ವದಂತಿಗಳಿಗೆ ತೆರೆ: 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ

Date:

ಕಳೆದ ಕೆಲವು ತಿಂಗಳುಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ, 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.  ನತಾಶಾ ಸ್ಟಾಂಕೋವಿಕ್ ಹಾಗೂ ಹಾರ್ದಿಕ್ ಪಾಂಡ್ಯಾ ದಂಪತಿ ಬೇರ್ಪಟ್ಟಿದ್ದಾರೆ.

ಈ ಬಗ್ಗೆ ಜುಲೈ 18ರಂದು ತಮ್ಮ ಇನ್ಸ್‌ಟಾಗ್ರಾಂ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಹೀರೋ, “4 ವರ್ಷಗಳ ಕಾಲ ಒಟ್ಟಿಗೆ ಇದ್ದ ನಂತರ, ನತಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ಒಟ್ಟಿಗೆ ಇರಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಆದರೆ ಅದು ಕೈಗೂಡಿಲ್ಲ. ಇದು ನಮ್ಮಿಬ್ಬರಿಗೂ ಉತ್ತಮವಾದ ನಿರ್ಧಾರವೆಂದು ಭಾವಿಸುತ್ತೇವೆ. ಇದು ನಮ್ಮ ನಡುವಿನ ಕಠಿಣ ನಿರ್ಧಾರವಾಗಿತ್ತು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ದಾಂಪತ್ಯ ಜೀವನದಲ್ಲಿ ಮಗ ಅಗಸ್ತ್ಯ ಹುಟ್ಟಿದ್ದಾನೆ. ಆತ ನಮ್ಮಿಬ್ಬರ ಜೀವನದ ಕೇಂದ್ರ ಬಿಂದುವಾಗಿಯೇ ಮುಂದುವರಿಯಲಿದ್ದಾನೆ. ಆತನ ಸಂತೋಷಕ್ಕಾಗಿ ನಾವು ಅವನಿಗೆ ಸಾಧ್ಯವಿರುವ ಎಲ್ಲವನ್ನೂ ನೀಡುವುದನ್ನು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ನಾವಿಬ್ಬರೂ ಕೂಡ ಸಹ-ಪೋಷಕರಾಗಿ ಮುಂದುವರಿಯಲಿದ್ದೇವೆ” ಎಂದು ಹಾರ್ದಿಕ್ ಪಾಂಡ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಈ ಕಷ್ಟಕರ ಮತ್ತು ಸೂಕ್ಷ್ಮ ನಿರ್ಧಾರದ ಸಂದರ್ಭದಲ್ಲಿ ನಮ್ಮ ಖಾಸಗಿತನ ಹಾಗೂ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ನಾವಿಬ್ಬರೂ ಪ್ರಾಮಾಣಿಕವಾಗಿ ವಿನಂತಿಸುವುದಾಗಿ ತಿಳಿಸುವ ಮೂಲಕ ನತಾಶಾ ಸ್ಟಾಂಕೋವಿಕ್ ಹಾಗೂ ಹಾರ್ದಿಕ್ ಪಾಂಡ್ಯ ದಂಪತಿ 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.

ವಿದೇಶಕ್ಕೆ ಹಾರಿರುವ ನತಾಶಾ

ಈ ನಡುವೆ ಈಗ ನತಾಶಾ ಬ್ಯಾಗ್ ಪ್ಯಾಕ್ ಮಾಡಿಕೊಂಡು ಹಾರ್ದಿಕ್ ಪಾಂಡ್ಯ ಮನೆ ತೊರೆದಿದ್ದಾರೆ. ತಮ್ಮ ಮಗ ಅಗಸ್ತ್ಯಾ ಜೊತೆಗೆ ವಿದೇಶಕ್ಕೆ ತೆರಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...