2ನೇ ಟೆಸ್ಟ್ | ಮೊದಲ ದಿನ ಮಳೆಯ ಕಾಟ; 35 ಓವರ್‌ಗಳಿಗೆ ಮುಗಿದ ಆಟ: ಕುಂಬ್ಳೆ ದಾಖಲೆ ಮುರಿದ ಅಶ್ವಿನ್

Date:

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯ ಬಹುತೇಕ ಮಳೆಯಲ್ಲೇ ಮುಕ್ತಾಯವಾಯಿತು. ಮಧ್ಯಾಹ್ನದವರೆಗೂ ಪಂದ್ಯ ನಡೆದು ಅತಿಥೇಯ ಬಾಂಗ್ಲಾದೇಶ 35 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ 107 ರನ್‌ ಕಲೆಹಾಕಿದರು. ಪದೇಪದೇ ವರುಣ ಆಗಮಿಸಿದ ಕಾರಣ ದಿನದಾಟವನ್ನು ಸ್ಥಗಿತಗೊಳಿಸಲಾಯಿತು.

ಒಂದು ಗಂಟೆ ತಡವಾಗಿ ಪಂದ್ಯ ಆರಂಭವಾದಾಗ ಟಾಸ್‌ ಗೆದ್ದ ಭಾರತದ ತಂಡದ ನಾಯಕ ರೋಹಿತ್‌ ಶರ್ಮಾ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರು. ಬಾಂಗ್ಲಾ 12 ಓವರ್‌ಗಳಲ್ಲಿಯೇ ವೇಗಿ ಆಕಾಶ್‌ದೀಪ್‌ ದಾಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ಮೊಮಿನುಲ್‌ ಹಕ್‌ (40) ಹಾಗೂ ನಾಯಕ ಶಾಂಟೋ (31) ಒಂದಿಷ್ಟು ಜೊತೆಯಾಟವಾಡಿದರು.

ಇವರಿಬ್ಬರ ಜೋಡಿಯನ್ನು ಸ್ಪಿನ್ನರ್‌ ಆರ್‌ ಅಶ್ವಿನ್‌ ಮುರಿದರು. ಟೀ ವಿರಾಮದ ವೇಳೆಗೆ ಮೊಮಿನುಲ್‌ ಹಕ್‌ ಹಾಗೂ ಮುಶ್ಫಿಕರ್‌ ರಹೀಮ್‌ (6) ಅಜೇಯರಾಗಿ ಆಟವಾಡುತ್ತಿದ್ದಾಗ ಮಳೆ ಜೋರಾದಾಗ ಪಂದ್ಯವನ್ನು ನಿಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟೆಸ್ಟ್ ಕ್ರಿಕೆಟ್ | ಐದನೇ ಶತಕ ಬಾರಿಸಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಶುಭ್‌ಮನ್ ಗಿಲ್

ಆಕಾಶ್ ದೀಪ್ 34/2 ಹಾಗೂ ಆರ್‌ ಅಶ್ವಿನ್‌ 22/1 ವಿಕೆಟ್‌ ಕಬಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಶ್ವಿನ್‌ ಅವರು ಟೀಂ ಇಂಡಿಯಾ ಹಿರಿಯ ಸ್ಪಿನ್ನರ್‌ ಅನಿಲ್‌ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಏಷ್ಯಾ ಖಂಡದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಆಟಗಾರನ ಹಿರಿಮೆಗೆ ಪಾತ್ರರಾದರು. ಮುಶ್ಪಿಕರ್‌ ರಹೀಮ್‌ ಅವರನ್ನು ಎಲ್‌ಬಿ ಬಲೆಗೆ ಬೀಳಿಸುವುದರ ಮೂಲಕ ಅಶ್ವಿನ್‌ ಏಷ್ಯಾ ಖಂಡದಲ್ಲಿ 420 ವಿಕೆಟ್‌ ಪಡೆದು ಕುಂಬ್ಳೆ ಅವರ 419 ವಿಕೆಟ್ ದಾಖಲೆಯನ್ನು ಸರಿಗಟ್ಟಿದರು.

ಏಷ್ಯಾದಲ್ಲಿ ಅತೀ ಹೆಚ್ಚು ವಿಕೆಟ್‌ ಪಡೆದ ಮೊದಲ ಸ್ಥಾನದಲ್ಲಿ ಶ್ರೀಲಂಕಾದ ಮುತ್ತಯ್ಯ ಮುರುಳೀಥರನ್‌ ಇದ್ದು, 612 ವಿಕೆಟ್ ಕಬಳಿಸಿದ್ದಾರೆ. 300 ವಿಕೆಟ್ ಪಡೆದ ಹರ್‌ಭಜನ್‌ ಸಿಂಗ್‌ ಐದನೇ ಸ್ಥಾನದಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...