ಟಿ20 ವಿಶ್ವಕಪ್‌ | ವಿರಾಟ್ ಕೊಹ್ಲಿಯ ದಾಖಲೆ ಮುರಿದ ಗುರ್ಬಾಝ್

Date:

ಟಿ20 ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ಅಫ್ಘಾನಿಸ್ತಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 42 ಎಸೆತಗಳನ್ನು ಎದುರಿಸಿದ ರಹಮಾನುಲ್ಲಾ ಗುರ್ಬಾಝ್ 7 ಭರ್ಜರಿ ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 84 ರನ್ ಬಾರಿಸಿದ್ದರು. ಇದಾದ ಬಳಿಕ ಸೂಪರ್ ಓವರ್‌ನಲ್ಲೂ 3 ಸಿಕ್ಸ್ ಸಿಡಿಸಿದ್ದರು.

ಈ 10 ಸಿಕ್ಸ್‌ಗಳೊಂದಿಗೆ ರಹಮಾನುಲ್ಲಾ ಗುರ್ಬಾಝ್ ಟಿ20 ವಿಶ್ವಕಪ್‌ನ ಟಾಪ್5 ಸಿಕ್ಸರ್ ಸರದಾರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ಐದನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತ ತಂಡದೊಂದಿಗೆ ಟಿ20 ವಿಶ್ವಕಪ್‌ ಪಂದ್ಯ ಆಡಲು ಪಾಕಿಸ್ತಾನ ಅಸ್ತು

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರ 33 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ ಒಟ್ಟು 35 ಸಿಕ್ಸರ್‌ಗಳನ್ನು ಬಾರಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್‌ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಐದನೇ ಸ್ಥಾನ ಅಲಂಕರಿಸಿದ್ದರು.

ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ರಹಮಾನುಲ್ಲಾ ಗುರ್ಬಾಝ್ ಐದನೇ ಸ್ಥಾನಕ್ಕೇರಿದ್ದಾರೆ. ಈವರೆಗೆ 18 ಟಿ20 ವಿಶ್ವಕಪ್ ಇನಿಂಗ್ಸ್ ಆಡಿರುವ ಗುರ್ಬಾಝ್ ಒಟ್ಟು 36 ಸಿಕ್ಸರ್ ಸಿಡಿಸಿದ್ದಾರೆ. ಈ ಮೂಲಕ ಚುಟುಕು ವಿಶ್ವಕಪ್‌ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಟಾಪ್-5ರಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 31 ಇನಿಂಗ್ಸ್‌ಗಳಲ್ಲಿ 63 ಸಿಕ್ಸ್ ಸಿಡಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...