ರಾಹುಲ್‌ಗೆ ಹಿಂಬಡ್ತಿ; ಜಡೇಜಾಗೆ ‘ಎ+’ ಶ್ರೇಣಿಗೆ ಬಡ್ತಿ

Date:

ಸತತ ವೈಫಲ್ಯದಿಂದ ಟೀಮ್‌ ಇಂಡಿಯಾದ ಉಪನಾಯಕನ ಪಟ್ಟ ಕಳೆದುಕೊಂಡ ಬೆನ್ನಲ್ಲೇ ಬಿಸಿಸಿಐ, ಕೆ ಎಲ್‌ ರಾಹುಲ್‌ಗೆ ಮತ್ತೊಂದು ಶಾಕ್‌ ಕೊಟ್ಟಿದೆ. 2022-23 ಸಾಲಿನ ಕೇಂದ್ರೀಯ ಒಪ್ಪಂದ ಹೊಂದಿರುವ ಆಟಗಾರರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು, ಕನ್ನಡಿಗ ಕೆ ಎಲ್‌ ರಾಹುಲ್‌ ಎ+ ಶ್ರೇಣಿಯಿಂದ ‘ಬಿ’ ಗುಂಪಿಗೆ ಹಿಂಬಡ್ತಿಪಡೆದಿದ್ದಾರೆ.

ಗಾಯದ ಕಾರಣ ಆರು ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದು, ಆಸ್ಟ್ರೇಲಿಯ ವಿರುದ್ಧದ ಬಾರ್ಡರ್-ಗವಾಸ್ಕರ್‌ ಟ್ರೋಫಿಯಲ್ಲಿ ಅಮೋಘ ಕಮ್‌ಬ್ಯಾಕ್ ಮಾಡಿದ್ದ ಸ್ಟಾರ್‌ ಆಲ್‌ರೌಂಡರ್‌ ಜಡೇಜಾಗೆ ಬಿಸಿಸಿಐ ಎ+ ಶ್ರೇಣಿಗೆ ಮುಂಬಡ್ತಿ ನೀಡಿದೆ.

ಬಿಸಿಸಿಐನ ಹೊಸ ಒಪ್ಪಂದದ ಪಟ್ಟಿಯಲ್ಲಿ ಅತ್ಯುನ್ನತ ವೇತನ ಶ್ರೇಣಿ (ಎ+) ಪಟ್ಟಿಯಲ್ಲಿ ಏಕದಿನ-ಟೆಸ್ಟ್‌ ತಂಡದ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ ಜೊತೆಗೆ ಜಡೇಜಾ  ಸ್ಥಾನ ಪಡೆದಿದ್ದಾರೆ. ಹಿರಿಯ ಆಟಗಾರ ಶಿಖರ್‌ ಧವನ್‌ ಮತ್ತು ಸಂಜು ಸ್ಯಾಮ್ಸನ್‌ ʻಸಿʼ ಶ್ರೇಣಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಮುಂಬರುವ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಈ ಇಬ್ಬರು ಆಟಗಾರರು ಸ್ಥಾನ ಪಡೆಯುವ ಸಾಧ್ಯತೆಯ ಸುಳಿವನ್ನು ಬಿಸಿಸಿಐ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಿಧ ವೇತನ ಶ್ರೇಣಿಗಳಲ್ಲಿ ಇರುವ ಆಟಗಾರರ ಪಟ್ಟಿ

ಎ+ (₹7 ಕೋಟಿ): ರೋಹಿತ್ ಶರ್ಮಾ, ವಿರಾಟ್‌ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ ಮತ್ತು ರವಿಂದ್ರ ಜಡೇಜಾ.

ಎ (₹5 ಕೋಟಿ): ಹಾರ್ದಿಕ್ ಪಾಂಡ್ಯ, ರವಿಚಂದ್ರನ್‌ ಅಶ್ವಿನ್, ಮೊಹಮ್ಮದ್‌ ಶಮಿ, ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್‌.

ಬಿ (₹3 ಕೋಟಿ): ಚೇತೇಶ್ವರ್‌ ಪೂಜಾರ, ಕೆ ಎಲ್ ರಾಹುಲ್‌, ಶ್ರೇಯಸ್‌ ಅಯ್ಯರ್, ಮೊಹಮ್ಮದ್‌ ಸಿರಾಜ್, ಸೂರ್ಯಕುಮಾರ್‌ ಯಾದವ್‌ ಮತ್ತು ಶುಭಮನ್‌ ಗಿಲ್.

ಸಿ (₹1 ಕೋಟಿ): ಶಿಖರ್‌ ಧವನ್, ಶಾರ್ದುಲ್ ಠಾಕೂರ್‌, ಇಶಾನ್‌ ಕಿಶನ್, ದೀಪಕ್‌ ಹೂಡ, ಯುಜ್ವೇಂದ್ರ ಚಹಲ್, ಕುಲ್ದೀಪ್‌ ಯಾದವ್‌, ವಾಷಿಂಗ್ಟನ್‌ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್‌ ಮತ್ತು ಕೆ ಎಸ್ ಭರತ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...