ಐಪಿಎಲ್ 2025 | ಸೋಲಿಗೆ ರಿಷಬ್‌ರನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಲಖನೌ ಮಾಲೀಕ ಸಂಜೀವ್‌ ಗೋಯೆಂಕಾ

Date:

ಐಪಿಎಲ್‌ 18ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಸೋತ ನಂತರ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡು ತಂಡದ ಮಾಲೀಕ ರಿಷಬ್‌ ಪಂತ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುತ್ತಿದ್ದಂತೆ ಮೈದಾನಕ್ಕೆ ಆಗಮಿಸಿದ್ದ ಸಂಜೀವ್ ಗೊಯೆಂಕಾ ಅವರು ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿತ್ತು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧದ ಸೋಲಿನ ಬಳಿಕ ಗೊಯೆಂಕಾ ನಾಯಕನಿಗೆ ತರಾಟೆ ತೆಗೆದುಕೊಳ್ಳುತ್ತಿರುವಂತೆ ಕಾಣುತ್ತಿದೆ.

ಈ ಬಾರಿ ರಿಷಭ್ ಪಂತ್ ಅವರೊಂದಿಗೆ ತುಸು ಗಂಭೀರವಾಗಿ ಚರ್ಚಿಸುವಂತೆ ಕಂಡು ಬಂದಿದ್ದು, ಅಲ್ಲರೆ ಬೆರಳು ತೋರಿಸುವ ಮೂಲಕ ಖಡಕ್ ಸೂಚನೆ ನೀಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಂದರೆ ತವರು ಮೈದಾನದಲ್ಲಿ ಎಲ್​ಎಸ್​ಜಿ ತಂಡವು ಎರಡು ಪಂದ್ಯಗಳನ್ನು ಸೋತಿರುವುದನ್ನು ಸಂಜೀವ್ ಗೊಯೆಂಕಾ ಗಂಭೀರವಾಗಿ ಪರಿಗಣಿಸಿರುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಅಂದು ಪುಟ್ಟ ಹುಡುಗ; ಇಂದು ಗುರುವನ್ನೇ ಮೀರಿಸಿದ ಶಿಷ್ಯ

ಸಂಜೀವ್ ಗೊಯೆಂಕಾ ಹಾಗೂ ರಿಷಭ್ ಪಂತ್ ಅವರ ನಡುವಣ ಈ ಬಿಸಿ ಚರ್ಚೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಕೆ ಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಬರಲಿದೆಯೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶಗಳಿಂದಲೇ ಸ್ಪಷ್ಟ ಉತ್ತರವಂತು ಸಿಗಲಿದೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆ ಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣದಿಂದಾಗಿ ರಾಹುಲ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆದಿದ್ದರು. ಇದೀಗ ಅವರ ಸ್ಥಾನದಲ್ಲಿ ರಿಷಭ್ ಪಂತ್ ಇದ್ದಾರೆ.

ಮಗಾ ಹರಾಜಿನಲ್ಲಿ ಲಖನೌ ತಂಡ ರಿಷಭ್ ಪಂತ್ ಅವರನ್ನು ದಾಖಲೆಯ 27 ಕೋಟಿ ರೂಪಾಯಿಗಳಿಗೆ ಖರೀದಿಸಿದೆ. ಅಲ್ಲದೆ, ಅವರನ್ನು ನಾಯಕನನ್ನಾಗಿ ನೇಮಿಸಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ಪಂತ್ ನಿರೀಕ್ಷೆಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ. ಬ್ಯಾಟಿಂಗ್ ಮಾಡುವಾಗ ಅವರು ಶೂನ್ಯಕ್ಕೆ ಔಟ್ ಆದರು ಅಲ್ಲದೆ, ವಿಕೆಟ್ ಕೀಪರ್ ಆಗಿ, ಕೊನೆಯ ಓವರ್‌ನಲ್ಲಿ ಮೋಹಿತ್ ಶರ್ಮ ಅವರನ್ನು ಸ್ಟಂಪ್‌ ಮಾಡುವ ಅವಕಾಶವನ್ನು ಕಳೆದುಕೊಂಡರು. ಪಂತ್ ಮೋಹಿತ್‌ ಅವರನ್ನು ಸ್ಟಂಪ್‌ ಮಾಡಿದ್ದರೆ, ಲಖನೌ ಗೆಲ್ಲುತ್ತಿತ್ತು. ಏಕೆಂದರೆ ಅದು ದೆಹಲಿ ತಂಡದ ಕೊನೆಯ ವಿಕೆಟ್ ಆಗಿತ್ತು. ಈಗ ತಂಡ 2ನೇ ಸೋಲು ಅನುಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...