ಐಸಿಸಿ ಏಕದಿನ ಶ್ರೇಯಾಂಕ: ಮೇಲೇರಿದ ಕೊಹ್ಲಿ, ಕುಸಿದ ರೋಹಿತ್

Date:

ಏಕದಿನ ಕ್ರಿಕೆಟ್​ನಲ್ಲಿ ರನ್​ ಮಳೆ ಹರಿಸುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದೀಗ ಐಸಿಸಿಯಿಂದಲೂ ಭರ್ಜರಿ ಉಡುಗೊರೆ ಸಿಕ್ಕಿದೆ. ಕಳೆದ ಐದು ಇನಿಂಗ್ಸ್​ಗಳಲ್ಲಿಯೂ 50 ಕ್ಕೂ ಹೆಚ್ಚು ಇನಿಂಗ್ಸ್ ಆಡಿರುವ ಕೊಹ್ಲಿ ಇದೀಗ ಏಕದಿನ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ಶ್ರೇಯಾಂಕದಲ್ಲಿ ಅತ್ಯುತ್ತಮ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಇದು ಖುಷಿಯ ವಿಚಾರವಾದರೆ ಇದರ ಜೊತೆಗೆ ಮತ್ತೊಂದು ಕಹಿಯ ವಿಚಾರವಿದ್ದು, ಇಷ್ಟು ದಿನ ಈ ಮಾದರಿಯಲ್ಲಿ ಅಗ್ರಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಇದೀಗ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ವಿರಾಟ್ ಕೊಹ್ಲಿ 4 ವರ್ಷ 9 ತಿಂಗಳ ನಂತರ ಮತ್ತೊಮ್ಮೆ ಏಕದಿನ ಕ್ರಿಕೆಟ್​ನಲ್ಲಿ ನಂಬರ್ ಒನ್ ಬ್ಯಾಟರ್‌ ಆಗಿದ್ದಾರೆ. ಅಂದರೆ 1736 ದಿನಗಳ ದೀರ್ಘ ಕಾಯುವಿಕೆಯ ನಂತರ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಇದಕ್ಕೂ ಮೊದಲು, ವಿರಾಟ್ ಕೊಹ್ಲಿ ಏಪ್ರಿಲ್ 13, 2021 ರವರೆಗೆ ಏಕದಿನ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಏಪ್ರಿಲ್ 14 ರಂದು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಜಂ ನಂಬರ್ ಸ್ಥಾನಕ್ಕೇರುವ ಮೂಲಕ ವಿರಾಟ್ ಕೊಹ್ಲಿಯನ್ನು ಆ ಸ್ಥಾನದಿಂದ ಕೆಳಗಿಳಿಸಿದ್ದರು. ಆದರೀಗ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಎರಡು ಶತಕ ಮತ್ತು ಅರ್ಧಶತಕ ಬಾರಿಸಿದ್ದ ವಿರಾಟ್, ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನದಲ್ಲಿ 93 ರನ್ ಬಾರಿಸಿದ್ದರು. ಈ ಪ್ರದರ್ಶನ ಅವರನ್ನು ನಂಬರ್ 1 ಸ್ಥಾನಕ್ಕೇರಿಸಿದೆ.

ಇದನ್ನು ಓದಿದ್ದೀರಾ? ರಚಿನ್ ರವೀಂದ್ರ ಬೆನ್ನಲ್ಲೇ ಕಿವೀಸ್‌ ಪಡೆಯಲ್ಲಿ ಮಿಂಚುತ್ತಿರುವ ಮತ್ತೊಬ್ಬ ಭಾರತೀಯ: ಯಾರು ಈ ‘ರಜಿನಿಕಾಂತ್ ಭಕ್ತ’ ಆದಿತ್ಯ ಅಶೋಕ್?

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ 785 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ 784 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇತ್ತ ರೋಹಿತ್ ಶರ್ಮಾ 775 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಶುಭಮನ್ ಗಿಲ್ ಐದನೇ ಸ್ಥಾನದಲ್ಲಿದ್ದರೆ, ಶ್ರೇಯಸ್ ಅಯ್ಯರ್ 10 ನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ವಿರಾಟ್ ಕೊಹ್ಲಿ ಏಕದಿನ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಅಲಂಕರಿಸಿರಬಹುದು. ಆದರೆ ಅವರಿಗೆ ಈ ಸ್ಥಾನವನ್ನು ಉಳಿಸಿಕೊಳ್ಳುವುದು ಕಷ್ಟಕರವಾಗಬಹುದು. ಏಕೆಂದರೆ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ ಎರಡನೇ ಸ್ಥಾನದಲ್ಲಿದ್ದು, ಕೊಹ್ಲಿಗಿಂತ ಕೇವಲ ಒಂದು ರೇಟಿಂಗ್ ಪಾಯಿಂಟ್ ಹಿಂದಿದ್ದಾರೆ.

ಹೀಗಾಗಿ ಮುಂದಿನ ವಾರದ ಶ್ರೇಯಾಂಕವನ್ನು ಇಬ್ಬರೂ ಆಟಗಾರರು ಉಳಿದ ಎರಡು ಏಕದಿನ ಪಂದ್ಯಗಳಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ನಿರ್ಧರಿಸಲಾಗುತ್ತದೆ. ಮಿಚೆಲ್ ಅವರನ್ನು ಹಿಂದಿಕ್ಕಲು ವಿರಾಟ್ ಸ್ಥಿರವಾಗಿ ರನ್ ಗಳಿಸಬೇಕಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...