ಸೋತರೂ ಕ್ರೀಡಾಭಿಮಾನಿಗಳ ಮನಗೆದ್ದ ಗುರ್ಬಾಜ್: ಆಫ್ರಿಕಾ ಪಡೆಗೆ ನಡುಕ ಹುಟ್ಟಿಸಿದ ಅಫ್ಘಾನ್ ಆಟಗಾರ

Date:

ಗೆಲುವು ದಕ್ಷಿಣ ಆಫ್ರಿಕಾ ಪಾಲಾದರೂ, ಕ್ರೀಡಾಂಗಣದಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಯಶಸ್ವಿಯಾಗಿದ್ದಾರೆ. ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ‘ಗ್ರೂಪ್ ಡಿ’ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಬೆಂಡೆತ್ತಿದ ಗುರ್ಬಾಜ್, ಕೇವಲ 42 ಚೆಂಡುಗಳಲ್ಲಿ ಸ್ಫೋಟಕ 84 ರನ್ ಸಿಡಿಸಿ ಆಫ್ರಿಕಾ ಪಾಳಯದಲ್ಲಿ ಅಕ್ಷರಶಃ ನಡುಕ ಹುಟ್ಟಿಸಿದರು.

ತೀವ್ರ ಕುತೂಹಲ ಕೆರಳಿಸಿ ‘ಡಬಲ್ ಸೂಪರ್ ಓವರ್’ ಹಂತಕ್ಕೆ ತಲುಪಿದ ಈ ಹೈ-ವೋಲ್ಟೇಜ್ ಕದನದಲ್ಲಿ ಅಫ್ಘಾನಿಸ್ತಾನ ಕೂದಲೆಳೆಯ ಅಂತರದಲ್ಲಿ ಸೋಲುಂಡರೂ, ಏಕಾಂಗಿ ಸಲಗನಂತೆ ಕಣದಲ್ಲಿ ಗರ್ಜಿಸಿದ ಗುರ್ಬಾಜ್ ಅವರ ವೀರೋಚಿತ ಹೋರಾಟ ಟಿ20 ಕ್ರಿಕೆಟ್ ಪ್ರೇಮಿಗಳ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನ ನಾಯಕ ರಶೀದ್ ಖಾನ್ ಲೆಕ್ಕಾಚಾರವನ್ನು ದಕ್ಷಿಣ ಆಫ್ರಿಕಾದ ಬ್ಯಾಟರ್‌ಗಳು ತಲೆಕೆಳಗಾಗಿಸಿದರು. ಆರಂಭಿಕ ಆಘಾತದ ನಡುವೆಯೂ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ (41 ಚೆಂಡುಗಳಲ್ಲಿ 59 ರನ್) ಹಾಗೂ ರಿಯಾನ್ ರಿಕೆಲ್ಟನ್ (28 ಚೆಂಡುಗಳಲ್ಲಿ 61 ರನ್) ಅವರ ಬಿರುಸಿನ 114 ರನ್‌ಗಳ ಜೊತೆಯಾಟದ ನೆರವಿನಿಂದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತದತ್ತ ಹೆಜ್ಜೆ ಹಾಕಿತು. ಅಂತಿಮ ಓವರ್‌ಗಳಲ್ಲಿ ಡೆವಾಲ್ಡ್ ಬ್ರೆವಿಸ್ (23 ರನ್) ಹಾಗೂ ಡೇವಿಡ್ ಮಿಲ್ಲರ್ (ಔಟಾಗದೆ 20 ರನ್) ಅವರ ಉಪಯುಕ್ತ ಕಾಣಿಕೆಯಿಂದ ಆಫ್ರಿಕಾ ಪಡೆ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿತು. ಅಫ್ಘಾನ್ ಪರ ಅಜ್ಮತುಲ್ಲಾ ಉಮರ್ಜಾಯ್ 41 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ರೋಹಿತ್, ಕೊಹ್ಲಿಗೆ ಹಿಂಬಡ್ತಿ; ಗಿಲ್‌ಗೆ ‘ಎ’ ಶ್ರೇಣಿಯ ಬಡ್ತಿ

188 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡಕ್ಕೆ ರಹಮಾನುಲ್ಲಾ ಗುರ್ಬಾಜ್ ಆಸರೆಯಾದರು. ಆಫ್ರಿಕಾದ ಘಟಾನುಘಟಿ ಬೌಲರ್‌ಗಳನ್ನು ನಿರ್ದಾಕ್ಷಿಣ್ಯವಾಗಿ ದಂಡಿಸಿದ ಗುರ್ಬಾಜ್, ಕ್ರೀಸ್‌ನಲ್ಲಿದ್ದಷ್ಟು ಹೊತ್ತು ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ, ಗುರ್ಬಾಜ್ ನಿರ್ಗಮನದ ನಂತರ ಬಿಗಿ ದಾಳಿ ಸಂಘಟಿಸಿದ ಲುಂಗಿ ಎನ್‌ಗಿಡಿ ಹಾಗೂ ಕಗಿಸೊ ರಬಾಡ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ನಿರಂತರವಾಗಿ ವಿಕೆಟ್ ಕಳೆದುಕೊಂಡ ಅಫ್ಘಾನಿಸ್ತಾನ ಅಂತಿಮವಾಗಿ 19.4 ಓವರ್‌ಗಳಲ್ಲಿ 187 ರನ್‌ಗಳಿಗೆ ಸರ್ವಪತನ ಕಂಡು ಪಂದ್ಯ ‘ಟೈ’ನಲ್ಲಿ ಅಂತ್ಯಗೊಂಡಿತು.

ಮೊದಲ ಸೂಪರ್ ಓವರ್: ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ಯಾವುದೇ ವಿಕೆಟ್ ಕಳೆದುಕೊಳ್ಳದೆ 17 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆಫ್ರಿಕಾ ಪರ ಟ್ರಿಸ್ಟನ್ ಸ್ಟಬ್ಸ್ ಕೊನೆಯ ಎಸೆತದಲ್ಲಿ ಅಮೋಘ ಸಿಕ್ಸರ್ ಸಿಡಿಸಿ 17 ರನ್ ಗಳಿಸುವ ಮೂಲಕ ಪಂದ್ಯವನ್ನು ಮತ್ತೊಮ್ಮೆ ‘ಟೈ’ ಮಾಡಿದರು.

ಎರಡನೇ ಸೂಪರ್ ಓವರ್: ನಿರ್ಣಾಯಕ ಎರಡನೇ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ, ಡೇವಿಡ್ ಮಿಲ್ಲರ್ (16 ರನ್) ಹಾಗೂ ಸ್ಟಬ್ಸ್ ಅವರ ಅಬ್ಬರದ ನೆರವಿನಿಂದ 23 ರನ್ ಕಲೆಹಾಕಿತು. 24 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಅಫ್ಘಾನ್ ಪರ ಗುರ್ಬಾಜ್ ಸತತ 3 ಸಿಕ್ಸರ್ ಸಿಡಿಸಿ ಮತ್ತೊಮ್ಮೆ ಎದೆಬಡಿತ ಹೆಚ್ಚಿಸಿದರು. ಆದರೆ ಅಂತಿಮವಾಗಿ 19 ರನ್ ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡ ಅಫ್ಘಾನಿಸ್ತಾನ ಕೇವಲ 4 ರನ್‌ಗಳ ಅಂತರದಲ್ಲಿ ವೀರೋಚಿತವಾಗಿ ಶರಣಾಯಿತು.

ಕರಾರುವಾಕ್ ಬೌಲಿಂಗ್ ಹಾಗೂ ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಲುಂಗಿ ಎನ್‌ಗಿಡಿ ‘ಪಂದ್ಯಶ್ರೇಷ್ಠ’ ಪ್ರಶಸ್ತಿಗೆ ಭಾಜನರಾದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...