ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ

Date:

ಕ್ಯಾನ್ಸರ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಅವರು ಇಂದು(ಸೆ.03) ಮುಂಜಾನೆ ತಮ್ಮ 49 ನೇ ವಯಸ್ಸಿನಲ್ಲಿ ನಿಧನರಾದರು. ಹೀತ್ ಸ್ಟ್ರೀಕ್ ನಿಧನದ ಬಗ್ಗೆ ಅವರ ಪತ್ನಿ ನಾಡಿನ್ ಫೇಸ್‌ಬುಕ್‌ ಮೂಲಕ ಖಚಿತಪಡಿಸಿದ್ದಾರೆ.

“ಸೆಪ್ಟೆಂಬರ್ 3, 2023 ರ ಭಾನುವಾರದ ಮುಂಜಾನೆ, ನನ್ನ ಜೀವನದ ಅತ್ಯಂತ ದೊಡ್ಡ ಪ್ರೀತಿ ಮತ್ತು ನನ್ನ ಸುಂದರ ಮಕ್ಕಳ ತಂದೆ, ತನ್ನ ಕೊನೆಯ ದಿನಗಳನ್ನು ಕಳೆಯುತ್ತಿರುವ ಸಮಯದಲ್ಲಿ ದೇವತೆಗಳು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅವರು ನಮ್ಮನ್ನು ಬಿಟ್ಟು ಹೋದರೂ ಅವರೊಂದಿಗಿನ ನಮ್ಮ ಪ್ರೀತಿ ಶಾಶ್ವತವಾಗಿ ಇರುತ್ತದೆ” ಎಂದು ನಾಡಿನ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇಶ-ದ್ವೇಷ ಮೀರಿ ನಿಂತ ನೀರಜ್ ಚೋಪ್ರಾ – ಭಾರತದ ನಿಜವಾದ ಕ್ರೀಡಾ ಜ್ಯೋತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಜಿಂಬಾಬ್ವೆ ಅಂತಾರಾಷ್ಟ್ರೀಯ ಆಟಗಾರ ಜಾನ್ ರೆನ್ನಿ ಕೂಡ ಹೀತ್ ಸ್ಟ್ರೀಕ್ ನಿಧನದ ಸುದ್ದಿಯನ್ನು ದೃಢಪಡಿಸಿದ್ದಾರೆ.

Heath Streak 1

ಜಿಂಬಾಬ್ವೆ ಕ್ರಿಕೆಟ್ ತಂಡದ ನಾಯಕರಾಗಿದ್ದ ಹೀತ್ ಅವರು, ತಮ್ಮ ದೇಶದ ಪರ 1993-2005ರ ಅವಧಿಯಲ್ಲಿ 65 ಟೆಸ್ಟ್‌ಗಳಲ್ಲಿ 216 ವಿಕೆಟ್‌ಗಳು ಮತ್ತು 1,990 ರನ್‌ಗಳನ್ನು ಗಳಿಸಿದ್ದಾರೆ. 189 ಏಕದಿನ ಅಂತರಾಷ್ಟ್ರೀಯ ಏಕದಿನ ಪಂದ್ಯಗಳಿಂದ 2,943 ರನ್ ಮತ್ತು 239 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಹೀತ್ ಅವರು ನಿವೃತ್ತಿಯ ನಂತರ, ಜಿಂಬಾಬ್ವೆ ಮತ್ತು ಬಾಂಗ್ಲಾದೇಶದಂತಹ ಹಲವಾರು ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತುದಾರರಾಗಿದ್ದಾರೆ. ಅವರು ಐಪಿಎಲ್‌ನ ಕೆಕೆಆರ್‌ ತಂಡದ ಜೊತೆ ಸಹ ಸಂಬಂಧ ಹೊಂದಿದ್ದರು .

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...