ಕುಸ್ತಿ ಫೆಡರೇಷನ್‌ನ ನೂತನ ಅಧ್ಯಕ್ಷನಾಗಿ ಬ್ರಿಜ್‌ ಭೂಷಣ್ ಆಪ್ತ: ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ ಸಾಕ್ಷಿ ಮಲಿಕ್

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಇಂದು ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್‌ನ ನೂತನ ಅಧ್ಯಕ್ಷನಾಗಿ ಆಯ್ಕೆಯಾದ ಸುದ್ದಿಯ ಬೆನ್ನಿಗೇ ದೇಶದ ಖ್ಯಾತ ಕುಸ್ತಿಪಟು ಹಾಗೂ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್, ಪ್ರತಿಭಟನೆಯ ದ್ಯೋತಕವಾಗಿ ತಾವು ಕುಸ್ತಿ ಕ್ರೀಡೆಯನ್ನು ತ್ಯಜಿಸುವುದಾಗಿ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ, “ಮಹಿಳಾ ಕುಸ್ತಿಪಟುಗಳು ಕಿರುಕುಳ ಎದುರಿಸುವುದು ಮುಂದುವರಿಯಲಿದೆ ಎಂದು ಇಂದಿನ ಚುನಾವಣಾ ಫಲಿತಾಂಶ ಸೂಚಿಸುತ್ತದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಭಾರತೀಯ ಕುಸ್ತಿ ಫೆಡರೇಶನ್: ನೂತನ ಅಧ್ಯಕ್ಷನಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ

“ಸಂಜಯ್ ಸಿಂಗ್ ಅವರು ಫೆಡರೇಷನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿಪಟುಗಳು ನಿರಂತರ ಕಿರುಕುಳ ಎದುರಿಸುವುದು ಮುಂದುವರಿಯಲಿದೆ. ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ, ಉದ್ಯಮದ ಪಾಲುದಾರ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಮ್ಮ ಹೋರಾಟ ಮುಂದುವರೆಯುತ್ತದೆ, ನಾನು ಕುಸ್ತಿಯನ್ನು ತ್ಯಜಿಸುತ್ತೇನೆ” ಎಂದು ಹೇಳಿ, ತನ್ನ ಕುಸ್ತಿಯ ಶೂವನ್ನು ಪತ್ರಕರ್ತರ ಮುಂದೆ ಇಡುತ್ತಾ ಸಾಕ್ಷಿ ಮಲಿಕ್ ಕಣ್ಣೀರು ಸುರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...