ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ತಮೀಮ್ ಇಕ್ಬಾಲ್

Date:

ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ತಂಡಕ್ಕೆ ಅಡ್ಡಿಯಾಗಲು ಬಯಸುವುದಿಲ್ಲ ಎಂದು ತಮೀಮ್ ಹೇಳಿದ್ದಾರೆ.

2007ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಅಂತಾರಾಷ್ಟ್ರೀಯ (ಒಡಿಐ) ಮೂಲಕ ತಮೀಮ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈವರೆಗೆ 243 ಒಡಿಐಗಳು, 70 ಟೆಸ್ಟ್‌ಗಳು ಮತ್ತು 78 ಟ್ವೆಂಟಿ-20 ಅಂತಾರಾಷ್ಟ್ರೀಯ (ಟಿ20ಐ) ಕ್ರಿಕೆಟ್ ಅನ್ನು ಆಡಿದ್ದಾರೆ.

ಇದನ್ನು ಓದಿದ್ದೀರಾ? ಕ್ರಿಕೆಟ್ | ಟೀಂ ಇಂಡಿಯಾ ನಿದ್ದೆಗೆಡಿಸಿದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರಲ್ಲಿ ಭಾರತದಲ್ಲಿ ನಡೆದ 50 ಓವರ್‌ಗಳ ವಿಶ್ವಕಪ್‌ಗೆ ಕೆಲವು ತಿಂಗಳುಗಳ ಮುನ್ನವೇ ತಮೀಮ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಒಂದೇ ದಿನದಲ್ಲಿ ತನ್ನ ನಿರ್ಧಾರವನ್ನು ಹಿಂಪಡೆದಿದ್ದರು. ಬಳಿಕ ಬೆನ್ನು ನೋವು ಕಾಣಸಿಕೊಂಡ ಕಾರಣ ವಿಶ್ವಕಪ್‌ನಲ್ಲಿ ಆಡಿಲ್ಲ.

35 ವರ್ಷದ ತಮೀಮ್ ಈವರೆಗೆ 15,000ಕ್ಕೂ ಹೆಚ್ಚು ರನ್‌ಗಳನ್ನು ಪೇರಿಸಿದ್ದಾರೆ. 25 ಶತಕಗಳನ್ನು ಬಾರಿಸಿದ್ದು, ಬಾಂಗ್ಲಾದೇಶದ ಇತರೆ ದಾಂಡಿಗರಿಗಿಂತ ಅತೀ ಹೆಚ್ಚು ಶತಕ ಬಾರಿಸಿದವರೆಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ಕೊನೆಯ ಬಾರಿಗೆ 2023ರ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ 2-0 ಏಕದಿನ ಸರಣಿಯಲ್ಲಿ ಬಾಂಗ್ಲಾದೇಶದ ಪರವಾಗಿ ಆಡಿದ್ದರು. ಇದರಲ್ಲಿ ಬಾಂಗ್ಲಾ ಸೋಲು ಕಂಡಿತ್ತು.

“ನಾನು ಬಹಳ ಸಮಯದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿದ್ದೇನೆ. ಆ ಅಂತರ ಉಳಿಯುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನನ್ನ ಅಧ್ಯಾಯ ಮುಗಿದಿದೆ” ಎಂದು ತಮೀಮ್ ತನ್ನ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

“ನಾನು ನಿವೃತ್ತಿ ಘೋಷಿಸುವ ಬಗ್ಗೆ ಬಹಳ ಸಮಯದಿಂದ ಯೋಚಿಸುತ್ತಿದ್ದೇನೆ. ಈಗ ಚಾಂಪಿಯನ್ಸ್ ಟ್ರೋಫಿಯಂತಹ ದೊಡ್ಡ ಪಂದ್ಯ ಬರುವುದರಿಂದ ನಾನು ಕೇಂದ್ರಬಿಂದುವಾಗಿರಲು ಬಯಸಲ್ಲ. ಇದು ತಂಡವು ತನ್ನ ಗಮನವನ್ನು ಕಳೆದುಕೊಳ್ಳಲು ಕಾರಣವಾಗಬಹುದು” ಎಂದು ಅಭಿಪ್ರಾಯಿಸಿದ್ದಾರೆ.

“ನಾಯಕ ನಜ್ಮುಲ್ ಹುಸೇನ್ ಶಾಂಟೊ ನಾನು ತಂಡಕ್ಕೆ ಮರಳುವಂತೆ ಒತ್ತಾಯಿಸಿದರು. ಆಯ್ಕೆ ಸಮಿತಿಯೊಂದಿಗೆ ಚರ್ಚೆಗಳು ನಡೆದವು. ನನ್ನನ್ನು ಇನ್ನೂ ತಂಡದಲ್ಲಿ ಪರಿಗಣಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಆದರೆ ನಾನು ನನ್ನ ಹೃದಯದ ಮಾತನ್ನು ಕೇಳುತ್ತೇನೆ” ಎಂದಿದ್ದಾರೆ.

ಫೆಬ್ರವರಿ 19ರಿಂದ ಮಾರ್ಚ್ 9ರವರೆಗೆ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...