ಫ್ರೆಂಚ್ ಓಪನ್ | ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ನೊವಾಕ್ ಜೊಕೊವಿಕ್

Date:

ನೊವಾಕ್ ಜೊಕೊವಿಕ್ ಟೆನಿಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಭಾನುವಾರ ನಡೆದ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಗೆಲ್ಲುವ ಮೂಲಕ, 23ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಟೆನಿಸ್‌ ಇತಿಹಾಸದಲ್ಲಿ ಅತಿಹೆಚ್ಚು ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ದಾಖಲೆ (22), ಇದುವರೆಗೂ ಸ್ಪೇನ್‌ನ ರಾಫೆಲ್ ನಡಾಲ್ ಹೆಸರಿನಲ್ಲಿತ್ತು. ಇದೀಗ  35 ವರ್ಷ ವಯಸ್ಸಿನ ಸರ್ಬಿಯಾದ ದಿಗ್ಗಜ ಆಟಗಾರ  ಜೊಕೊವಿಕ್, ನಡಾಲ್‌ರನ್ನು ಹಿಂದಿಕ್ಕಿದ್ದಾರೆ.

ರೋಲಂಡ್‌ ಗ್ಯಾರೋಸ್‌ನ ಫಿಲಿ‍ಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಪಂದ್ಯದಲ್ಲಿ ನಾರ್ವೆಯ 4ನೇ ಶ್ರೇಯಾಂಕದ ಕ್ಯಾಸ್ಪರ್ ರುಡ್ ಅವರನ್ನು ಜೊಕೊವಿಕ್ ನೇರ ಸೆಟ್‌ಗಳ (7-6, 6-3, 7-5) ಅಂತರದಲ್ಲಿ ಮಣಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

3 ಗಂಟೆ 13 ನಿಮಿಷಗಳ ಕಾಲ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಕ್ಯಾಸ್ಪರ್ ರುಡ್, ಜೊಕೊವಿಕ್‌ಗೆ ಪ್ರಬಲ ಸವಾಲೊಡ್ಡಿದ್ದರು. ಮೊದಲ ಸೆಟ್‌ ಟೈ ಬ್ರೇಕರ್‌ಗೆ ಸಾಗಿತ್ತು. ಎರಡನೇ ಸೆಟ್‌ನಲ್ಲಿ ಜೊಕೊವಿಕ್‌ ಸ್ಪಷ್ಟ ಮೇಲೂಗೈ ಸಾಧಿಸಿದ್ದರು. ಅಂತಿಮ ಮತ್ತು ನಿರ್ಣಾಯಕ ಸೆಟ್‌ನಲ್ಲೂ ಜೊಕೊವಿಕ್‌ ಕೈ ಮೇಲಾಯಿತು.

 14 ಬಾರಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿರುವ, ʻಆವೆ ಮಣ್ಣಿನ ಅಂಗಳದ ಒಡೆಯʼ ಖ್ಯಾತಿಯ ರಾಫೆಲ್ ನಡಾಲ್, ಗಾಯದ ಕಾರಣದಿಂದ ಇದೇ ಮೊದಲ ಬಾರಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದು ಜೊಕೊವಿಕ್‌ ದಾಖಲೆಯ ಹಾದಿಯನ್ನು ಸುಗಮಗೊಳಿಸಿತ್ತು.

3ನೇ ಫ್ರೆಂಚ್ ಓಪನ್ ಕಿರೀಟ ಗೆಲ್ಲುವ ಮೂಲಕ ಜೊಕೊವಿಕ್,  ಎಲ್ಲಾ 4 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಕನಿಷ್ಠ ಮೂರು ಬಾರಿ ಗೆದ್ದ ಮೊದಲ ಆಟಗಾರ ಎಂಬ ದಾಖಲೆಯನ್ನೂ ತನ್ನದಾಗಿಸಿಕೊಂಡರು. ತಮ್ಮ ಕೊನೆಯ 7 ಗ್ರ್ಯಾಂಡ್ ಸ್ಲ್ಯಾಮ್ ಫೈನಲ್‌ಗಳ ಪೈಕಿ ಆರರಲ್ಲೂ ದಿಗ್ವಿಜಯ ಸಾಧಿಸಿರುವ ಜೊಕೊವಿಕ್, ಕನಿಷ್ಠ 25 ಗ್ರ್ಯಾಂಡ್ ಸ್ಲ್ಯಾಮ್ ಗೆಲ್ಲುವುದು ಬಹುತೇಕ ಖಚಿತವಾಗಿದೆ.

 ಮಹಿಳಾ ಸಿಂಗಲ್ಸ್‌ನಲ್ಲಿ 23 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳೊಂದಿಗೆ ನಿವೃತ್ತಿ ಘೋಷಿಸಿದ್ದ ಟೆನಿಸ್‌ ದಂತಕಥೆ ಸೆರೆನಾ ವಿಲಿಯಮ್ಸ್‌ ಸಾಧನೆಯನ್ನು ಜೊಕೊವಿಕ್ ಸರಿಗಟ್ಟಿದ್ದಾರೆ.

ರೋಜರ್‌ ಫೆಡರರ್ 2010 ರಲ್ಲಿ 16 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಾಗ, ನಡಾಲ್ 9 ಮತ್ತು ಜೊಕೊವಿಕ್ ಕೇವಲ 1 ಗ್ರ್ಯಾಂಡ್ ಸ್ಲಾಮ್ ಕಿರೀಟವನ್ನು ಹೊಂದಿದ್ದರು. ಇದೀಗ 13 ವರ್ಷಗಳ ಬಳಿಕ ಜೊಕೊವಿಕ್, 25 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆಲ್ಲುವ ಅವಕಾಶ ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...