ಐಸಿಸಿ ಸೆಮಿಫೈನಲ್ | ದುಬೈ ಪಿಚ್ ಭಾರತಕ್ಕೆ ಅನುಕೂಲವೇ; ಆಸ್ಟ್ರೇಲಿಯಾ ನಾಯಕ ಹೇಳಿದ್ದೇನು?

Date:

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಮಂಗಳವಾರ ದುಬೈನಲ್ಲಿ ನಡೆಯಲಿದೆ. ದುಬೈನ ಕ್ರೀಡಾಂಗಣದಲ್ಲಿ ಭಾರತ ತಂಡ ಈಗಾಗಲೇ 3 ಪಂದ್ಯಗಳನ್ನು ಆಡಿದ್ದು, ಸೆಮಿಫೈನಲ್‌ ಕೂಡ ಅಲ್ಲಿಯೇ ನಡೆಯುತ್ತಿದೆ. ಹೀಗಾಗಿ, ಭಾರತ ತಂಡಕ್ಕೆ ಹೆಚ್ಚು ಅನುಕೂಲ ಆಗಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್, ‘ಭಾರತ ತಂಡಕ್ಕೆ ಅನುಕೂಲ ಆಗುತ್ತದೆ ಎಂಬ ಬಗ್ಗೆ ನಮಗೆ ಗೊತ್ತಿಲ್ಲ’ ಎಂದಿದ್ದಾರೆ.

ಚಾಂಪಿಯನ್ಸ್‌ ಟೂರ್ನಿಯಲ್ಲಿ ಭಾರತ ತಂಡವು ಈವರೆಗೆ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದಿದೆ. ಈ ಪಂದ್ಯಗಳು ದುಬೈನ ಕ್ರೀಡಾಂಗಣದಲ್ಲಿಯೇ ನಡೆದಿವೆ. ಮೂರರಲ್ಲೂ ಗೆದ್ದಿರುವ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಆಸ್ಟ್ರೇಲಿಯಾ ತಂಡ ಕೂಡ ಮೂರು ಪಂದ್ಯಗಳನ್ನು ಆಡಿದ್ದು, ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಇನ್ನೆರಡು ಪಂದ್ಯಗಳಲ್ಲಿ ಸೋಲು-ಗೆಲುವು ಕಾಣುವ ಪರಿಸ್ಥಿತಿ ಇರಲಿಲ್ಲ. ಒಂದು ಪಂದ್ಯ ಮಳೆಯಿಂದ ರದ್ದಾಗಿದ್ದು, ಮತ್ತೊಂದು ಪಂದ್ಯ ಅರ್ಧಕ್ಕೆ ಮುಗಿದುಹೋಯಿತು. ಪರಿಣಾಮ, ಎರಡೂ ಪಂದ್ಯಗಳಿಂದ ತಲಾ ಒಂದು ಅಂಕ ಪಡೆದ ಆಸ್ಟ್ರೇಲಿಯಾ ಸೆಮಿಫೈನಲ್‌ ಪ್ರವೇಶಿಸಿದೆ.

ಉಭಯ ತಂಡಗಳ ನಡುವೆ ದುಬೈನಲ್ಲಿ ಮಂಗಳವಾರ ಮಧ್ಯಾಹ್ನದಿಂದ ಪಂದ್ಯ ಆರಂಭವಾಗಲಿದೆ. 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋಲುಂಡಿತ್ತು. ಈಗ, ಆಸ್ಟ್ರೇಲಿಯಾವನ್ನು ಸೋಲಿಸಿ, ಫೈನಲ್‌ಗೆ ಲಗ್ಗೆ ಇಡಲು ಭಾರತ ತಂಡ ಎದುರು ನೋಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಬೈ ಪಿಚ್‌ನಲ್ಲಿ ಆಡುತ್ತಿರುವುದು ಭಾರತಕ್ಕೆ ಅನುಕೂಲವಾಗುತ್ತದೆ ಎಂಬ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಮಾತನಾಡಿರುವ ಸ್ಮಿತ್, “ದುಬೈನಲ್ಲಿ ಭಾರತಕ್ಕೆ ಅನುಕೂಲವಾಗುವ ಬಗ್ಗೆ ನಮಗೆ ಅನುಮಾನ, ಗೊಂದಲಗಳಿಲ್ಲ. ನಾವು ಉತ್ತಮ ಪ್ರದರ್ಶನ ನೀಡುತ್ತೇವೆಂದು ಭಾವಿಸಿದ್ದೇವೆ” ಎಂದಿದ್ದಾರೆ.

“ಭಾರತ ತಂಡ ಆ ಪಿಚ್‌ನಲ್ಲಿ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಪಿಚ್ ಬಗ್ಗೆ ತಂಡಕ್ಕೆ ಚೆನ್ನಾಗಿ ತಿಳಿದಿರುತ್ತದೆ. ನಾನು ಕೂಡ ಮೈದಾನ ಸಿಬ್ಬಂದಿಗಳ ಜೊತೆ ಮಾತನಾಡಿದ್ದೇನೆ. ಪಂದ್ಯವು ಪ್ರಬಲ ಪೈಪೋಟಿಯೊಂದಿಗೆ ನಡೆಯುತ್ತದೆಂದು ಭಾವಿಸಿದ್ದೇನೆ. ಭಾರತ ತಂಡಕ್ಕೆ ಅನುಕೂಲವಾಗುವ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಸ್ಮಿತ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...