ಆರ್​ಸಿಬಿ ತಂಡಕ್ಕೆ ಬಂದ ಹೊಡಿ ಬಡಿ ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್, ಇವರ ಬ್ಯಾಟಿಂಗ್ ಅಬ್ಬರ ಹೇಗಿದೆ ಗೊತ್ತಾ?

Date:

ಎಲ್ಲ ಫ್ರಾಂಚೈಸಿಗಳಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಕೂಡ ಈ ಬಾರಿ ಅಳೆದು ತೂಗಿ ಹಲವು ಸ್ಟಾರ್ ಕ್ರಿಕೆಟಿಗರನ್ನು ಖರೀದಿಸಿದೆ.

ಕಳೆದ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡಿದ್ದ ಇಂಗ್ಲೆಂಡ್​ನ ಸ್ಟಾರ್ ಆಲ್‌ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್, ಈ ಬಾರಿ ಐಪಿಎಲ್​ ಮೆಗಾ ಹರಾಜಿನ ಮೂಲಕ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ.

ಮಧ್ಯಮ ಕ್ರಮಾಂಕಕ್ಕೆ ಹೇಳಿ ಮಾಡಿಸಿದ ಆಟಗಾರನಾಗಿರುವ ಲಿವಿಂಗ್​ಸ್ಟೋನ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದು, ಬೌಲಿಂಗ್​ನಲ್ಲೂ ನೆರವಾಗಲಿದ್ದಾರೆ. ತಮ್ಮ ಬ್ಯಾಟಿಂಗ್ ಝಲಕ್ ತೋರಿಸಿ ಲಿಯಾಮ್ ಲಿವಿಂಗ್​ಸ್ಟೋನ್ ಅಬ್ಬರಿಸಿರುವುದು ವಿಶೇಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಯಾಮ್ ಲಿವಿಂಗ್​​ಸ್ಟೋನ್ ಅಬುಧಾಬಿ ಟಿ10 ಲೀಗ್​​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಟೂರ್ನಿಯ 18ನೇ ಪಂದ್ಯದಲ್ಲಿ ಬಾಂಗ್ಲಾ ಟೈಗರ್ಸ್ ಪರ ಕಣಕ್ಕಿಳಿದ ಲಿಯಾಮ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಅಬ್ಬರಿಸಿದ್ದ ಹೆಗ್ಗಳಿಕೆ ಇವರಿಗಿದೆ.

ಶೇಖ್ ಝಾಯದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಬುಲ್ಸ್ ಹಾಗೂ ಬಾಂಗ್ಲಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಬುಲ್ಸ್ ತಂಡವು 10 ಓವರ್​​ಗಳಲ್ಲಿ 6 ವಿಕೆಟ್ ಕಳೆದುಕೊಂಡು 123 ರನ್ ಕಲೆಹಾಕಿತ್ತು.

ಈ ಸುದ್ದಿ ಓದಿದ್ದೀರಾ? IPL-2025 | ಇವರೇ ನೋಡಿ ‘ಆರ್‌ಸಿಬಿ’ಯಲ್ಲಿ ಅಬ್ಬರಿಸುವ ಆಟಗಾರರು, ಪೂರ್ಣ ಪಟ್ಟಿ ಇಲ್ಲಿದೆ

60 ಎಸೆತಗಳಲ್ಲಿ 124 ರನ್​​ಗಳ ಗುರಿ ಪಡೆದ ಬಾಂಗ್ಲಾ ಟೈಗರ್ಸ್ ಪರ ಲಿಯಾಮ್ ಲಿವಿಂಗ್​​ಸ್ಟೋನ್ ಅಬ್ಬರಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಿಯಾಮ್ ಮೈದಾನದ ಮೂಲೆ ಮೂಲೆಗೆ ಸಿಕ್ಸ್​-ಫೋರ್​​ಗಳ ಸುರಿಮಳೆಗೈದಿದ್ದರು. ಅಲ್ಲದೆ ಕೇವಲ 15 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 50 ರನ್ ಬಾರಿಸಿ 9.4 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದ್ದರು.

ಈ ಬಾರಿಯ ಮೆಗಾ ಹರಾಜಿನಲ್ಲಿ ಇಂಗ್ಲೆಡ್ ದಾಂಡಿಗ ಲಿಯಾಮ್ ಲಿವಿಂಗ್​ಸ್ಟೋನ್‌ ಅವರನ್ನು ಆರ್​​ಸಿಬಿ 8.75 ಕೋಟಿ ರೂ. ಗೆ ಖರೀದಿಸಿದೆ. ಯಾವ ಕ್ಷಣದಲ್ಲದರೂ ಸ್ಫೋಟಕ ಬ್ಯಾಟಿಂಗ್‌ ಮಾಡಬಲ್ಲ ಲಿಯಾಮ್ ಲಿವಿಂಗ್​ಸ್ಟೋನ್ ದಕ್ಷಿಣ ಆಫ್ರಿಕಾದ ಎ ಬಿ ಡಿವಿಲಿಯರ್ಸ್‌ ಅವರಂತೆ ಆರ್‌ಸಿಬಿ ಪ್ರೇಮಿಗಳ ಮನಸ್ಸು ಗೆಲ್ಲುವ ಆಟಗಾರರಾಗುತ್ತಾರಾ ಎಂಬುದು ಕಾದುನೋಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...