ಟೀಮ್ ಇಂಡಿಯಾವನ್ನು ಆಲೌಟ್ ಮಾಡಿ ಏಪ್ಯಾ ಕಪ್‌ನಲ್ಲಿ ಹೊಸ ದಾಖಲೆ ಬರೆದ ಪಾಕ್ ವೇಗಿಗಳು

Date:

  • ಎಲ್ಲ 10 ವಿಕೆಟ್‌ಗಳು ಪಾಕಿಸ್ತಾನದ ವೇಗಿಗಳ ಪಾಲು; ವಿಶಿಷ್ಟ ದಾಖಲೆ
  • ಮಳೆಯಿಂದಾಗಿ ರದ್ದಾದ ಪಂದ್ಯದಲ್ಲಿ ಭಾರತ 48.5 ಓವರ್‌ಗಳಲ್ಲಿ 266 ರನ್

ಏಷ್ಯಾಕಪ್ 2023ರಲ್ಲಿ ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಪೂರ್ಣಗೊಳ್ಳದೆ ಮಳೆಯಿಂದಾಗಿ ರದ್ದಾಯಿತು.

ಟೀಮ್ ಇಂಡಿಯಾದ ಬ್ಯಾಟಿಂಗ್ ಇನ್ನಿಂಗ್ಸ್ ಮುಕ್ತಾಯದ ಬಳಿಕ ಶುರುವಾದ ಮಳೆ ನಿಲ್ಲಲೇ ಇಲ್ಲ. ಕೆಲ ಹೊತ್ತು ಕಾದರೂ ಪಾಕಿಸ್ತಾನಕ್ಕೆ ಟಾರ್ಗೆಟ್ ಬೆನ್ನಟ್ಟಲು ಮಳೆ ಅವಕಾಶ ನೀಡಲಿಲ್ಲ. ಹೀಗಾಗಿ ಅಂತಿಮವಾಗಿ ಪಂದ್ಯವನ್ನು ರದ್ದು ಮಾಡಲಾಯಿತು.

ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಹೀಗಾಗಿ ಭಾರತ ಒಂದು ಅಂಕ ಸಂಪಾದಿಸಿದ್ದರೆ, ಉದ್ಘಾಟನಾ ಪಂದ್ಯದಲ್ಲಿ ನೇಪಾಳದ ವಿರುದ್ಧ ಗೆದ್ದಿದ್ದ ಕಾರಣಕ್ಕೆ ಪಾಕಿಸ್ತಾನ ಒಟ್ಟು ಮೂರು ಪಾಯಿಂಟ್ ಸಂಪಾದಿಸಿದೆ. ಈ ಮೂಲಕ ಬಾಬರ್ ಆಝಂ ಪಡೆ ಸೂಪರ್-4 ಹಂತಕ್ಕೂ ತೇರ್ಗಡೆ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಕೇವಲ ಒಂದು ಅಂಕ ಹೊಂದಿರುವ ಭಾರತ, ಸೂಪರ್ ಫೋರ್ ಹಂತಕ್ಕೆ ತೇರ್ಗಡೆಯಾಗಲು ಸೆ.4 ರಂದು ತನ್ನ ಮುಂದಿನ ಪಂದ್ಯದಲ್ಲಿ ನೇಪಾಳವನ್ನು ಸೋಲಿಸಬೇಕಿದೆ.

ಈ ನಡುವೆ ಇದೇ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಆಲೌಟ್ ಮಾಡಿದ್ದ ಪಾಕಿಸ್ತಾನ ಬೌಲರ್‌ಗಳು ಹೊಸ ದಾಖಲೆ ಬರೆದಿದ್ದಾರೆ.

ಶನಿವಾರದ ಏಷ್ಯಾಕಪ್ ಮುಖಾಮುಖಿಯಲ್ಲಿ ಪಾಕಿಸ್ತಾನದ ವೇಗಿಗಳಾದ ಶಾಹೀನ್ ಶಾ ಅಫ್ರಿದಿ, ಹಾರಿಸ್ ರವೂಫ್ ಮತ್ತು ನಸೀಮ್ ಶಾ ಅವರು ಎಲ್ಲ 10 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ ಪಂದ್ಯಾವಳಿಯಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.

ರೋಹಿತ್ ಪಡೆಯನ್ನು 266 ಕ್ಕೆ ನಿರ್ಬಂಧಿಸಿದ್ದ ಈ ಮೂವರು ವೇಗಿಗಳು, ಏಷ್ಯಾ ಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಇನ್ನಿಂಗ್ಸ್‌ನ ಎಲ್ಲ 10 ವಿಕೆಟ್‌ಗಳು ಕೇವಲ ವೇಗಿಗಳ ಪಾಲಾಗಿದೆ. ಕೇವಲ ವೇಗಿಗಳೇ ಮಾತ್ರ ಎಲ್ಲ ವಿಕೆಟ್ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಪಾಕ್‌ನ ಮೂವರು ಸ್ಪಿನ್ನರ್‌ಗಳು ಬೌಲಿಂಗ್ ನಡೆಸಿದ್ದಾರಾದರೂ, ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು.

ನಿನ್ನೆಯ ಪಂದ್ಯದಲ್ಲಿ ಪಾಕ್ ಪರ ಬೌಲಿಂಗ್‌ನಲ್ಲಿ ವೇಗಿಗಳಾದ ಶಾಹೀನ್ ಅಫ್ರಿದಿ 35 ರನ್ ನೀಡಿ 4 ವಿಕೆಟ್ ಗಳಿಸಿ ಯಶಸ್ವಿಯಾದರೆ, ಹಾರಿಸ್ ರವೂಫ್ ನಸೀಂ ಶಾ ತಲಾ ಮೂರು ವಿಕೆಟ್‌ಗಳನ್ನು ಪಡೆಯುವಲ್ಲಿ ಸಫಲರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...