವಿಭಾಗದಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. 10 ಮೀಟರ್‌ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ಅವರನ್ನು 16 – 10 ಅಂತರದಿಂದ ಸೋಲಿಸಿ ಭಾರತದ ಪದಕದ ಸಂಖ್ಯೆಯನ್ನು ಎರಡಕ್ಕೇರಿಸಿದರು. ಇದರೊಂದಿಗೆ ಮನು ಭಾಕರ್ ಭಾರತದ ಒಲಿಂಪಿಕ್ಸ್ ಇತಿಹಾಸದಲ್ಲಿ ಕ್ರೀಡಾಪಟುವೊಬ್ಬರು ಏಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಎರಡು ಪದಕ ಗೆದ್ದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ಮನು ಭಾಕರ್ ಅವರು 10 ಮೀಟರ್ ಏರ್‌ ಪಿಸ್ತೂಲ್‌ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಜಯಗಳಿಸಿದ್ದರು.

ಭಾಕರ್ 10 ಮೀ. ಏರ್‌ ಪಿಸ್ತೂಲ್‌ ಮಹಿಳೆಯರ ವಿಭಾಗದಲ್ಲಿ ಪದಕ ಗೆದ್ದ ಮೊದಲಿಗರಾದರೆ, ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಮುಡಿಗೇರಿಸಿಕೊಂಡ ಮೊದಲ ಕ್ರೀಡಾಪಟುವೆನಿಸಿದರು. ಅಲ್ಲದೆ ಭಾರತವು ದಕ್ಷಿಣ ಕೊರಿಯಾ ತಂಡವನ್ನು ಫೈನಲ್‌ನಲ್ಲಿ ಮಣಿಸಿರುವುದು ಇದೇ ಮೊದಲ ಬಾರಿಯಾಗಿದೆ.

ಒಲಿಂಪಿಕ್ಸ್‌ ಆರಂಭವಾದ 124 ವರ್ಷಗಳಲ್ಲಿ ಭಾರತದ ಸ್ಪರ್ಧಿಯೊಬ್ಬರು ಏಕ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಜಯಿಸಿರುವುದು ಇದು ಎರಡನೇ ಬಾರಿ. ಮೊದಲನೆಯದಾಗಿ 1900ರಲ್ಲಿ ಬ್ರಿಟಿಷ್‌ ಆಡಳಿತದ ಅವಧಿಯಲ್ಲಿ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಆಂಗ್ಲ ಭಾರತೀಯರಾದ ನಾರ್ಮನ್‌ ಪ್ರಿಟ್‌ಚಾರ್ಡ್ ಎಂಬುವವರು 200 ಮೀಟರ್‌ ಹರ್ಡಲ್ಸ್‌ನಲ್ಲಿ 2 ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಇದರ ನಂತರ ಯಾರೊಬ್ಬರು ಭಾರತದ ಪರವಾಗಿ ಎರಡು ಪದಕಗಳನ್ನು ಜಯಿಸಿಲ್ಲ. ಅಲ್ಲದೆ ಇದು ಎರಡನೇ ಆಧುನಿಕ ಒಲಿಂಪಿಕ್ಸ್‌ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024 | ಭಾರತಕ್ಕೆ ಮೊದಲ ಪದಕ; 10 ಮೀಟರ್‌ ಏರ್‌ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್‌

ಇದನ್ನು ಹೊರತುಪಡಿಸಿದರೆ ಭಾರತದ ಆಟಗಾರರು ಸತತ ಎರಡು ಒಲಿಂಪಿಕ್ಸ್‌ನಲ್ಲಿ ಎರಡು ಒಲಿಂಪಿಕ್ಸ್‌ ಗೆದ್ದ ದಾಖಲೆ ಹೊಂದಿದ್ದಾರೆ. ಕುಸ್ತಿ ವಿಭಾಗದಲ್ಲಿ ಸುಶೀಲ್‌ ಕುಮಾರ್ ಹಾಗೂ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪಿ ವಿ ಸಿಂಧು ವೈಯಕ್ತಿಕವಾಗಿ ಎರಡು ಪದಕಗಳನ್ನು ಗೆದ್ದಿದ್ದರು.

2008ರ ಬೀಜಿಂಗ್‌ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಕುಮಾರ್ 66 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದರೆ, 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಅದೇ ವಿಭಾಗದ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದರು. ವೈಯಕ್ತಿಕ ವಿಭಾಗದಲ್ಲಿ ಇದು ಕ್ರೀಡಾಳುವೊಬ್ಬರು ಎರಡು ವಿವಿಧ ಕ್ರೀಡಾಕೂಟದಲ್ಲಿ ಎರಡು ಪದಕ ಗೆದ್ದ ಮೊದಲ ದಾಖಲೆಯಾಗಿತ್ತು.

ನಂತರದಲ್ಲಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದರು. ಭಾರತದ ಒಲಿಂಪಿಕ್ಸ್‌ ಇತಿಹಾಸದಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಮಹಿಳೆಯೊಬ್ಬರು ಬೆಳ್ಳಿ ಪದಕ ಗೆದ್ದಿದ್ದು ಇದೇ ಮೊದಲಾಗಿತ್ತು. ಸಿಂಧು ಅವರು ನಂತರ 2021ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದರು. ಇದು ಕೂಡ ಮಹಿಳೆಯೊಬ್ಬರು ಸತತ ಎರಡು ಪದಕ ಗೆದ್ದಿದ್ದು ನೂತನ ದಾಖಲೆಯಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...