IND – ENG 2ND Test | ಟೀಂ ಇಂಡಿಯಾ ವೇಗಿಗಳ ದಾಳಿಗೆ ಆಂಗ್ಲರ 5 ವಿಕೆಟ್‌ ಪತನ; ಫಾಲೋಆನ್‌ ಭೀತಿ

Date:

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ಟಿಂ ಇಂಡಿಯಾ ಪಾನೀಯ ವಿರಾಮದ ವೇಳೆಗೆ ಮೇಲುಗೈ ಸಾಧಿಸಿದೆ. ವೇಗಿ ಸಿರಾಜ್‌ ಸತತ 2 ವಿಕೆಟ್‌ ಪಡೆದ ಪರಿಣಾಮ ಆಂಗ್ಲರು ಮೊದಲ ಇನಿಂಗ್ಸ್‌ನಲ್ಲಿ 33 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 162 ರನ್‌ ಗಳಿಸಿ ಫಾಲೋಆನ್‌ ಭೀತಿಯಲ್ಲಿದೆ.

77 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಮೂರನೇ ದಿನದಾಟ ಶುರು ಮಾಡಿದ ಇಂಗ್ಲೆಂಡ್‌ಗೆ ವೇಗಿ ಮೊಹಮ್ಮದ್ ಸಿರಾಜ್‌ ಆಘಾತ ನೀಡಿದರು. 22 ರನ್‌ ಗಳಿಸಿದ ಜೋ ರೂಟ್‌ 22ನೇ ಓವರ್‌ನಲ್ಲಿ ವಿಕೇಟ್‌ ಕೀಪರ್‌ ಪಂತ್‌ಗೆ ಕ್ಯಾಚ್‌ ನೀಡಿ ಔಟಾದರು. ಇದರ ನಂತರ ಎಸೆತದಲ್ಲೇ ಕ್ರೀಸ್‌ಗೆ ಬಂದ ನಾಯಕ್‌ ಬೆನ್‌ ಸ್ಟೋಕ್ಸ್‌ ಅವರನ್ನು ಸಿರಾಜ್‌ ಶೂನ್ಯಕ್ಕೆ ಪೆವಿಲಿಯನ್‌ಗೆ ಅಟ್ಟಿದರು. ಅರ್ಧ ಶತಕ ಗಳಿಸಿರುವ ಹ್ಯಾರಿ ಬ್ರೂಕ್‌(56) ಹಾಗೂ ವಿಕೇಟ್‌ ಕೀಪರ್‌ ಜೇಮಿ ಸ್ಮಿತ್‌(27) ಮುರಿಯದ 51 ರನ್‌ಗಳ 6 ವಿಕೆಟ್‌ ಜೊತೆಯಾಟದಲ್ಲಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಭಾರತ ಬೃಹತ್ ಮೊತ್ತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಯಕ ಶುಭಮನ್‌ ಗಿಲ್ ದಾಖಲೆಯ ದ್ವಿಶತಕ ಹಾಗೂ ಮಧ್ಯಮ ಕ್ರಮಾಂಕದ ಆಟಗಾರರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ 587 ರನ್‌ಗಳ ಬೃಹತ್‌ ಮೊತ್ತ ಪೇರಿಸಿದೆ.

ಹಲವು ದಾಖಲೆಗಳನ್ನು ಬರೆದ ಶುಭಮನ್‌ ಗಿಲ್

ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್‌ ಇಂಗ್ಲೆಂಡ್ ಬೌಲರ್‌ಗಳನ್ನು ಮನ ಬಂದಂತೆ ಕಾಡಿದರು. ಇವರು ಎಚ್ಚರಿಕೆಯ ಬ್ಯಾಟಿಂಗ್ ಮಾಡಿ 387 ಎಸೆತಗಳಲ್ಲಿ 30 ಬೌಂಡರಿ, 3 ಸಿಕ್ಸರ್ ನೆರವಿನಿಂದ 269 ರನ್ ಬಾರಿಸಿವುದರೊಂದಿಗೆ ಹಲವು ದಾಖಲೆಗಳನ್ನು ಬರೆದರು.

ಇದನ್ನು ಓದಿದ್ದೀರಾ? IND – ENG 2ND Test | ಹಲವು ದಾಖಲೆಗಳೊಂದಿಗೆ ಶುಭಮನ್‌ ಗಿಲ್ ದ್ವಿಶತಕ: ಇಂಗ್ಲೆಂಡ್‌ಗೆ ಆರಂಭಿಕ ಆಘಾತ

ಭಾರತದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ 24ನೇ ಆಟಗಾರ ಎಂಬ ಹೆಗ್ಗಳಿಕೆಗೆ ಶುಭಮನ್‌ ಗಿಲ್ ಪಾತ್ರರಾಗಿದ್ದಾರೆ. ಅಲ್ಲದೆ ಇಂಗ್ಲೆಂಡ್‌ ನೆಲದಲ್ಲಿ ಅತಿ ಹೆಚ್ಚು ರನ್‌ ಕಲೆ ಹಾಕಿದ ಟೀಮ್ ಇಂಡಿಯಾದ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಸುನಿಲ್ ಗವಾಸ್ಕರ್‌ ಹೆಸರಿನಲ್ಲಿತ್ತು. ಇವರು 1979ರಲ್ಲಿ 221 ರನ್ ಬಾರಿಸಿದ್ದರು.

ಇಂಗ್ಲೆಂಡ್‌ ನೆಲದಲ್ಲಿ ದ್ವಿಶತಕ ಬಾರಿಸಿದ ಮೊದಲ ಏಷ್ಯಾದ ಬ್ಯಾಟರ್‌ ಎಂಬ ಹಿರಿಮೆ ಸಹ ಇವರದ್ದಾಗಿದೆ. ಇದಕ್ಕೂ ಮೊದಲು ಇಂಗ್ಲೆಂಡ್‌ನಲ್ಲಿ ಸಚಿನ್‌ ತೆಂಡೂಲ್ಕರ್ ಬಾರಿಸಿದ 193 ರನ್‌ ಗರಿಷ್ಠವಾಗಿತ್ತು.

ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ 250ಕ್ಕೂ ಹೆಚ್ಚು ರನ್‌ ಬಾರಿಸಿದ ಭಾರತದ ಆರನೇ ಆಟಗಾರ ಎಂಬ ಹಿರಿಮೆ ಹೊಂದಿದ್ದಾರೆ. ಇದಕ್ಕೂ ಮೊದಲು, ವೀರೇಂದ್ರ ಸೆಹ್ವಾಗ್ ಒಟ್ಟು 4 ಬಾರಿ, ಆದರೆ ವಿವಿಎಸ್ ಲಕ್ಷ್ಮಣ್, ರಾಹುಲ್ ದ್ರಾವಿಡ್, ಕರುಣ್ ನಾಯರ್ ಮತ್ತು ವಿರಾಟ್ ಕೊಹ್ಲಿ ತಲಾ ಒಮ್ಮೆ ಈ ಸಾಧನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...