ಹಾಕಿ: ಭಾರತದ ವನಿತೆಯರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ

Date:

ಏಷ್ಯನ್‌ ಚಾಂಪಿಯನ್ಸ್ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಭಾರತದ ಮಹಿಳಾ ಹಾಕಿ ತಂಡ ಜಪಾನ್ ತಂಡವನ್ನು 4-0 ಗೋಲುಗಳಿಂದ ಸೋಲಿಸುವ ಮೂಲಕ ಎರಡನೇ ಬಾರಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ಭಾನುವಾರ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತದ ಮಹಿಳೆಯರ ಹಾಕಿ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಸಂಗೀತಾ ಕುಮಾರಿ (17ನೇ ನಿಮಿಷ), ನೇಹಾ (46ನೇ ನಿಮಿಷ), ಲಾರೆಮ್ಸಿಯಾಮಿ (57ನೇ ನಿಮಿಷ) ಮತ್ತು ವಂದನಾ ಕಟಾರಿಯಾ (60ನೇ ನಿಮಿಷ) ಅವರ ಗೋಲುಗಳ ನೆರವಿನಿಂದ ಪ್ರತಿಷ್ಠಿತ ಪ್ರಶಸ್ತಿಯನ್ನು ಭಾರತ ತಂಡ ತನ್ನದಾಗಿಸಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

17ನೇ ನಿಮಿಷದಲ್ಲಿ ಸಂಗೀತಾ ಅದ್ಭುತ ಗೋಲು ಗಳಿಸಿ ಭಾರತಕ್ಕೆ 1-0 ಮುನ್ನಡೆ ತಂದುಕೊಟ್ಟರು. ಒಂದು ಗೋಲಿನಿಂದ ಹಿಂದೆ ಬಿದ್ದ ಜಪಾನ್ ತನ್ನ ಆಟವನ್ನು ತೀವ್ರಗೊಳಿಸಿ 22ನೇ ನಿಮಿಷದಲ್ಲಿ ಗೋಲು ದಾಖಲಿಸಿತು. ಆದರೆ ಭಾರತೀಯ ನಾಯಕಿ ವಿಡಿಯೋ ರೆಫರಲ್ ತೆಗೆದುಕೊಂಡರು. ಆಗ ರೆಫ್ರಿ ಅವರು ಗೋಲ್ ಫೌಲ್ ಎಂದು ಘೋಷಿಸಿದರು.

ನೇಹಾ 46ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಭಾರತಕ್ಕೆ ಎರಡನೇ ಗೋಲು ತಂದುಕೊಟ್ಟರು. 52ನೇ ನಿಮಿಷದಲ್ಲಿ ಜಪಾನ್‌ಗೆ ಗೋಲು ಗಳಿಸುವ ಅವಕಾಶ ಸಿಕ್ಕಿದರು ಭಾರತದ ಗೋಲ್‌ಕೀಪರ್‌ ಸವಿತಾ ಪುನಿಯಾ ಅವರು ಎದುರಾಳಿ ತಂಡ ಗಳಿಸದಂತೆ ತಡೆಯುವಲ್ಲಿ ಯಶಸ್ವಿಯಾದರು.

ಈ ಸುದ್ದಿ ಓದಿದ್ದೀರಾ? ಅಮಾಯಕ ಕಂದಮ್ಮಗಳು ಸಾಯುತ್ತಿವೆ, ಜಗತ್ತು ಮೌನವಾಗಿದೆ: ಕ್ರಿಕೆಟಿಗ ಇರ್ಫಾನ್ ಪಠಾಣ್ ನೋವಿನ ನುಡಿ

57ನೇ ನಿಮಿಷದಲ್ಲಿ ಭಾರತ ಪೆನಾಲ್ಟಿ ಕಾರ್ನರ್ ಮೂಲಕ ಮೂರನೇ ಗೋಲು ದಾಖಲಿಸಿತು. 60ನೇ ನಿಮಿಷದಲ್ಲಿ ವಂದನಾ ಕಟಾರಿಯಾ ಫೀಲ್ಡ್ ಗೋಲು ಬಾರಿಸಿ ತಂಡಕ್ಕೆ 4-0 ಅಂತರದ ಜಯ ತಂದುಕೊಟ್ಟರು.

ಭಾರತದ ದೀಪ್ ಗ್ರೇಸ್ ಎಕ್ಕಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನಾದರೆ, ಜಾರ್ಖಂಡ್‌ನ ಸಂಗೀತಾ ಕುಮಾರಿ ರೈಸಿಂಗ್ ಸ್ಟಾರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಚಾಂಪಿಯನ್ ಆದ ಭಾರತ ತಂಡದ ಸದಸ್ಯರಿಗೆ ತಲಾ 3 ಲಕ್ಷ ರೂ. ಮತ್ತು ನೆರವು ಸಿಬ್ಬಂದಿಗೆ ತಲಾ  1.5 ರೂ. ಲಕ್ಷ ಬಹುಮಾನವನ್ನು ಭಾರತದ ಹಾಕಿ ಸಂಸ್ಥೆ ಘೋಷಿಸಿದೆ.

ಚೀನಾಗೆ ಕಂಚು

ದಕ್ಷಿಣ ಕೊರಿಯಾ ತಂಡದವರ ಸ್ಫೂರ್ತಿಯುತ ಸವಾಲನ್ನು ಮೀರಿ ನಿಂತ ಚೀನಾ ತಂಡ ಟೂರ್ನಿಯಲ್ಲಿ ಕಂಚು ಜಯಿಸಿತು. ತೀವ್ರ ಪೈಪೋಟಿಯಲ್ಲಿ ಕೊರಿಯಾವನ್ನು 2-1 ಗೋಲುಗಳಿಂದ ಮಣಿಸಿದ ಚೀನಾ, ತೃತೀಯ ಸ್ಥಾನ ಗಳಿಸಿತು.

ಅನಿಲ್‌ ಕುಂಬ್ಳೆ ಶ್ಲಾಘನೆ

ಏಷ್ಯನ್‌ ಚಾಂಪಿಯನ್ಸ್ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಜಪಾನ್‌ ತಂಡವನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ ವನಿತೆಯರ ತಂಡವನ್ನು ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...