ಮುಂಬೈ – ರಾಜಸ್ಥಾನ್ ಐಪಿಎಲ್ ಪಂದ್ಯ; ಚಾಹಲ್ – ಜೈಸ್ವಾಲ್ ವಿನೂತನ ದಾಖಲೆ

Date:

ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ(ಏ.22) ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಪಡೆಯಿತು.

ಸಂದೀಪ್ ಶರ್ಮಾ ಬೌಲಿಂಗ್(18/5) ಹಾಗೂ ಯಶಸ್ವಿ ಜೈಸ್ವಾಲ್ ಅಜೇಯ ಶತಕದ(104) ನೆರವಿನಿಂದ ಆರ್‌ಆರ್‌ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿತು. 180 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ 18.4 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಈ ಪಂದ್ಯದಲ್ಲಿ ಜೈಸ್ವಾಲ್ ಹಾಗೂ ಚಾಹಲ್ ವಿನೂತನ ದಾಖಲೆ ಮಾಡಿದರು

ಐಪಿಎಲ್‌ನಲ್ಲಿ 200 ವಿಕೆಟ್ ಕಬಳಿಸಿದ ಮೊದಲ ಬೌಲರ್ ಚಾಹಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಪಿಎಲ್ ಇತಿಹಾಸದಲ್ಲೇ 200 ವಿಕೆಟ್ ಗಳಿಸಿದ ಮೊದಲ ಬೌಲರ್ ಎಂಬ ಖ್ಯಾತಿಗೆ ಯಜುವೇಂದ್ರ ಚಾಹಲ್ ಪಾತ್ರರಾದರು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ನಬಿ ವಿಕೆಟ್ ಪಡೆದ ಚಾಹಲ್ ತಮ್ಮ 153ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದರು. ಚಾಹಲ್‌ ನಂತರದ ಸ್ಥಾನದಲ್ಲಿ ಡ್ವೇನ್ ಬ್ರಾವೊ 183, ಪಿಯೂಷ್ ಚಾವ್ಲಾ 182, ಭುವನೇಶ್ವರ ಕುಮಾರ್ 174 ಹಾಗೂ ಅಮಿತ್ ಮಿಶ್ರಾ 173 ಇದ್ದಾರೆ

ಈ ಸುದ್ದಿ ಓದಿದ್ದೀರಾ? ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ಶೇ.50 ರಷ್ಟು ದಂಡ

ಜೈಸ್ವಾಲ್ 2ನೇ ಶತಕ ಸಾಧನೆ

ಆರ್‌ಆರ್‌ನ ಉದಯೋನ್ಮುಖ ಸ್ಫೋಟಕ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಐಪಿಎಲ್‌ನಲ್ಲಿ ಎರಡನೇ ಶತಕ ಗಳಿಸಿದರು. ಈ ಎರಡೂ ಶತಕಗಳು ಮುಂಬೈ ಇಂಡಿಯನ್ಸ್ ವಿರುದ್ಧವೇ ದಾಖಲಾಗಿರುವುದು ಗಮನಾರ್ಹ. 60 ಎಸೆತಗಳಲ್ಲಿ ಅಜೇಯ 104 ರನ್ ಗಳಿಸಿದ ಜೈಸ್ವಾಲ್ ತಮ್ಮ ಇನಿಂಗ್ಸ್‌ನಲ್ಲಿ ಒಂಬತ್ತು ಬೌಂಡರಿ ಹಾಗೂ ಏಳು ಸಿಕ್ಸರ್‌ಗಳು ಸೇರಿದ್ದವು. ನಾಯಕ ಸಂಜು ಸ್ಯಾಮ್ಸನ್ ಜೊತೆ ಮುರಿಯದ ಎರಡನೇ ವಿಕೆಟ್‌ಗೆ 109 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

ಸಂದೀಪ್ ಶರ್ಮಾ ಚೊಚ್ಚಲ ಐದು ವಿಕೆಟ್

ರಾಜಸ್ಥಾನದ 30 ವರ್ಷದ ಮಧ್ಯಮ ವೇಗಿ ಸಂದೀಪ್ ಶರ್ಮಾ, ಮೊದಲ ಬಾರಿ ಐಪಿಎಲ್‌ನಲ್ಲಿ 5 ವಿಕೆಟ್‌ ಪಡೆದು ಮಿಂಚಿದರು. ಕೇವಲ 18 ರನ್ ನೀಡಿ ಸಂದೀಪ್ ಐದು ವಿಕೆಟ್‌ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಎಂಟು ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ರಾಜಸ್ಥಾನ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಮೂರು ಗೆಲುವು, ಐದು ಸೋಲಿನೊಂದಿಗೆ ಆರು ಅಂಕ ಗಳಿಸಿದ್ದು, ಏಳನೇ ಸ್ಥಾನದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...