ವಿಶ್ವಕಪ್ | ಪಾಕಿಸ್ತಾನದ ಅಭ್ಯಾಸ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವಿಲ್ಲ

Date:

ಏಕದಿನ ವಿಶ್ವಕಪ್‌ಗೆ ಮುನ್ನ ಸೆಪ್ಟೆಂಬರ್‌ 29 ರಂದು ಹೈದರಾಬಾದ್‌ನಲ್ಲಿ ನಡೆಯುವ ಪಾಕಿಸ್ತಾನ ತಂಡದ ಮೊದಲ ಅಭ್ಯಾಸ ಕ್ರಿಕೆಟ್ ಪಂದ್ಯಕ್ಕೆ ಭದ್ರತಾ ಕಾರಣಗಳಿಗಾಗಿ ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ಸ್ಥಳೀಯ ಭದ್ರತಾ ಸಂಸ್ಥೆಗಳ ಸಲಹೆಯಂತೆ ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದೊಳಗೆ ಅಭಿಮಾನಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಬಿಸಿಸಿಐ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

“ಹೈದರಾಬಾದ್‌ನಲ್ಲಿನ ಪಂದ್ಯದ ದಿನವು ಹಬ್ಬಗಳೊಂದಿಗೆ ಹೊಂದಿಕೆಯಾಗುತ್ತದೆ ಮತ್ತು ನಗರದ ಸುತ್ತಲೂ ದೊಡ್ಡ ಸಭೆಗಳನ್ನು ನಡೆಸುವ ಸಾಧ್ಯತೆಯಿದೆ. ಟಿಕೆಟ್ ಖರೀದಿಸಿದ ಪ್ರೇಕ್ಷಕರಿಗೆ ಸಂಪೂರ್ಣವಾಗಿ ಹಣವನ್ನು ಮರುಪಾವತಿ ಮಾಡಲಾಗುತ್ತದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ ಜೊತೆಗಿನ ಮೈತ್ರಿ ಕೊನೆಗೊಳಿಸಿದ ಎಐಎಡಿಎಂಕೆ: ಪಟಾಕಿ ಹಚ್ಚಿ ಸಂಭ್ರಮಿಸಿದ ಕಾರ್ಯಕರ್ತರು

ಭಾರತಕ್ಕೆ ಪಾಕಿಸ್ತಾನ ತಂಡ ಪ್ರಯಾಣಿಸುವ 48 ಗಂಟೆಗಳ ಒಳಗೆ ವೀಸಾ ಕ್ಲಿಯರೆನ್ಸ್ ನೀಡಲಾಗುತ್ತದೆ. ಪಾಕಿಸ್ತಾನ ತಂಡವು ಸೆಪ್ಟೆಂಬರ್ 27ರ ಮುಂಜಾನೆ ಭಾರತಕ್ಕೆ ಪ್ರಯಾಣಿಸಲಿದೆ. ತಂಡವು ಸೆಪ್ಟೆಂಬರ್ 29 ರಂದು ಹೈದರಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಮೊದಲ ಅಭ್ಯಾಸ ಪಂದ್ಯವನ್ನು ಆಡುತ್ತದೆ” ಎಂದು ಐಸಿಸಿ ವಕ್ತಾರರು ಮಾಹಿತಿ ನೀಡಿದ್ದಾರೆ.

ವೀಸಾ ಮಂಜೂರಾತಿ ವಿಚಾರದಲ್ಲಿ ಪಾಕಿಸ್ತಾನದ ಕ್ರಿಕೆಟ್ ಮಂಡಳಿಯಲ್ಲಿ ಗೊಂದಲ ಮನೆಮಾಡಿತ್ತು. ವೀಸಾ ಕ್ಲಿಯರೆನ್ಸ್ ಕುರಿತು ನಮಗೆ ಇನ್ನೂ ಭಾರತೀಯ ರಾಯಭಾರ ಕಚೇರಿಯಿಂದ ಕರೆ ಬಂದಿಲ್ಲಎಂದು ಪಿಸಿಬಿ ವಕ್ತಾರ ಉಮರ್ ಫಾರೂಕ್ ತಿಳಿಸಿದ್ದರು.

ವೀಸಾ ವಿಳಂಬದ ಬಗ್ಗೆ ಪಿಸಿಬಿ ಸೋಮವಾರ ಐಸಿಸಿ ಸಿಇಒ ಜಿಯೋಫ್ ಅಲ್ಲಾರ್ಡಿಸ್‌ಗೆ ಪತ್ರ ಬರೆದ ನಂತರ ಐಸಿಸಿಯಿಂದ ದೃಢೀಕರಣ ನೀಡಲಾಗಿದೆ.

ಬಾಬರ್ ಅಜಮ್ ಸಾರಥ್ಯದ ಪಾಕಿಸ್ತಾನ ತಂಡ ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತೊಂದು ಅಭ್ಯಾಸ ಪಂದ್ಯವನ್ನು ಆಡಲಿದೆ ಮತ್ತು ಮೂರು ದಿನಗಳ ನಂತರ ಅ.6ರಂದು ನೆದರ್‌ಲ್ಯಾಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...