ಇಂಡಿಯಾಗೆ ಸಣ್ಣ ಶಾಕಿಂಗ್ ಸುದ್ದಿ: ನ್ಯೂಜಿಲೆಂಡ್ ಪಂದ್ಯಕ್ಕೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಇಲ್ಲ!

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ ನ್ಯೂಜಿಲೆಂಡ್‌ ವಿರುದ್ಧ ಆಡುವ ಭಾರತದ ಪಂದ್ಯದ ಮೊದಲೇ ತಂಡಕ್ಕೆ ಶಾಕಿಂಗ್‌ ಸುದ್ದಿ ಲಭ್ಯವಾಗಿದೆ. ಸ್ಟಾರ್‌ ಆಟಗಾರ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಗಾಯಗೊಂಡಿರುವ ಕಾರಣ ಅಕ್ಟೋಬರ್ 20 ರಂದು ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ “ಹಾರ್ದಿಕ್‌ ಪಾಂಡ್ಯ ಅವರು ಅಕ್ಟೋಬರ್ 20 ರಂದು ತಂಡದೊಂದಿಗೆ ಧರ್ಮಶಾಲಾಗೆ ಆಗಮಿಸುವುದಿಲ್ಲ. ಭಾರತವು ಇಂಗ್ಲೆಂಡ್ ವಿರುದ್ಧ ಅಕ್ಟೋಬರ್ 29 ರಂದು ಲಖನೌದಲ್ಲಿ ನೇರವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ” ಎಂದು ತಿಳಿಸಿದೆ.

ನಿನ್ನೆ (ಅಕ್ಟೋಬರ್ 19) ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ತಮ್ಮ ಮೊದಲ ಮಾಡುವ ಸಂದರ್ಭದಲ್ಲಿ ಕಾಲು ಉಳುಕಿ ಗಾಯಗೊಂಡು ವೈದ್ಯಕೀಯ ವಿಶ್ರಾಂತಿಗೆ ಮರಳಿದ್ದರು. ಹಾರ್ದಿಕ್‌ನ ಉಳಿದ ಮೂರು ಚೆಂಡುಗಳನ್ನು ವಿರಾಟ್ ಕೊಹ್ಲಿ ಎಸೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾರ್ದಿಕ್ ಅವರಿಗೆ ವಿಶ್ರಾಂತಿಯನ್ನು ಸೂಚಿಸಲಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡ ನಿರಂತರ ಮೇಲ್ವಿಚಾರಣೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಭಾರತ ಗೆಲ್ಲಲು ಬೇಕಿದ್ದು 26, ಕೊಹ್ಲಿ ಶತಕಕ್ಕೂ ಬೇಕಿತ್ತು 26: ಸತ್ಯ ಬಿಚ್ಚಿಟ್ಟ ಕೆ ಎಲ್ ರಾಹುಲ್

ಜಸ್ಪ್ರೀತ್ ಬುಮ್ರಾ ಮತ್ತು ಕುಲದೀಪ್ ಯಾದವ್ ಹೊರತುಪಡಿಸಿ, ಪಾಂಡ್ಯ ಅವರು ಆಲ್‌ರೌಂಡರ್‌ ಪಾತ್ರವನ್ನು ನಿರ್ವಹಿಸುವ ಕಾರಣದಿಂದ ಭಾರತ ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದಾರೆ. ಬ್ಯಾಟಿಂಗ್‌ನಲ್ಲೂ ಸ್ಪೋಟಕವಾಗಿ ಬ್ಯಾಟ್‌ ಬೀಸುತ್ತಾರೆ.

ಭಾರತ ತಂಡದ ಬೌಲಿಂಗ್ ವಿಭಾಗಕ್ಕೆ ಆರನೇ ಬೌಲರ್‌ನ ಅವಶ್ಯಕತೆಯಿದೆ. ಭಾರತದ ಮೊದಲ ಮೂರು ವಿಶ್ವಕಪ್ ಪಂದ್ಯಗಳಲ್ಲಿ ಪಾಂಡ್ಯ 16 ಓವರ್ ಬೌಲ್ ಮಾಡಿ ಐದು ವಿಕೆಟ್ ಪಡೆದಿದ್ದಾರೆ.

ಯಾವುದೇ ರೀತಿಯ ಬದಲಿ ಆಟಗಾರರು ಲಭ್ಯವಿಲ್ಲದ ಕಾರಣ, ಭಾರತವು ನ್ಯೂಜಿಲೆಂಡ್ ವಿರುದ್ಧ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ. ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಮೊಹಮ್ಮದ್ ಶಮಿಯನ್ನು ಕರೆತರುವುದು ಪ್ರಮುಖ ಆಯ್ಕೆಯಾಗಿದೆ.

ಭಾರತ ಇದುವರೆಗೆ ವಿಶ್ವಕಪ್‌ನಲ್ಲಿ ಆಡಿದ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...