‘ದೇವರು ನನ್ನನ್ನು ಈ ಪರಿಸ್ಥಿತಿಯಲ್ಲಿ ಇಟ್ಟಿದ್ದಾನೆ’; ಕೆ.ಎಲ್ ರಾಹುಲ್ ಹೀಗೆ ಹೇಳಿದ್ದೇಕೆ?

Date:

ಇತ್ತೀಚೆಗಷ್ಟೇ ಮುಗಿದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಟೂರ್ನಿಯ ಫೈನಲ್‌ ಪಂದ್ಯದಲ್ಲಿ ತಂಡ ಗೆಲ್ಲುವಲ್ಲಿ ಕೆ.ಎಲ್‌ ರಾಹುಲ್‌ ಅವರ ಆಟ ಬಹುಮುಖ್ಯ ಪಾತ್ರವಹಿಸಿದೆ. ತಮ್ಮ ಆಟದ ಬಗ್ಗೆ ಪ್ರತಿಕ್ರಿಯಿಸಿರುವ ಕೆ.ಎಲ್ ರಾಹುಲ್, “ನನ್ನ ತಂಡಕ್ಕಾಗಿ ಪಂದ್ಯಗಳನ್ನು ಗೆಲ್ಲಿಸಿಕೊಡುವ ಪರಿಸ್ಥಿತಿಗಳಲ್ಲಿ ನನ್ನನ್ನು ದೇವರು ಇರಿಸಿದ್ದಾನೆ” ಎಂದು ಹೇಳಿಕೊಂಡಿದ್ದಾರೆ. ಆದಾಗ್ಯೂ, “ನಾನು ಯಾವಾಗಲೂ ಅದೇ ರೀತಿ ಮಾಡಲು ಸಾಧ್ಯವಾಗದು” ಎಂದೂ ಹೇಳಿದ್ದಾರೆ.

ಐಸಿಸಿ ಟೂರ್ನಿಯಲ್ಲಿ ಭಾರತವು ಫೈನಲ್ ಸೇರಿದಂತೆ ಐದು ಪಂದ್ಯಗಳನ್ನು ಆಡಿದೆ. ಈ ಪೈಕಿ, ಮೂರು ಪಂದ್ಯಗಳಲ್ಲಿ ಕೆ.ಎಲ್ ರಾಹುಲ್ ತಮ್ಮ ಉತ್ತಮ ಪ್ರದರ್ಶನದೊಂದಿಗೆ ತಂಡದ ಗೆಲುವಿಗೆ ಸಾಥ್ ನೀಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಕೆ.ಎಲ್ ರಾಹುಲ್‌ 42 ರನ್ ಗಳಿಸಿದ್ದರು. ಉತ್ತಮ ಪ್ರದರ್ಶನ ನೀಡಿದ್ದರು. ಓಟ್‌ ಆಗದೇ ಆಡುವ ಮೂಲಕ ಮೊದಲ ಪಂದ್ಯದ ಗೆಲುವಿಗೆ ನೆರವಾರದು.

ಆಸ್ರೇಲಿಯಾ ವಿರುದ್ದದ ಸೆಮಿಫೈನಲ್‌ ಪಂದ್ಯದಲ್ಲಿ ಕೊಹ್ಲಿ ಔಟ್‌ ಆದಾಗ ಭಾವುಕರಾದ ಕೆ.ಎಲ್ ರಾಹುಲ್‌ ಪಂದ್ಯದ ಫಿನಿಷರ್ ಆಗಿ ಕಾಣಿಸಿಕೊಂಡರು. ಇನ್ನು, ನ್ಯೂಜಿಲೆಂಡ್ ವಿರುದ್ದದ ಫೈನಲ್ ಪಂದ್ಯದಲ್ಲಿ ರಾಹುಲ್ ಅವರ ಆಟ ಪ್ರೇಕ್ಷಕರ ಮನ ಗೆದ್ದಿತ್ತು. ಅಜೇಯರಾಗಿ ಉಳಿದ ರಾಹುಲ್, 34 ರನ್‌ ಗಳಿಸಿ ತಂಡವು ಟ್ರೋಫಿ ಗೆಲ್ಲಲು ನಿರ್ಣಾಯಕ ಪಾತ್ರವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ‘ರಾಜ್ಯಕ್ಕೆ ತೆರಿಗೆ ಪಾಲನ್ನೂ ನೀಡದೆ, ಸೆಸ್-ಸರ್ಚಾರ್ಜ್‌ಗಳನ್ನೂ ಹೆಚ್ಚಿಸಿಕೊಂಡು ನುಂಗುತ್ತಿದೆ ಮೋದಿ ಸರ್ಕಾರ’

ಪಂದ್ಯದಲ್ಲಿ ತಮ್ಮ ಆಟದ ಬಗ್ಗೆ ಮಾತನಾಡಿರುವ ರಾಹುಲ್, “ಇದಕ್ಕಿಂತ ಉತ್ತಮವಾದ ಭಾವನೆ ಮತ್ತೊಂದಿಲ್ಲವೆಂದು ನಾನು ಭಾವಿಸುತ್ತೇನೆ. ಒಂದೆರಡು ತಿಂಗಳ ಹಿಂದೆ ಸಂದರ್ಶನವೊಂದರಲ್ಲಿ, ‘ಇಂದಿನಿಂದ ನನ್ನ ಸಂಪೂರ್ಣ ಗಮನ ಪ್ರಶಸ್ತಿಗಳನ್ನು ಗೆಲ್ಲುವುದು’ ಎಂದಿದ್ದೆ. ಈಗ, ನನ್ನ ತಂಡಕ್ಕಾಗಿ ಪಂದ್ಯಗಳನ್ನು ಗೆಲ್ಲಿಸಿಕೊಡುವ ಪರಿಸ್ಥಿತಿಗಳಲ್ಲಿ ದೇವರು ನನ್ನನ್ನು ಇರಿಸಿದ್ದಾನೆ” ಎಂದು ಹೇಳಿದ್ದಾರೆ.

“ಆದರೆ, ನಾನು ಯಾವಾಗಲೂ ಅದೇ ರೀತಿ ಮಾಡಲು ಸಾಧ್ಯವಾಗದಿರಬಹುದು. ಆದರೆ, ದೃಢತೆಯಿಂದ ಆಡುತ್ತೇನೆ. ನಾವು ವಿನಮ್ರರಾಗಿದ್ದರೆ, ಹೃದಯವನ್ನು ಸರಿಯಾದ ಸ್ಥಳದಲ್ಲಿಟ್ಟರೆ, ಕಠಿಣ ತರಬೇತಿಯಲ್ಲಿ ತೊಡಗಿಕೊಂಡರೆ ಗೆಲುವು ಸಾಧ್ಯ. ಅದೇ ಕ್ರೀಡೆಯ ಸೌಂದರ್ಯ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...