ಏಷ್ಯಾ ಕಪ್ ಹಸ್ತ ಲಾಘವ ವಿವಾದ: ಪಾಕಿಸ್ತಾನ ತಂಡದ ಬೇಡಿಕೆ ತಿರಸ್ಕರಿಸಿದ ಐಸಿಸಿ

Date:

ಏಷ್ಯಾ ಕಪ್‌ನಲ್ಲಿ ನಡೆದ ಹಸ್ತ ಲಾಘವ ವಿವಾದದ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಾಡಿದ ಗಂಭೀರ ಬೇಡಿಕೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಳ್ಳಿ ಹಾಕಿದೆ.

ಭಾರತ-ಪಾಕಿಸ್ತಾನ ಗುಂಪು ಹಂತದ ಪಂದ್ಯದಲ್ಲಿನ ವಿವಾದದ ಬಳಿಕ, ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ಉಳಿದ ಪಂದ್ಯಗಳಿಂದ ದೂರವಿಡಬೇಕೆಂದು ಪಿಸಿಬಿ ಒತ್ತಾಯಿಸಿತ್ತು.ಆದರೆ, ತನಿಖೆ ನಡೆಸಿದ ನಂತರ ಐಸಿಸಿ ಪಿಸಿಬಿಗೆ ಈ ಬೇಡಿಕೆಯನ್ನು ಸ್ವೀಕರಿಸಲಾಗುವುದಿಲ್ಲವೆಂದು ಅಧಿಕೃತವಾಗಿ ತಿಳಿಸಿದೆ.

ಐಸಿಸಿ ಮೂಲಗಳ ಪ್ರಕಾರ, ಈ ವಿಷಯದ ಬಗ್ಗೆ ಕೆಲ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧಿಕಾರಿಗಳು ಹಾಗೂ ಪಿಸಿಬಿ ನಿರ್ದೇಶಕರಿಗೂ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಇಬ್ಬರು ನಾಯಕರ ನಡುವೆ ಹಸ್ತಲಾಘವ ನಡೆಯುವುದಿಲ್ಲ ಎಂಬುದು ಅವರಿಗೆ ತಿಳಿದಿತ್ತು ಎಂದು ವರದಿಗಳು ಸೂಚಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನ ಮಂಡಳಿಯು ಭಾರತೀಯ ಆಟಗಾರರು ಹಾಗೂ ಪೈಕ್ರಾಫ್ಟ್ ವಿರುದ್ಧ ಅಧಿಕೃತವಾಗಿ ದೂರು ಸಲ್ಲಿಸಿತ್ತು. ಪೈಕ್ರಾಫ್ಟ್ ಪಾಕಿಸ್ತಾನ ನಾಯಕ ಸಲ್ಮಾನ್ ಆಘಾಗೆ, ಭಾರತೀಯ ಆಟಗಾರ ಸೂರ್ಯಕುಮಾರ್ ಯಾದವ್ ಜೊತೆ ಹಸ್ತಲಾಘವ ಮಾಡಬಾರದು ಎಂದು ಸೂಚಿಸಿದ್ದಾರೆ ಎಂಬ ಆರೋಪವನ್ನು ಪಿಸಿಬಿ ತನ್ನ ಪತ್ರದಲ್ಲಿ ಮಾಡಿತ್ತು.

ಇದನ್ನು ಓದಿದ್ದೀರಾ? ಕ್ರೀಡಾಸ್ಫೂರ್ತಿ ಮರೆತು ಹಣಕ್ಕಾಗಿ ಜಗತ್ತಿನ ಮುಂದೆ ಬೆತ್ತಲಾದ ಬಿಸಿಸಿಐ, ಕೇಂದ್ರ ಸರ್ಕಾರ

ಎದುರಾಳಿ ತಂಡದೊಂದಿಗೆ ಹಸ್ತಲಾಘವ ನಿರಾಕರಿಸುವ ಮೂಲಕ ಭಾರತೀಯ ಆಟಗಾರರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಾದಿಸಿತ್ತು.

ಇದೇ ವೇಳೆ, ಪಿಸಿಬಿಯು ಐಸಿಸಿಗೆ ಬರೆದ ಪತ್ರದಲ್ಲಿ, ಪೈಕ್ರಾಫ್ಟ್ ಅವರನ್ನು ತಕ್ಷಣವೇ ತೆಗೆದುಹಾಕದಿದ್ದರೆ, ಪಾಕಿಸ್ತಾನ ತಂಡವೇ ಟೂರ್ನಿಯಿಂದ ಹೊರಹೋಗಲಿದೆ ಎಂದು ಎಚ್ಚರಿಕೆ ನೀಡಿತ್ತು.

ಪಾಕಿಸ್ತಾನ ತಂಡ ತನ್ನ ಮುಂದಿನ ಪಂದ್ಯವನ್ನು ನಾಳೆ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ವಿರುದ್ಧ ಆಡಲಿದೆ.

ಇದರ ನಡುವೆ, ಭಾರತ ವಿರುದ್ಧ ಏಳು ವಿಕೆಟ್‌ಗಳ ಸೋಲಿನ ನಂತರ, ಪಿಸಿಬಿ ತನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಉಸ್ಮಾನ್ ವಾಹ್ಲಾ ಅವರನ್ನು ಅಮಾನತುಗೊಳಿಸಿದೆ.

ಹಸ್ತಲಾಘವ ವಿವಾದದ ಕುರಿತು ತಕ್ಷಣ ಕ್ರಮ ಕೈಗೊಳ್ಳದ ಕಾರಣ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪಾಕಿಸ್ತಾನ ಮಾಧ್ಯಮ ವರದಿಗಳು ತಿಳಿಸಿವೆ. ಮೊಹ್ಸಿನ್ ನಖ್ವಿ ನೇತೃತ್ವದ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...