ಗುಕೇಶ್ ದೊಮ್ಮರಾಜುಗೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ

Date:

ಸಿಂಗಾಪುರದಲ್ಲಿ ನಡೆದ ‘ವಿಶ್ವ ಚೆಸ್ ಚಾಂಪಿಯನ್‌ಶಿಪ್-2024’ ಟೂರ್ನಿಯಲ್ಲಿ ಡಿ ಗುಕೇಶ್ ಗೆದ್ದು, ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. 14ನೇ ಸುತ್ತಿನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಗೆದ್ದು ಬೀಗಿದ್ದಾರೆ. ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಶ್ವ ಚೆಸ್‌ನ ಕಿರಿಯ ಚಾಂಪಿಯನ್‌ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಈ ಹಿಂದೆ, 1985ರಲ್ಲಿ ನಡೆದಿದ್ದ ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಆಗ 22 ವರ್ಷದವರಾಗಿದ್ದ ಗ್ಯಾರಿ ಕಾಸ್ಪರೋವ್ ಗೆಲುವು ಸಾಧಿಸಿದ್ದರು. ಕಿರಿಯ ಚಾಂಪಿಯನ್‌ ಎನ್ನಿಸಿಕೊಂಡಿದ್ದರು. ಇದೀಗ, ಅವರ ದಾಖಲೆಯನ್ನು ಗುಕೇಶ್‌ ಮುರಿದಿದ್ದಾರೆ.

ಗುಕೇಶ್ ಅವರು ಮೂಲತಃ ತಮಿಳುನಾಡಿನವರು. ಅವರು ಜನಿಸಿದ್ದು 2006ರ ಮೇ 7ರಂದು. ಅವರ ಪೋಷಕರು ವೈದ್ಯಕೀಯ ಕ್ಷೇತ್ರದಲ್ಲಿ ತೊಡಿದ್ದಾರೆ. ಗುಕೇಶ್‌ ತಮ್ಮ ಏಳನೇ ವಯಸ್ಸಿನಲ್ಲಿ ಚೆಸ್ ಆಡಲು ಪ್ರಾರಂಭಿಸಿದರು. ಅವರಿಗೆ ಚೆಸ್ ಮಾಂತ್ರಿಕನೆಂದೇ ಖ್ಯಾತಿ ಪಡೆದಿರುವ ವಿಶ್ವನಾಥನ್ ಆನಂದ್ ತರಬೇತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2015ರಲ್ಲಿ ನಡೆದ ಏಷ್ಯನ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ (9 ವರ್ಷದೊಳಗಿನ ಸ್ಪರ್ಧಿಗಳ ವಿಭಾಗ) ಮತ್ತು 2018ರಲ್ಲಿ ನಡೆದ ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್ (12 ವರ್ಷದೊಳಗಿನವರ ವಿಭಾಗ) ಗೆದ್ದಿದ್ದಾರೆ. ಇದೀಗ, ವಿಶ್ವ ಚೆಸ್ ಚಾಂಪಿಯನ್‌ಶಿಪ್‌ಅನ್ನೂ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...