ಹಿಂದಿ ಭಾರತದ ರಾಷ್ಟ್ರಭಾಷೆಯಲ್ಲ ಎಂದ ಕ್ರಿಕೆಟಿಗ ಆರ್ ಅಶ್ವಿನ್

Date:

ಹಿಂದಿ ಭಾರತದ ರಾಷ್ಟ್ರ ಭಾಷೆಯಲ್ಲ, ಅದು ಅಧಿಕೃತ ಭಾಷೆ ಎಂದು ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಹೇಳಿದ್ದು, ಹಿಂದಿ ಭಾಷಾ ಹೇರಿಕೆ ಟೀಕೆ ಮಧ್ಯೆ ಅಶ್ವಿನ್‌ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಚೆನ್ನೈನ ಖಾಸಗಿ ಕಾಲೇಜೊಂದರ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್, ಸಭಿಕರಲ್ಲಿ ನಿಮ್ಮಲ್ಲಿ ಎಷ್ಟು ಮಂದಿ ಇಂಗ್ಲಿಷ್ ಮಾತನಾಡುತ್ತಾರೆ ಮತ್ತು ಎಷ್ಟು ಮಂದಿ ತಮಿಳು ಮಾತನಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇದಲ್ಲದೆ ನಿಮ್ಮಲ್ಲಿ ಎಷ್ಟು ಮಂದಿ ಹಿಂದಿ ಮಾತನಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಪ್ರತಿಕ್ರಿಯೆ ಕಡಿಮೆಯಾಗಿತ್ತು. ಅಶ್ವಿನ್ ಅವರು ಯಾವ ಭಾಷೆಯಲ್ಲಿ ತಾನು ಮಾತನಾಡಬೇಕು ಎಂಬ ಬಗ್ಗೆ ನಿರ್ಧರಿಸಲು ಈ ಪ್ರಶ್ನೆಯನ್ನು ಕೇಳಿದ್ದರು. ಆ ಬಳಿಕ ಅವರು ತಮಿಳಿನಲ್ಲಿ ತನ್ನ ಮಾತನ್ನು ಮುಂದುವರಿಸಿದ್ದರು. ʼಹಿಂದಿ ರಾಷ್ಟ್ರೀಯ ಭಾಷೆಯಲ್ಲ, ಅದು ಅಧಿಕೃತ ಭಾಷೆ’ ಇದನ್ನು ನಾನು ಹೇಳಬೇಕೆಂದು ಭಾವಿಸಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? Ind vs Aus test | ಮತ್ತಷ್ಟು ತಾರಕಕ್ಕೇರಿದ ಬೂಮ್ರಾ Vs ಕೊನ್‌ಸ್ಟಸ್ ಫೈಟ್!

ಇತ್ತೀಚೆಗೆ ಹಿಂದಿ ಹೇರಿಕೆಗೆ ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ ಎಂದು ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. 1930 ಮತ್ತು 1940ರ ದಶಕಗಳಲ್ಲಿ, ಶಾಲೆಗಳು ಮತ್ತು ಸರ್ಕಾರಗಳಲ್ಲಿ ಹಿಂದಿಯನ್ನು ಕಡ್ಡಾಯ ಭಾಷೆಯಾಗಿ ಹೇರುವುದಕ್ಕೆ ತಮಿಳುನಾಡಿನಲ್ಲಿ ಗಮನಾರ್ಹ ವಿರೋಧವಿತ್ತು.

ತಮಿಳನ್ನು ಉತ್ತೇಜಿಸಲು ಮತ್ತು ತಮಿಳು ಭಾಷಿಕರ ಹಕ್ಕುಗಳನ್ನು ಪ್ರತಿಪಾದಿಸಲು ಪ್ರಯತ್ನಿಸಿದ ದ್ರಾವಿಡ ಚಳವಳಿಯು ಈ ವಿರೋಧದಲ್ಲಿ ಪ್ರಮುಖ ಪಾತ್ರವನ್ನು ವಹಿಸಿತ್ತು. ತಮಿಳು ಭಾಷಿಕರ ಸಾಂಸ್ಕೃತಿಕ ಅಸ್ಮಿತೆ ಮತ್ತು ಭಾಷಿಕ ಪರಂಪರೆಯನ್ನು ಹಾಳುಮಾಡಲು ಕೇಂದ್ರ ಸರ್ಕಾರದ ಪ್ರಯತ್ನವಾಗಿ ಹಿಂದಿಯನ್ನು ಹೇರಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.

ಅಶ್ವಿನ್‌ ಇತ್ತೀಚಿಗಷ್ಟೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮಧ್ಯೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 106 ಟೆಸ್ಟ್ ಪಂದ್ಯಗಳನ್ನು ಆಡಿರುವ ಅಶ್ವಿನ್ 537 ವಿಕೆಟ್‌ಗಳನ್ನು ಪಡೆದಿದ್ದಾರೆ. 116 ಏಕದಿನ ಪಂದ್ಯಗಳಲ್ಲಿ 156 ವಿಕೆಟ್‌ಗಳು, 65 ಟಿ20 ಪಂದ್ಯಗಳಿಂದ 72 ಆಟಗಾರರನ್ನು ಪೆವಿಲಿಯನ್‌ಗೆ ಕಳುಹಿಸಿದ್ದಾರೆ.

https://twitter.com/ians_india/status/1877595730728087723?ref_src=twsrc%5Etfw%7Ctwcamp%5Etweetembed%7Ctwterm%5E1877595730728087723%7Ctwgr%5Ec966ded34647c127780c84860070f4e19e78a5fb%7Ctwcon%5Es1_&ref_url=https%3A%2F%2Fwww.lokmattimes.com%2Fcricket%2Fnews%2Fr-ashwin-sparks-fresh-language-debate-during-chennai-college-event-hindi-is-not-national-language-watch-video-a507%2F

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...