“ನಾನು ಕೋಚ್ ಆಗಿದ್ದರೆ ಸೋಲಿನ ಹೊಣೆ ಮೊದಲು ಹೊರುತ್ತಿದ್ದೆ”: ಗಂಭೀರ್ ವಿರುದ್ಧ ರವಿ ಶಾಸ್ತ್ರಿ ವಾಗ್ದಾಳಿ

Date:

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡವು 0-2 ಅಂತರದಲ್ಲಿ ಪರಾಭವಗೊಂಡ ಬೆನ್ನಿಗೇ, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಭಾರತ ತಂಡದ ಮಾಜಿ ಕೋಚ್ ರವಿ ಶಾಸ್ತ್ರಿ, “ನಾನು ಕೋಚ್‌ ಆಗಿದ್ದರೆ ಈ ಸೋಲಿನ ಹೊಣೆಯನ್ನು ನಾನು ಮೊದಲು ಹೊರುತ್ತಿದ್ದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುವಾಹಟಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆದ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಹೀನಾಯವಾಗಿ ಪರಾಭವಗೊಂಡ ಬೆನ್ನಿಗೇ, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ, “ಪ್ರಥಮ ಇನಿಂಗ್ಸ್‌ ಬ್ಯಾಟಿಂಗ್‌ನಲ್ಲಿ ದಯನೀಯವಾಗಿ ವಿಫಲವಾದ ಹೊಣೆಯನ್ನು ಬ್ಯಾಟರ್‌ಗಳು ತೆಗೆದುಕೊಳ್ಳಬೇಕಾದ ಅಗತ್ಯವಿದೆ. ದಕ್ಷಿಣ ಆಫ್ರಿಕಾದ 489 ರನ್‌ಗಳಿಗೆ ಪ್ರತಿಯಾಗಿ, ಭಾರತ ತಂಡ ಕೇವಲ 201 ರನ್‌ಗಳಿಗೆ ಆಲೌಟಾಯಿತು” ಎಂದು ʼಪ್ರಭಾತ್ ಖಬರ್ʼ ಸುದ್ದಿ ಸಂಸ್ಥೆಯೊಂದಿಗೆ ನಡೆಸಿರುವ ಪಾಡ್‌ಕಾಸ್ಟ್‌ನ ಟೀಸರ್‌ನಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ರಾಂಚಿಯಲ್ಲಿ ರನ್ ಮಳೆ, ದಾಖಲೆಗಳ ಸುರಿಮಳೆ: ರೋಹಿತ್, ಕೊಹ್ಲಿ, ಕುಲದೀಪ್ ಐತಿಹಾಸಿಕ ಸಾಧನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ಗೌತಮ್ ಗಂಭೀರ್ ಅವರನ್ನು ರಕ್ಷಿಸುತ್ತಿದ್ದೀರಾ?” ಎಂಬ ಸಂದರ್ಶಕರ ಪ್ರಶ್ನೆಗೆ, “ನಾನು ಅವರನ್ನು ರಕ್ಷಿಸುತ್ತಿಲ್ಲ. ಶೇ. 100ರಷ್ಟು ಅವರೂ ಹೊಣೆಗಾರರು. ನಾನು ಬೇರೆ ಏನಾದರೂ ಹೇಳುತ್ತಿದ್ದೇನೆಯೆ? ಇದು ನನ್ನ ವಿಷಯದಲ್ಲಿ ಆಗಿದ್ದರೆ, ಅದರ ಹೊಣೆಯನ್ನು ಹೊರುತ್ತಿದ್ಧ ಮೊದಲ ವ್ಯಕ್ತಿ ನಾನೇ ಆಗಿರುತ್ತಿದ್ದೆ. ಆದರೆ, ಬಳಿಕ ನಡೆಯುತ್ತಿದ್ದ ತಂಡದ ಸಭೆಯಲ್ಲಿ ನಾನು ಆಟಗಾರರನ್ನೂ ಸುಮ್ಮನೆ ಬಿಡುತ್ತಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಗುವಾಹಟಿ ಪಂದ್ಯದಲ್ಲಿ ಒಂದು ವಿಕೆಟ್‌ಗೆ 100 ರನ್ ಗಳಿಸಿದ್ದ ಭಾರತ ತಂಡ, ದಿಢೀರನೆ ಏಳು ವಿಕೆಟ್ ನಷ್ಟಕ್ಕೆ 130 ರನ್‌ಗೆ ಕುಸಿಯಿತು. ತಂಡ ಕೂಡಾ ಕೆಟ್ಟದಾಗಿರಲಿಲ್ಲ. ಅವರಲ್ಲಿ ಸಾಕಷ್ಟು ಪ್ರತಿಭೆಯಿತ್ತು. ಹೀಗಾಗಿ, ಸೋಲಿನ ಹೊಣೆಯನ್ನು ಆಟಗಾರರೂ ತೆಗೆದುಕೊಳ್ಳಲೇಬೇಕು. ನೀವು ಬಾಲ್ಯ ಕಾಲದಿಂದಲೂ ಸ್ಪಿನ್ ಬೌಲಿಂಗ್‌ಗೆ ಆಡಿದ್ದೀರಿ” ಎಂದು ಅವರು ಬೊಟ್ಟು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...