ಐಪಿಎಲ್ 2025 | ಅಪರೂಪದ ಸಚಿನ್‌ ದಾಖಲೆ ಮುರಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್

Date:

ಐಪಿಎಲ್ 2025 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನಾಗಿ ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದು, ಆರ್‌ಸಿಬಿ ತಂಡ ಕೂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಈ ನಡುವೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ರಜತ್ ಪಾಟಿದಾರ್ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರನ್ನು ಪಾಟಿದಾರ್ ಹಿಂದಿಕ್ಕಿದ್ದಾರೆ.

ರಜತ್ ಪಾಟಿದಾರ್ ಐಪಿಎಲ್‌ನಲ್ಲಿ ಅತಿ ಕಡಿಮೆ ಇನಿಂಗ್ಸ್‌ಗಳನ್ನು ಆಡುವ ಮೂಲಕ 1000 ರನ್ ಗಳಿಸಿದ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ 2025 ರ 34 ನೇ ಪಂದ್ಯದ 30 ನೇ ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ರಜತ್ 18 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರು.

ಐಪಿಎಲ್‌ನಲ್ಲಿ ಅತಿ ಕಡಿಮೆ ಇನಿಂಗ್ಸ್‌ಗಳಲ್ಲಿ 1000 ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಸಾಯಿ ಸುದರ್ಶನ್ ಹೊಂದಿದ್ದಾರೆ. ಅವರು ಕೇವಲ 25 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈಗ ರಜತ್ ಪಾಟಿದಾರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಂದಿದ್ದಾರೆ. ಅವರು 30 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡುವಲ್ಲಿ ವಿಫಲವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ 31 ಇನಿಂಗ್ಸ್‌ಗಳಲ್ಲಿ ಈ ದಾಖಲೆ ಸೃಷ್ಟಿಸಿದ್ದ ಸಚಿನ್ ತೆಂಡೂಲ್ಕರ್ ಅವರನ್ನು ಪಾಟಿದಾರ್ ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ. ಆರ್‌ಸಿಬಿ ಪರ 1000 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ರಜತ್ ಪಾಟಿದಾರ್ ಮಾಡಿದ್ದಾರೆ. ಟೀಮ್ ಇಂಡಿಯ್ ಸ್ಟಾರ್ ಬ್ಯಾಟರ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗು ದೇವದತ್ ಪಡಿಕ್ಕಲ್ ನಂತರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 1000 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ರಜತ್ ಪಾಟಿದಾರ್ ಪಾತ್ರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕ್ರಿಕೆಟಿಗ ಟ್ರಾವಿಸ್ ಹೆಡ್‌ ಬಳಸಿ ಆರ್‌ಸಿಬಿ ಬಗ್ಗೆ ಅವಹೇಳನ; ಊಬರ್‌ ಮೋಟೋ ವಿರುದ್ಧ ಪ್ರಕರಣ ದಾಖಲು

ಐಪಿಎಲ್ ಕ್ರಿಕೆಟ್‌ನಲ್ಲಿ 1000 ರನ್ ಗಳಿಸಲು ರಜತ್ ಪಾಟಿದಾರ್‌ಗೆ ಕೇವಲ 15 ರನ್‌ಗಳು ಬೇಕಾಗಿದ್ದವು, ಆರ್‌ಸಿಬಿ – ಪಿಬಿಕೆಎಸ್ ಪಂದ್ಯದಲ್ಲಿ ಸಾಧಾರಣ ಬ್ಯಾಟಿಂಗ್ ಪ್ರದರ್ಶನ ನೀಡಿದರು. ತಾಳ್ಮೆಯಿಂದ ಬ್ಯಾಟಿಂಗ್ ಆಡಿದರೂ ಬಳಿಕ ಸಿಕ್ಸರ್ ಹೊಡೆಯುವ ಪ್ರಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಪಾಟಿದಾರ್ ತಮ್ಮ 30 ನೇ ಐಪಿಎಲ್ ಪಂದ್ಯದಲ್ಲಿ 1000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

ಐಪಿಎಲ್ 2022 ರಲ್ಲಿ ಲುವ್ನಿತ್ ಸಿಸೋಡಿಯಾ ಗಾಯಗೊಂಡ ಬಳಿಕ ಬದಲೀ ಆಟಗಾರನಾಗಿ ಆರ್‌ಸಿಬಿ ಸೇರಿದ ರಜತ್ ಪಟಿದಾರ್ ಕೇವಲ 4 ವರ್ಷಗಳಲ್ಲೇ ತಂಡದ ನಾಯಕತ್ವ ವಹಿಸಿಕೊಳ್ಳುವ ಮಟ್ಟಕ್ಕೆ ಬೆಳೆದರು. ಉತ್ತಮ ಪ್ರದರ್ಶನ ನೀಡಿದ ಬಳಿಕ ಭಾರತ ತಂಡಕ್ಕೂ ಆಯ್ಕೆಯಾಗಿದ್ದರು. ಈಗ ಐಪಿಎಲ್‌ನ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ರುತುರಾಜ್ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ ಅವರನ್ನು ಹಿಂದಿಕ್ಕಿ ಹೊಸ ದಾಖಲೆ ನಿರ್ಮಿಸಿದ್ದಾರೆ.

18 ವರ್ಷಗಳ ಟೂರ್ನಿಯಲ್ಲಿ ಫ್ರಾಂಚೈಸಿಯೊಂದಿಗೆ 1000 ರನ್‌ಗಳ ಗಡಿಯನ್ನು ತಲುಪಿದ ಮೂರನೇ ಭಾರತೀಯ ರಜತ್ ಪಾಟಿದಾರ್ ಕೂಡ. ವಿರಾಟ್ ಕೊಹ್ಲಿ 8000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದರೆ, ದೇವದತ್ ಪಡಿಕ್ಕಲ್ ಕಳೆದ ಪಂದ್ಯದಲ್ಲಿ ಆರ್‌ಸಿಬಿ ಪರವಾಗಿ 1000 ರನ್ ಪೂರೈಸಿದ್ದರು.

ಐಪಿಎಲ್‌ನಲ್ಲಿ 1000 ರನ್ ಗಳಿಸಿದ ಎಲ್ಲ ಆಟಗಾರರಲ್ಲಿ, ಪಾಟಿದಾರ್ 35 ಕ್ಕಿಂತ ಹೆಚ್ಚು ಸರಾಸರಿ ಮತ್ತು 150 ಕ್ಕೂ ಹೆಚ್ಚು ಬ್ಯಾಟಿಂಗ್ ಮಾಡಿದ ಏಕೈಕ ಭಾರತೀಯ. ಪಾಟಿದಾರ್ ಕ್ರಿಸ್ ಗೇಲ್, ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಶಿಮ್ರಾನ್ ಹೆಟ್ಮೈಯರ್ ಮತ್ತು ಟ್ರಾವಿಸ್ ಹೆಡ್ ಅವರ ಗುಂಪಿನಲ್ಲಿ ಸೇರಿದ್ದಾರೆ.

ಕಡಿಮೆ ಇನಿಂಗ್ಸ್‌ಗಳಲ್ಲಿ 1000 ರನ್‌ ಗಳಿಸಿದವರು
ಸಾಯಿ ಸುದರ್ಶನ್- 25 ಇನಿಂಗ್ಸ್‌
ರಜತ್ ಪಾಟಿದಾರ್- 30 ಇನಿಂಗ್ಸ್‌
ಸಚಿನ್ ತೆಂಡೂಲ್ಕರ್- 31 ಇನಿಂಗ್ಸ್‌
ರುತುರಾಜ್ ಗಾಯಕ್ವಾಡ್- 31 ಇನಿಂಗ್ಸ್‌
ತಿಲಕ್ ವರ್ಮಾ- 33 ಇನಿಂಗ್ಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...