ಪ್ಯಾರಾಲಿಂಪಿಕ್ಸ್ | ಇತಿಹಾಸ ಬರೆದ ಬಿಲ್ಲುಗಾರ ಹರ್ವಿಂದರ್ ಸಿಂಗ್; ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ

Date:

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಬಿಲ್ಲುಗಾರ ಹರ್ವಿಂದರ್ ಸಿಂಗ್ ಹೊಸ ಇತಿಹಾಸವನ್ನು ಬರೆದಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊಟ್ಟಮೊದಲ ಭಾರತೀಯ ಬಿಲ್ಲುಗಾರ ಎಂಬ ಹೆಗ್ಗಳಿಕೆಗೆ ಹರ್ವೀಂದರ್ ಸಿಂಗ್ ಅವರು ಪಾತ್ರರಾಗಿದ್ದಾರೆ.

ಪುರುಷರ ವೈಯಕ್ತಿಕ ರಿಕರ್ವ್ ಓಪನ್‌ನ ಫೈನಲ್‌ನಲ್ಲಿ ಹರ್ವಿಂದರ್ 6-0 ಅಂತರದಲ್ಲಿ ಪೋಲೆಂಡ್‌ನ ಲುಕಾಸ್ಜ್ ಸಿಸ್ಜೆಕ್ ಅವರನ್ನು ಸೋಲಿಸಿ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಗೌರಿ ಲಂಕೇಶ್‌ ಹತ್ಯೆಯಾಗಿ ಏಳು ವರ್ಷ: ಕುಂಟುತ್ತ ಸಾಗಿದೆ ಆರೋಪಿಗಳ ವಿಚಾರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2021ರಲ್ಲಿ ಟೋಕಿಯೊದಲ್ಲಿ ಕಂಚು ಗೆದ್ದ ಹರ್ವಿಂದರ್ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಗೆದ್ದ ಎರಡನೇ ಪದಕವಾಗಿದೆ. ಮಿಕ್ಸ್ ಟೀಮ್ ಕಾಂಪೌಂಡ್ ಓಪನ್‌ನಲ್ಲಿ ರಾಕೇಶ್ ಕುಮಾರ್ ಮತ್ತು ಶೀತಲ್ ದೇವಿ ಕಂಚಿನ ಪದಕ ಗೆದ್ದಿದ್ದು ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಲಭಿಸಿದ ಮೂರನೇ ಪದಕ ಇದಾಗಿದೆ.

ಇನ್ನು ನಿನ್ನೆ ನಡೆದ ಪ್ಯಾರಾಲಿಂಪಿಕ್ಸ್‌ ಪಂದ್ಯದಲ್ಲಿ ಭಾರತದ ಅಥ್ಲೀಟ್‌ಗಳು ಎರಡು ಚಿನ್ನ ಸೇರಿ ಒಟ್ಟು ನಾಲ್ಕು ಪದಕಗಳನ್ನು ಗೆದ್ದಿದ್ದಾರೆ. ಇದರಿಂದಾಗಿ ಭಾರತಕ್ಕೆ ಲಭಿಸಿದ ಒಟ್ಟು ಪದಕಗಳ ಸಂಖ್ಯೆಯು 24ಕ್ಕೆ ಏರಿಕೆಯಾಗಿದೆ.

ಇದನ್ನು ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಶಾಟ್‌ ಪುಟ್‌: ಬೆಳ್ಳಿ ಗೆದ್ದ ಸಚಿನ್ ಖಿಲಾರಿ; ಭಾರತಕ್ಕೆ 21ನೇ ಪದಕ

ಬಿಲ್ಲುಗಾರ ಹರ್ವಿಂದರ್ ಸಿಂಗ್ ಚಿನ್ನ ಗೆದ್ದರೆ, ಪುರುಷರ ಕ್ಲಬ್ ಥ್ರೋ ಎಫ್51 ಸ್ಪರ್ಧೆಯ ಫೈನಲ್‌ನಲ್ಲಿ ಧರಮ್ ಬೀರ್ ಸಿಂಗ್ ಕೂಡಾ ಚಿನ್ನ ತನ್ನದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಭಾರತದವರೇ ಆದ ಪ್ರಣವ್ ಸೂರ್ಮಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ ವಿಶ್ವಚಾಂಪಿಯನ್ ಸಚಿನ್ ಸರ್ಜೆರಾವ್ ಖಿಲಾರಿ ಪುರುಷರ ಎಫ್46 ಶಾಟ್ ಪುಟ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...