IND – ENG 3RD TEST | ಬುಮ್ರಾ ಮಾರಕ ದಾಳಿ; ಆಂಗ್ಲರ 7 ವಿಕೆಟ್ ಪತನ, ರೂಟ್‌ ಶತಕ

Date:

ಟೀಂ ಇಂಡಿಯಾದ ಸ್ಟಾರ್‌ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಮಾರಕ ದಾಳಿಯಿಂದಾಗಿ ಇಂಗ್ಲೆಂಡ್‌ ತಂಡ 7 ವಿಕೆಟ್‌ ಕಳೆದುಕೊಂಡಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ ಎರಡನೇ ದಿನವಾದ ಇಂದು 251/4 ರನ್‌ಗಳೊಂದಿಗೆ ಆಟ ಆರಂಭಿಸಿದ ಅತಿಥೇಯ ಆಟಗಾರರು ಆರಂಭದಲ್ಲೇ ಮುಗ್ಗರಿಸಿದರು.

ಅನುಭವಿ ಆಟಗಾರ ಜೋ ರೂಟ್‌(104) ಆರಂಭದಲ್ಲೇ ಶತಕ ಗಳಿಸಿದರು. ನಂತರ ನಾಯಕ ಬೆನ್‌ ಸ್ಟೋಕ್ಸ್‌ (44) ಅವರನ್ನು ಬುಮ್ರಾ ಬೌಲ್ಡ್‌ ಮಾಡುವ ಮೂಲಕ ಪೆವಿಲಿಯನ್‌ಗೆ ಅಟ್ಟಿದರು. ನಂತರದಲ್ಲಿ 87ನೇ ಓವರ್‌ನ ಸತತ ಎರಡು ಚೆಂಡುಗಳಲ್ಲಿ ರೂಟ್‌ ಹಾಗೂ ಕ್ರಿಸ್‌ ವೋಕ್ಸ್‌ ಅವರನ್ನು ಔಟ್‌ ಮಾಡಿದರು. ಪಾನೀಯ ವಿರಾಮದ ವೇಳೆಗೆ ಇಂಗ್ಲೆಂಡ್‌ 94 ಓವರ್‌ಗಳಲ್ಲಿ7 ವಿಕೆಟ್‌ ನಷ್ಟಕ್ಕೆ 307 ರನ್‌ ಗಳಿಸಿತ್ತು. ವಿಕೆಟ್‌ ಕೀಪರ್‌ ಜೇಮ್‌ ಸ್ಮಿತ್(33) ಹಾಗೂ ಬ್ರೆಡೊನ್ ಕರ್ಸ್‌ (11) ಕ್ರೀಸ್‌ನಲ್ಲಿದ್ದರು.

ಮೊದಲ ದಿನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಬೆನ್‌ ಸ್ಟೋಕ್ಸ್‌ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಇವರ ವಿಶ್ವಾಸಕ್ಕೆ ಪ್ರತಿಯಾಗಿ ಇಂಗ್ಲೆಂಡ್‌ ಆರಂಭಿಕರು ಭರ್ಜರಿ ಆರಂಭ ನೀಡುವ ಸೂಚನೆ ನೀಡಿದರು. ಈ ವೇಳೆ ಆರಂಭಿಕ ಬೆನ್ ಡಕೆಟ್‌ (23), ನಿತೀಶ್‌ ಕುಮಾರ್‌ ಎಸೆದ ಔಟ್ ಬ್ಯಾಕ್ ಆಫ್‌ ಲೆಂಥ್ ಬಾಲನ್ನು ಕೆಣಕಿ ವಿಕೆಟ್‌ ಕೀಪರ್‌ಗೆ ಕ್ಯಾಚ್ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಕ್ ಕ್ರಾಲಿ ಸಹ ಇದೇ ಓವರ್‌ನ ಕೊನೆಯ ಎಸೆತದಲ್ಲಿ 18 ರನ್‌ ಬಾರಿಸಿದಾಗ ನಿತೀಶ್‌ ತೋಡಿದ ಖೆಡ್ಡಾಗೆ ಬಲಿಯಾದರು. ಇಂಗ್ಲೆಂಡ್‌ 44 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಭರವಸೆಯ ಆಟಗಾರರಾದ ಒಲಿ ಪೋಪ್ ಹಾಗೂ ಜೋ ರೂಟ್ ಆಧಾರವಾದರು. ಈ ಜೋಡಿ ವಿಕೆಟ್‌ ಬೀಳದಂತೆ ಕಾಯ್ದುಕೊಂಡು ಬ್ಯಾಟ್ ಮಾಡುವಲ್ಲಿ ಸಫಲವಾಯಿತು.ಟೀಮ್ ಇಂಡಿಯಾ ಹಾಕಿಕೊಂಡ ತಂತ್ರವನ್ನು ಮೆಟ್ಟಿ ನಿಂತು ಬ್ಯಾಟ್ ಮಾಡಿ ರನ್‌ಗಳನ್ನು ಕಲೆ ಹಾಕಿತು.

ಇದನ್ನು ಓದಿದ್ದೀರಾ? IND vs ENG T20 | ಸರಣಿ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದ ಭಾರತದ ವನಿತೆಯರು

ಶತಕದ ಜೊತೆಯಾಟ 3ನೇ ವಿಕೆಟ್‌ಗೆ ಒಲಿ ಪೋಪ್‌ ಹಾಗೂ ಜೋ ರೂಟ್ ಜೋಡಿ 211 ಎಸೆತಗಳಲ್ಲಿ 109 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಪೋಪ್‌ 44 ರನ್‌ ಬಾರಿಸಿದ್ದಾಗ ರವೀಂದ್ರ ಜಡೇಜಾ ಅವರ ಸ್ಪಿನ್ ಬೌಲಿಂಗ್ ಗುರುತಿಸುವಲ್ಲಿ ವಿಫಲರಾಗಿ ವಿಕೆಟ್‌ ಕೀಪರ್‌ಗೆ ಕ್ಯಾಚ್ ನೀಡಿದರು. ಮಧ್ಯಮ ಕ್ರಮಾಂಕದ ಭರವಸೆಯ ಬ್ಯಾಟರ್‌ ಹ್ಯಾರಿ ಬ್ರೂಕ್‌ (11 ರನ್‌) ಜಸ್ಪ್ರೀತ್ ಬುಮ್ರಾಗೆ ವಿಕೆಟ್‌ ಒಪ್ಪಿಸಿದರು.

ಭಾರತದ ವಿರುದ್ಧ ರೂಟ್ ದಾಖಲೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್‌ ತಮ್ಮ ಕ್ಲಾಸಿಕ್ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಇವರು ಗುರುವಾರ ನಡೆದ ಪಂದ್ಯದಲ್ಲಿ 45 ರನ್‌ ಬಾರಿಸುತ್ತಿದ್ದಂತೆ ಹೊಸ ದಾಖಲೆ ಬರೆದರು. ಈ ಮೂಲಕ ಇವರು ಭಾರತದ ವಿರುದ್ಧ ಟೆಸ್ಟ್‌ ಕ್ರಿಕೆಟ್‌ನಲ್ಲಿ 3000 ರನ್‌ಗಳನ್ನು ಕಲೆ ಹಾಕಿದ ದಾಖಲೆ ಬರೆದಿದ್ದಾರೆ. ಇದಕ್ಕೂ ಮೊದಲು ಈ ಸಾಧನೆಯನ್ನು ಯಾವೊಬ್ಬ ಬ್ಯಾಟರ್‌ ಮಾಡಿರಲಿಲ್ಲ. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಟೀಮ್ ಇಂಡಿಯಾ ವಿರುದ್ಧ 2555 ಟೆಸ್ಟ್ ರನ್ ಬಾರಿಸಿದ್ದು, ಎರಡನೇ ಸ್ಥಾನದಲ್ಲಿದ್ದಾರೆ.

172 ರನ್‌ಗಳಿಗೆ 4 ವಿಕೆಟ್‌ಗಳು ಬಿದ್ದಾಗ ಕ್ರೀಸ್‌ಗೆ ಬಂದವರೇ ಬೆನ್‌ ಸ್ಟೋಕ್ಸ್‌. ಇವರು, ಭರವಸೆಯ ಆಟಗಾರ ಜೋ ರೂಟ್‌ ಅವರೊಂದಿಗೆ ಇನಿಂಗ್ಸ್‌ ಬೆಳೆಸುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಈ ಜೋಡಿ 170 ಎಸೆತಗಳಲ್ಲಿ ಅಜೇಯ 79 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು.

ಟೀಮ್ ಇಂಡಿಯಾದ ಪರ ಜಸ್ಪ್ರೀತ್ ಬುಮ್ರಾ 4, ನಿತೀಶ್ ಕುಮಾರ್ ರೆಡ್ಡಿ 2, ರವೀಂದ್ರ ಜಡೇಜಾ ಒಂದು ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...