ಐಪಿಎಲ್‌ನಲ್ಲಿ ಬಾಂಗ್ಲಾ ಆಟಗಾರ | ಶಾರುಖ್ ಬದಲಿಗೆ ಅಮಿತ್ ಶಾರನ್ನು ಪ್ರಶ್ನಿಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

Date:

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಗೆ ಬಾಂಗ್ಲಾದೇಶದ ಕ್ರಿಕೆಟಿಗನನ್ನು ಖರೀದಿಸಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಫ್ರಾಂಚೈಸಿ ಮಾಲೀಕರನ್ನು ದೂಷಿಸುವ ಬದಲು, ಬಿಸಿಸಿಐ ಮತ್ತು ಐಸಿಸಿ ಅಂತಹ ನಿಯಮಗಳನ್ನು ರೂಪಿಸಲು ಏಕೆ ಅವಕಾಶ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ಪ್ರಶ್ನಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

​ಈ ಕುರಿತು ‘ಎಕ್ಸ್‌’ (ಟ್ವಿಟರ್‌) ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, “ವಿದೇಶಿ ಆಟಗಾರನೊಬ್ಬ ಐಪಿಎಲ್‌ನಲ್ಲಿದ್ದಾರೆ ಎಂದರೆ, ಬಿಸಿಸಿಐ ಅಥವಾ ಐಪಿಎಲ್ ನಿಯಮಗಳು ಅದಕ್ಕೆ ಅವಕಾಶ ನೀಡಿವೆ ಎಂದರ್ಥ,” ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ, ಶಾರುಖ್ ಖಾನ್ ಸಹ-ಮಾಲೀಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು 2026ರ ಸಾಲಿಗೆ ಖರೀದಿಸಿತ್ತು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಪ್ರಕ್ಷುಬ್ಧ ವಾತಾವರಣದ ಹಿನ್ನೆಲೆಯಲ್ಲಿ, ಬಾಂಗ್ಲಾ ಆಟಗಾರನ ಸೇರ್ಪಡೆಯು ಈಗ ರಾಜಕೀಯ ಹಾಗೂ ರಾಷ್ಟ್ರೀಯತೆಯ ಬಿಸಿ ಚರ್ಚೆಗೆ ಗ್ರಾಸವಾಗಿದೆ.

​ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕ ಸಂಗೀತ್ ಸೋಮ್, ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದು ಕರೆದಿದ್ದಾರೆ. “ನೆರೆಯ ದೇಶದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದ್ದರೂ, ಶಾರುಖ್ ಖಾನ್ ಬಾಂಗ್ಲಾ ಆಟಗಾರನನ್ನು ಖರೀದಿಸಿದ್ದಾರೆ. ಇಂತಹ ದೇಶದ್ರೋಹಿಗಳು ಭಾರತದ ಜನರ ಬೆಂಬಲದಿಂದಲೇ ಸ್ಟಾರ್ ಆಗಿದ್ದಾರೆ ಎಂಬುದನ್ನು ಮರೆಯಬಾರದು. ಅವರಿಗೆ ಈ ದೇಶದಲ್ಲಿ ಬದುಕುವ ಹಕ್ಕಿಲ್ಲ,” ಎಂದು ಸೋಮ್ ಹರಿಹಾಯ್ದಿದ್ದಾರೆ. ಅಲ್ಲದೆ, ಬಾಂಗ್ಲಾ ಆಟಗಾರನನ್ನು ವಿಮಾನ ನಿಲ್ದಾಣದಿಂದ ಹೊರಬರಲು ಬಿಡುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

​’ಅನುಕೂಲಕ್ಕೆ ತಕ್ಕ ರಾಷ್ಟ್ರೀಯತೆ’: ಖರ್ಗೆ ತಿರುಗೇಟು

ಬಿಜೆಪಿ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯ ರಾಷ್ಟ್ರೀಯತೆ ಕೇವಲ ಅವರ ರಾಜಕೀಯ ಲಾಭಕ್ಕೆ ಮಾತ್ರ ಸೀಮಿತ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಹೋಗಿ ಬಂದವರಿಗೆ ಸಂಭ್ರಮದ ಸ್ವಾಗತ; ಕರ್ನಾಟಕ ಹೀಗೇಕಾಯಿತು?

​”ಫ್ರಾಂಚೈಸಿಗಳನ್ನು ದೂಷಿಸುವ ಬದಲು, ಬಿಸಿಸಿಐ ಏಕೆ ಬಾಂಗ್ಲಾದೇಶದ ಆಟಗಾರರಿಗೆ ಐಪಿಎಲ್‌ನಲ್ಲಿ ಭಾಗವಹಿಸಲು ಅನುಮತಿ ನೀಡಿದೆ ಎಂದು ಬಿಜೆಪಿ ನಾಯಕರು ಕೇಳಬೇಕಿತ್ತು. ಆದರೆ ಅವರಿಗೆ ಈ ಪ್ರಶ್ನೆ ಕೇಳಲು ಧೈರ್ಯವಿಲ್ಲ,” ಎಂದು ಖರ್ಗೆ ಹೇಳಿದ್ದಾರೆ.

​ಬಿಜೆಪಿಯ ಇಬ್ಬಗೆಯ ನೀತಿಯನ್ನು ಪ್ರಶ್ನಿಸಿದ ಖರ್ಗೆ, “ಪಹಲ್ಗಾಮ್ ದಾಳಿಯ ನಂತರವೂ ಭಾರತವು ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡಿದಾಗ ಬಿಜೆಪಿ ನಾಯಕರಿಗೆ ಯಾವುದೇ ಸಮಸ್ಯೆಯಾಗಲಿಲ್ಲ. ಕೋವಿಡ್ ಸಮಯದಲ್ಲಿ ಐಪಿಎಲ್ ಪಂದ್ಯಗಳನ್ನು ಇಸ್ಲಾಮಿಕ್ ರಾಷ್ಟ್ರಗಳಿಗೆ ಸ್ಥಳಾಂತರಿಸಿದಾಗ ಮತ್ತು ಅಲ್ಲಿಯೇ ಹರಾಜು ಪ್ರಕ್ರಿಯೆ ನಡೆಸಿದಾಗಲೂ ಇವರಿಗೆ ತೊಂದರೆಯಾಗಲಿಲ್ಲ,” ಎಂದು ನೆನಪಿಸಿದ್ದಾರೆ.

​ಫ್ರಾಂಚೈಸಿಗಳನ್ನು ಪ್ರಶ್ನಿಸುವ ಬದಲು, ಬಿಸಿಸಿಐ ಮತ್ತು ಐಸಿಸಿ ಈ ರೀತಿ ಕಾರ್ಯನಿರ್ವಹಿಸಲು ಏಕೆ ಅವಕಾಶ ನೀಡುತ್ತಿದ್ದೀರಿ ಎಂದು ಗೃಹ ಸಚಿವರನ್ನೇ ಬಿಜೆಪಿಗರು ಕಠಿಣವಾಗಿ ಪ್ರಶ್ನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...