ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ : ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

Date:

  • ಮೂರು ಟಿ20, ಮೂರು ಏಕದಿನ ಪಂದ್ಯ, ಎರಡು ಟೆಸ್ಟ್ ಸರಣಿ
  • ಗಾಂಧಿ-ಮಂಡೇಲಾ ಹೆಸರಿನಲ್ಲಿ ಫ್ರೀಡಮ್ ಸರಣಿ ಟೆಸ್ಟ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ)ವು 2023ರ ಡಿಸೆಂಬರ್ ಮತ್ತು 2024ರ ಜನವರಿಯಲ್ಲಿ ಟೀಮ್ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿರುವ ಎಲ್ಲ ಮಾದರಿಯ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ.

“ಟೀಮ್ ಇಂಡಿಯಾದ ಈ ಪ್ರವಾಸವು ಮೂರು ಪಂದ್ಯಗಳ T20 ಸರಣಿಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಟೆಸ್ಟ್‌ ಪಂದ್ಯವು ಗಾಂಧಿ-ಮಂಡೇಲಾ ಟ್ರೋಫಿಗಾಗಿ ಫ್ರೀಡಮ್ ಸರಣಿಯೊಂದಿಗೆ ಮುಕ್ತಾಯಗೊಳ್ಳುತ್ತದೆ” ಎಂದು ಬಿಸಿಸಿಐ ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

“ಫ್ರೀಡಂ ಸರಣಿಯು ಎರಡು ಅತ್ಯುತ್ತಮ ಟೆಸ್ಟ್ ತಂಡಗಳನ್ನು ಒಳಗೊಂಡಿರುವುದು ಮಾತ್ರವಲ್ಲ, ನಮ್ಮ ರಾಷ್ಟ್ರಗಳನ್ನು ಮತ್ತು ಸುತ್ತಮುತ್ತಲಿನ ಜಗತ್ತನ್ನು ರೂಪಿಸಿದ ಇಬ್ಬರು ಮಹಾನ್ ನಾಯಕರಾದ ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರನ್ನು ಗೌರವಿಸುವುದರಿಂದಲೂ ಮಹತ್ವದ್ದಾಗಿದೆ” ಎಂದು ಬಿಸಿಸಿಐನ ಗೌರವ ಕಾರ್ಯದರ್ಶಿ ಜಯ್ ಷಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು T20 ಪಂದ್ಯಗಳು ಡಿ.10ರಂದು ಡರ್ಬನ್‌ನಲ್ಲಿ, ಡಿ. 12ರಂದು ಗೆಬರ್ಹಾದಲ್ಲಿ ಮತ್ತು ಡಿ. 14ರಂದು ಜೋಹಾನ್ಸ್‌ಬರ್ಗ್ ನಲ್ಲಿ ನಡೆಯಲಿವೆ.

ಮೂರು ಏಕದಿನ ಪಂದ್ಯದ ಸರಣಿ ಕೂಡ ನಡೆಯಲಿದೆ. ಮೊದಲ ಏಕದಿನ ಪಂದ್ಯವು ಡಿ.17ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದ್ದು, ಎರಡನೇ ಪಂದ್ಯವು ಡಿ. 19ರಂದು ಗೆಬರ್ಹಾದಲ್ಲಿ ಮತ್ತು ಡಿ.21ರಂದು ಪಾರ್ಲ್‌ನಲ್ಲಿ ನಡೆಯಲಿದೆ.

ಎರಡು ಪಂದ್ಯಗಳ ಗಾಂಧಿ-ಮಂಡೇಲಾ ಟೆಸ್ಟ್ ಸರಣಿಯ ಪೈಕಿ ಮೊದಲ ಟೆಸ್ಟ್‌ ಡಿ.26ರಿಂದ 30ರವರೆಗೆ ಸೆಂಚುರಿಯನ್‌ನಲ್ಲಿ ಹಾಗೂ ಎರಡನೇ ಟೆಸ್ಟ್‌ 2024ರ ಜನವರಿ ಮೂರರಿಂದ ಏಳರವರೆಗೆ ಕೇಪ್ ಟೌನ್‌ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...