ಐಪಿಎಲ್ 2025: ಪ್ಲೇಆಫ್‌ ಪಂದ್ಯಗಳ ವೇಳಾಪಟ್ಟಿ ಪ್ರಕಟ

Date:

ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈಗ ಇನ್ನು ನಾಲ್ಕು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಲೀಗ್‌ ಹಂತದ ಕೊನೆಯ ಪಂದ್ಯದವರೆಗೂ ಅಂಕಪಟ್ಟಿಯಲ್ಲಿ ಹಾವು ಏಣಿ ಆಟ ನಡೆಯಿತು. ಮಂಗಳವಾರ ನಡೆದ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ, ಎಲ್‌ಎಸ್‌ಜಿ ತಂಡವನ್ನು ಮಣಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದಿದೆ. ಈ ಮೂಲಕ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದೆ.

18ನೇ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಅಬ್ಬರಿಸಿದೆ. ಮಂಗಳವಾರ ನಡೆದ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆಕ 227 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆರ್‌ಸಿಬಿ 18.4 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 230 ರನ್‌ ಸಿಡಿಸಿ ಅಬ್ಬರಿಸಿತು. ಈ ಗೆಲುವಿನ ಮೂಲಕ ಎರಡು ಅಂಕಗಳನ್ನು ಕಲೆ ಹಾಕಿದ ಆರ್‌ಸಿಬಿ 19 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

ಮುಂಬೈ ತಂಡವನ್ನು ಸೋಲಿಸಿದ್ದ ಪಂಜಾಬ್‌ ಕಿಂಗ್ಸ್‌ 19 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆಯಿತು. ಆರ್‌ಸಿಬಿ ಟೂರ್ನಿಯ ಲೀಗ್‌ ಹಂತದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದೆ. ತವರಿನಾಚೆ ಆಡಿದ ಏಳು ಪಂದ್ಯಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮೂಲಕ 19 ಅಂಕಗಳನ್ನು ಕಲೆ ಹಾಕಿದೆ. ರನ್‌ ರೇಟ್‌ನಲ್ಲಿ ಪಂಜಾಬ್‌ಗಿಂತಲೂ ಆರ್‌ಸಿಬಿ ಕೊಂಚ ಹಿಂದೆ ಇದ್ದು, ಎರಡನೇ ಸ್ಥಾನ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? BREAKING NEWS | ಭಾರತ ಟೆಸ್ಟ್​ ತಂಡದ ನಾಯಕನಾಗಿ ಶುಭಮನ್ ಗಿಲ್ ಆಯ್ಕೆ

ಕ್ವಾಲಿಫೈಯರ್‌ 1 ಅಂಕ ಪಟ್ಟಿಯಲ್ಲಿ ಮೊದಲೆರೆಡು ಸ್ಥಾನಗಳನ್ನು ಪಡೆದ ತಂಡಗಳು ಮೇ 29 ರಂದು ಕ್ವಾಲಿಫೈಯರ್‌ 1ರಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಮುಲ್ಲನ್‌ಪುರ ಅಂಗಳ ಸಾಕ್ಷಿಯಾಗಲಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಪಂಜಾಬ್‌ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕ್ವಾಲಿಫೈಯರ್‌ 1ರಲ್ಲಿ ಹೋರಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಅಹಮದಾಬಾದ್‌ನಲ್ಲಿ ಜೂನ್‌ 3ರಂದು ನಡೆಯಲಿರುವ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗುತ್ತದೆ.

ಐಪಿಎಲ್‌ನ ಅಂಕ ಪಟ್ಟಿಯಲ್ಲಿ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಕಾದಾಟ ನಡೆಸಲಿವೆ. ಮೇ 30 ರಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸ್ಪರ್ಧೆ ನಡೆಸಲಿವೆ. ಈ ಪಂದ್ಯಕ್ಕೂ ಮುಲ್ಲನ್‌ಪುರ ಅಂಗಳ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಸೋತ ತಂಡ ಮನೆಯ ಹಾದಿ ಹಿಡಿದರೆ, ಗೆದ್ದ ತಂಡ ಕ್ವಾಲಿಫೈಯರ್‌ 2ರಲ್ಲಿ ಕಾದಾಟ ನಡೆಸಲಿದೆ.

ಕ್ವಾಲಿಫೈಯರ್‌ 1ರಲ್ಲಿ ಸೋತಿರುವ ತಂಡ ಹಾಗೂ ಎಲಿಮಿನೇಟರ್‌ ನಲ್ಲಿ ಗೆದ್ದಿರುವ ತಂಡಗಳು ಜೂನ್‌ 1 ರಂದು ಕ್ವಾಲಿಫೈಯರ್‌ 2ರಲ್ಲಿ ಸ್ಪರ್ಧೆ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.

image 54 5
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...