ಐಸಿಸಿ ರ‍್ಯಾಂಕಿಂಗ್ | ಶುಭ್‌ಮನ್‌ ಗಿಲ್ ನಂಬರ್ 1 ಬ್ಯಾಟ್ಸ್‌ಮನ್; ಸಿರಾಜ್ ನಂ. 1 ಬೌಲರ್

Date:

ಭಾರತದ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಮತ್ತು ವೇಗದ ಬೌಲರ್ ಮೊಹಮದ್ ಸಿರಾಜ್ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ರ‍್ಯಾಂಕಿಂಗ್ ಪಟ್ಟಿಯ ಪ್ರಕಾರ, ಶುಭಮನ್ ಗಿಲ್ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿದ್ದರೆ, ಮೊಹಮದ್ ಸಿರಾಜ್ ನಂಬರ್ ಒನ್ ಬೌಲರ್ ಆಗಿದ್ದಾರೆ.

ಶುಭ್‌ಮನ್ ಗಿಲ್ 830 ಪಾಯಿಂಟ್ ಗಳಿಸಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಇದುವರೆಗೆ ನಂಬರ್ ಒನ್ ಸ್ಥಾನದಲ್ಲಿದ್ದ ಪಾಕಿಸ್ತಾನದ ನಾಯಕ ಬಾಬರ್ ಆಜಂ, 824 ಪಾಯಿಂಟ್‌ಗಳೊಂದಿಗೆ  ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ (771) ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ (770) ನಾಲ್ಕನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (743) ಮತ್ತು ಭಾರತದ ರೋಹಿತ್ ಶರ್ಮಾ (739) ಕ್ರಮವಾಗಿ ಐದು ಮತ್ತು ಆರನೇ ಸ್ಥಾನ ಪಡೆದಿದ್ದಾರೆ.

ಭಾರತದ ವೇಗದ ಬೌಲರ್ ಮೊಹಮದ್ ಸಿರಾಜ್ 709 ಪಾಯಿಂಟ್‌ಗಳೊಂದಿಗೆ ಬೌಲಿಂಗ್ ವಿಭಾಗದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ 694 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದರೆ, ಆಸ್ಟ್ರೇಲಿಯಾದ ಆಡಂ ಜಂಪಾ 662 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದಾರೆ. ಭಾರತದ ಕುಲ್‌ದೀಪ್ ಯಾದವ್ (661) ಮತ್ತು ಪಾಕಿಸ್ತಾನದ ಶಾಹೀನ್ ಅಫ್ರಿದಿ (658) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಗಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಸಿಸಿ ವಿಶ್ವಕಪ್‌ 2003ರಲ್ಲಿ ಭಾರತ ತಂಡವು ಪ್ರಚಂಡ ಪ್ರದರ್ಶನ ತೋರುತ್ತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈಗ ಐಸಿಸಿ ರ‍್ಯಾಂಕಿಂಗ್‌ನಲ್ಲಿಯೂ ಭಾರತದ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳೇ ಅಗ್ರಸ್ಥಾನದಲ್ಲಿರುವುದು ವಿಶೇಷವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...