ವಿಶ್ವಕಪ್ | ಜನ್ಮದಿನದಂದೇ ವಿರಾಟ್ ಕೊಹ್ಲಿ ದಾಖಲೆಯ ಶತಕ: ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ

Date:

ಪ್ರಸ್ತುತ ನಡೆಯತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಯ ಭರ್ಜರಿ ಶತಕದ ನೆರವಿನೊಂದಿಗೆ ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್‌ಗಳ ಸವಾಲಿನ ಗುರಿ ನೀಡಿದೆ.

ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 326 ರನ್‌ ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಏಕದಿನ ವೃತ್ತಿ ಜೀವನದ 49ನೇ ಶತಕ ಸಿಡಿಸಿದ್ದಾರೆ. ಈ ಮೂಲಕ ‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟಿದರು. ವಿರಾಟ್ ಕೊಹ್ಲಿ, ಒಟ್ಟು 121 ಎಸೆತಗಳಲ್ಲಿ 10 ಬೌಂಡರಿಗಳ ಸಹಾಯದೊಂದಿಗೆ 101 ರನ್ ಗಳಿಸುವ ಮೂಲಕ ಔಟಾಗದೆ ಉಳಿದರು. ಈ ಮೂಲಕ ತಮ್ಮ ‘ಬರ್ತ್ ಡೇ’ ದಿನದಂದೇ ಅಭಿಮಾನಿಗಳಿಗೆ ಶತಕದ ‘ಗಿಫ್ಟ್’ ನೀಡಿದ್ದಾರೆ.

ಟಾಸ್ ಗೆದ್ದ ಬಳಿಕ ಬ್ಯಾಟಿಂಗ್ ನಡೆಸುವ ತೀರ್ಮಾನ ತೆಗೆದುಕೊಂಡ ನಾಯಕ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ, ಶುಭಮನ್ ಗಿಲ್ ಅವರೊಂದಿಗೆ ಉತ್ತಮ ಆರಂಭ ನೀಡಿದರು. ಸ್ಫೋಟಕ ಬ್ಯಾಟಿಂಗ್ ನಡೆಸುವ ಸೂಚನೆ ನೀಡಿದ ರೋಹಿತ್, ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಕೇವಲ 24 ಎಸೆತಗಳಲ್ಲಿ 6 ಬೌಂಡರಿ ಹಾಗೂ ಎರಡು ಸಿಕ್ಸ್‌ನ ನೆರವಿನಿಂದ 40 ರನ್ ದಾಖಲಿಸಿದ್ದಾಗ ರಬಾಡ ಎಸೆತದಲ್ಲಿ ಬವುಮಾಗೆ ಕ್ಯಾಚಿತ್ತು ನಿರ್ಗಮಿಸಿದರು. ಈ ವೇಳೆ ಕ್ರೀಸ್‌ಗೆ ಆಗಮಿಸಿದ ಕೊಹ್ಲಿ, ಗಿಲ್ ಜೊತೆಯಾಟ ನಡೆಸುತ್ತಿದ್ದಾಗಲೇ ಕೇಶವ್ ಮಹಾರಾಜ್ ಎಸೆದ ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಗಿಲ್ ಕ್ಲೀನ್ ಬೌಲ್ಡ್ ಆದರು.

ಆ ಬಳಿಕ ವಿರಾಟ್‌ಗೆ ಸಾಥ್ ನೀಡಿದ ಶ್ರೇಯಸ್ ಅಯ್ಯರ್, ಉತ್ತಮ ಜೊತೆಯಾಟ ನಡೆಸಿದರು. ಮೂರನೇ ವಿಕೆಟ್‌ಗೆ ಈ ಜೋಡಿ 158 ಎಸೆತಗಳಲ್ಲಿ 135 ರನ್ ಕಲೆ ಹಾಕಿತು. ಶ್ರೇಯಸ್ ಅಯ್ಯರ್ 87 ಎಸೆತಗಳಲ್ಲಿ 77 ರನ್ ಗಳಿಸಿ ಔಟಾದರು. ಬಳಿಕ ಬಂದ ಕೆ ಎಲ್ ರಾಹುಲ್ 8 ರನ್, ಸೂರ್ಯಕುಮಾರ್ ಯಾದವ್ 22 ಗಳಿಸಿದ್ದ ವೇಳೆ ಔಟಾದರು.

ಕೊನೆಯಲ್ಲಿ ಕೊಹ್ಲಿ121 ಎಸೆತಗಳಲ್ಲಿ 101 ರನ್ ಗಳಿಸಿ ಅಜೇಯರಾಗಿ ಉಳಿದರೆ, ರವೀಂದ್ರ ಜಡೇಜಾ 15 ಎಸೆತಗಳಲ್ಲಿ 29 ರನ್ ಗಳಿಸಿ ಔಟಾಗದೆ ಉಳಿದರು.

ದಕ್ಷಿಣ ಆಫ್ರಿಕಾ ಪರವಾಗಿ ಎನ್‌ಗಿಡಿ, ಜಾನ್‌ಸೆನ್, ರಬಾಡ, ಕೇಶವ್ ಮಹಾರಾಜ್, ತಬ್ರೇಝ್ ಶಂಶಿ ತಲಾ ಒಂದೊಂದು ವಿಕೆಟ್ ಗಳಿಸಿದರು.

ಸ್ಮರಣೀಯ ಹುಟ್ಟುಹಬ್ಬವನ್ನಾಗಿಸಿಕೊಂಡ ವಿರಾಟ್ ಕೊಹ್ಲಿ
ಇಂದು 35ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸ್ಮರಣೀಯವಾಗಿಸಿಕೊಂಡರು.

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 49ನೇ ಶತಕ ಸಿಡಿಸುವ ಮೂಲಕ ದಶಕಗಳ ಕಾಲ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಗರಿಷ್ಠ ಏಕದಿನ ಶತಕದ ಸಾಧನೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾದರು.

ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ 49 ಶತಕ ಸಿಡಿಸಲು 452 ಇನಿಂಗ್ಸ್‌ಗಳನ್ನು ತೆಗೆದುಕೊಂಡರೆ, ವಿರಾಟ್ ಕೊಹ್ಲಿ ಕೇವಲ 277 ಇನಿಂಗ್ಸ್‌ಗಳಲ್ಲಿ 49 ಏಕದಿನ ಶತಕದ ಸಾಧನೆ ಮಾಡಿದರು. ಇನ್ನೊಂದು ಶತಕ ಬಂದರೆ, ಸಚಿನ್ ದಾಖಲೆಯನ್ನು ಹಿಂದಿಕ್ಕಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...